ರಾಜಕೀಯಸಂವಿಧಾನ ಪ್ರತಿಯ ಪ್ರಸ್ತಾವನೆಯಿಂದ ಜಾತ್ಯತೀತ, ಸಮಾಜವಾದಿ ಪದ ನಾಪತ್ತೆ, ಬಿಜೆಪಿ ಅಸಹನೆಗೆ ಸಾಕ್ಷಿ: ಸಿಎಂ ಸಿದ್ದರಾಮಯ್ಯ
ನೂತನ ಸಂಸತ್ ಭವನದ ಪ್ರವೇಶದ ನೆನಪಿಗಾಗಿ ಸಂಸದರಿಗೆ ಕೇಂದ್ರ ಸರ್ಕಾರ ನೀಡಿರುವ ಸಂವಿಧಾನದ ಪ್ರತಿಯ ಪ್ರಸ್ತಾವನೆಯಿಂದ ಜಾತ್ಯತೀತ ಮತ್ತು ಸಮಾಜವಾದ ಪದಗಳನ್ನು ಕಿತ್ತು ಹಾಕಿರುವುದು ಬಿಜೆಪಿ ಪಕ್ಷದ ಅಂತರಂಗದಲ್ಲಿ ಸಂವಿಧಾನದ ಬಗ್ಗೆ ಇರುವ ಅಸಹನೆಗೆ ಸಾಕ್ಷಿಯಾಗಿದ್ದು, ಇದು ಅತ್ಯಂತ ಖಂಡನೀಯ ಕೃತ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.