ರಾಜ್ಯಸರ್ಕಾರಿ ಡಿಗ್ರಿ ಕಾಲೇಜುಗಳಲ್ಲಿ 8500 ಸ್ಮಾರ್ಟ್ ಕ್ಲಾಸ್ ರೂಂ: ಡಿಸಿಎಂ ಅಶ್ವತ್ಥ್ ನಾರಾಯಣ್
ಉನ್ನತ ಶಿಕ್ಷಣದಲ್ಲಿ ಡಿಜಿಟಲ್ ಕಲಿಕೆಗೆ ಒತ್ತು ನೀಡಲು ಸರ್ಕಾರಿ ಪದವಿ ಕಾಲೇಜುಗಳಲ್ಲಿ 8500 ಸ್ಮಾರ್ಟ್ ಕ್ಲಾಸ್ ರೂಂಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಈಘಾಗಲೇ 2500 ಕ್ಲಾಸ್ ರೂಂಗಳ ಅಭಿವೃದ್ಧಿ ಕಾರ್ಯ ಪೂರ್ಣಗೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರು ಶನಿವಾರ ಹೇಳಿದ್ದಾರೆ.