ರಾಜ್ಯಬೆಂಗಳೂರಿನ ಸಂಚಾರ ದಟ್ಟಣೆಗೆ ಸ್ಕೈಬಸ್ ಪ್ರಸ್ತಾವನೆ ಮುಂದಿಟ್ಟ ಕೇಂದ್ರ ಸಚಿವ ನಿತಿನ್ ಗಡ್ಕರಿ: 3 ತಿಂಗಳಲ್ಲಿ ಯೋಜನಾ ವರದಿ
ಐಟಿ ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಅಧ್ಯಯನ ಮಾಡಲು ಮತ್ತು ಸ್ಕೈ ಬಸ್ ಅಥವಾ ಟ್ರಾಲಿ ಬಸ್ ಕಾರ್ಯಾಚರಣೆಯನ್ನು ಅನುಷ್ಠಾನಗೊಳಿಸುವ ಕಾರ್ಯಸಾಧ್ಯತೆಯ ಬಗ್ಗೆ ಮೂರು ತಿಂಗಳಲ್ಲಿ ಪ್ರಾಥಮಿಕ ವರದಿಯನ್ನು ಸಲ್ಲಿಸಲು ಅಂತರರಾಷ್ಟ್ರೀಯ ಸಲಹೆಗಾರರ ಅಭಿಪ್ರಾಯ ಪಡೆಯಲಾಗುವುದು ಎಂದು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.