Skill Development Corporation Scam

ಕೌಶಲ ಅಭಿವೃದ್ಧಿ ನಿಗಮ ಹಗರಣ: ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು ಮಂಜೂರು
ಕೌಶಲ್ಯಾಭಿವೃದ್ಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಇಂದು(ನ.20) ಸಾಮಾನ್ಯ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ನಾಯ್ಡು ಅವರಿಗೆ ನವೆಂಬರ್ 28 ರವರೆಗೆ ಮಧ್ಯಂತರ ಜಾಮೀನು ನೀಡಲಾಗಿತ್ತು.

ಚಂದ್ರಬಾಬು ನಾಯ್ಡು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎಸ್‌ವಿಎನ್ ಭಟ್ಟಿ
ಕೌಶಲ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತಮ್ಮ ವಿರುದ್ಧದ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎಸ್‌ವಿಎನ್ ಭಟ್ಟಿ ಬುಧವಾರ ಹಿಂದೆ ಸರಿಸಿದ್ದಾರೆ.

ಚಂದ್ರಬಾಬು ನಾಯ್ಡುಗೆ ಬಿಗ್ ರಿಲೀಫ್: ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಆಂಧ್ರ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ
ಬಹುಕೋಟಿ ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ ನಾಯಕ ಎನ್ ಚಂದ್ರಬಾಬು ನಾಯ್ಡು ವಿರುದ್ಧದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಆಂಧ್ರಪ್ರದೇಶ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ.

