soldier

ಕ್ಯಾಪ್ಟನ್ ಎಂವಿ ಪ್ರಾಂಜಲ್ ಹುತಾತ್ಮ: ನಂದನವನದಲ್ಲಿ ನೀರವ ಮೌನ; ಇಂದು ಸಂಜೆ ಬೆಂಗಳೂರಿಗೆ ಪಾರ್ಥೀವ ಶರೀರ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಹುತಾತ್ಮನಾದ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಅವರು ಹುತಾತ್ಮರಾಗಿದ್ದು, ಈ ನಡುವಲ್ಲೇ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ನಂದನವನದಲ್ಲಿರುವ ಅವರ ನಿವಾಸದಲ್ಲಿ ನೀರವ ಮೌನ ಆವರಿಸಿದೆ.

ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಆರೋಪದ ಮೇಲೆ ಯೋಧನ ಬಂಧನ!
ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ತನ್ನ ಪತ್ನಿಯನ್ನು ಕೊಂದ ಆರೋಪದ ಮೇಲೆ ಯೋಧನನ್ನು ಭಾನುವಾರ ಬಂಧಿಸಲಾಗಿದೆ. ಶನಿವಾರ ಬೆಳಗ್ಗೆ ಕುಂಡೆ ಚಕ್ ಮರ್ಹೀನ್ ಗ್ರಾಮದ ಮನೆಯಲ್ಲಿ ಪತ್ನಿ ಸರಬ್ಜೀತ್ ಕೌರ್ ಅವರನ್ನು ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ. ನಂತರ ಯೋಧ ಭೋಪಿಂದರ್ ಸಿಂಗ್ ಅವರನ್ನು ಬಂಧಿಸಲಾಗಿದೆ.

ಹಣಕಾಸಿನ ವಿಚಾರವಾಗಿ ಯೋಧರಿಬ್ಬರ ನಡುವೆ ಜಗಳ: ಗುಂಡಿನ ದಾಳಿ, ಓರ್ವ ಯೋಧನಿಗೆ ತೀವ್ರ ಗಾಯ
ಗಣೇಶ ಹಬ್ಬ ಆಚರಿಸಲು ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರಿಬ್ಬರ ನಡುವೆ ಹಣಕಾಸಿನ ವಿಚಾರವಾಗಿ ಜಗಳ ನಡೆದು, ಒಬ್ಬಾತ ಮತ್ತೊಬ್ಬನ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ್ದರಿಂದ ಆತ ತೀವ್ರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ಗೋಕಾಕ್ ತಾಲೂಕಿನ ರಾಜನಕಟ್ಟಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.

ಜಮ್ಮು ಮತ್ತು ಕಾಶ್ಮೀರ: ಆಕಸ್ಮಿಕವಾಗಿ ಬಂದೂಕು ಸಿಡಿದು ಸೇನಾ ಯೋಧ ಹುತಾತ್ಮ, ಆರೋಪಿ ಸಹೋದ್ಯೋಗಿ ಬಂಧನ
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ತಮ್ಮ ಸಹೋದ್ಯೋಗಿ ಆಕಸ್ಮಿಕವಾಗಿ ಬಂದೂಕನ್ನು ಒತ್ತಿದ್ದರಿಂದ ಓರ್ವ ಸೇನಾ ಯೋಧ ಮೃತಪಟ್ಟು, ಮತ್ತೊಬ್ಬ ಯೋಧ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಉಗ್ರರ ವಿರುದ್ಧ ಕೊನೆಯವರೆಗೂ ಹೋರಾಡಿ ಯೋಧ ಹುತಾತ್ಮ: ಮೂರು ತಲೆಮಾರುಗಳಿಂದಲೂ ಭಾರತೀಯ ಸೇನೆಯಲ್ಲಿ ಸೇವೆ!
ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಬುಧವಾರ ಭಾರತೀಯ ಸೇನೆಯ ಮೂವರು ಹಿರಿಯ ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಇದರಲ್ಲಿ ಕರ್ನಲ್ ಮನ್ಪ್ರೀತ್ ಸಿಂಗ್ ಕೂಡ ಒಬ್ಬರಾಗಿದ್ದಾರೆ,

ಬೆಳಗಾವಿ: ಮದುವೆ ಖುಷಿಯಲ್ಲಿ ಊರಿಗೆ ಬರುತ್ತಿದ್ದ ಯೋಧ ರೈಲಿನಿಂದ ಕಾಲು ಜಾರಿ ಬಿದ್ದು ದುರ್ಮರಣ!
ಇನ್ನು ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯೋಧನೊಬ್ಬ ರೈಲಿನಿಂದ ಕಾಲು ಜಾರಿ ಬಿದ್ದು, ಮಸಣದ ಹಾದಿ ತುಳಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಮದುವೆಗೆ ಸಿದ್ಧತೆ....! ಹುತಾತ್ಮ ಯೋಧನ ಕುಟುಂಬಸ್ಥರ ಕನಸು ಈಗ ನುಚ್ಚು ನೂರು!
ಪಂಜಾಬ್‍ನ ಬಟಿಂಡಾ ಸೇನಾ ನೆಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಯೋಧರಷ್ಟೇ ಅಸುನೀಗಿಲ್ಲ, ಅವರ ಕುಟುಂಬ ಸದಸ್ಯರ ಕನಸುಗಳೂ ಕೂಡ ನುಚ್ಚು ನೂರಾಗಿದೆ.

ಬಟಿಂಡಾದಲ್ಲಿ ಮತ್ತೊರ್ವ ಸೈನಿಕ ಸಾವು, ನಿನ್ನೆಯ ಗುಂಡಿನ ದಾಳಿಗೆ ಸಂಬಂಧಿಸಿದ್ದಲ್ಲ ಎಂದ ಸೇನಾಪಡೆ
ಬಟಿಂಡಾದಲ್ಲಿ ಮತ್ತೊರ್ವ ಸೈನಿಕ ಸಾವುನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಯೋಧನೊಬ್ಬ ಗುಂಡೇಟಿನ ಗಾಯದಿಂದ ಸಾವನ್ನಪ್ಪಿದ್ದಾನೆ ಎಂದು ಸೇನೆ ತಿಳಿಸಿದೆ.

ಯೋಧನಿಂದ ಅಲ್ ಜಜೀರಾ ಪತ್ರಕರ್ತೆಯ ಮೇಲೆ ಗುಂಡಿನ ದಾಳಿ ಸಾಧ್ಯತೆ ಒಪ್ಪಿಕೊಂಡ ಇಸ್ರೇಲ್
ಅಲ್ ಜಜೀರಾ ಪತ್ರಕರ್ತೆಯ ಮೇಲೆ ತನ್ನ ಯೋಧರು ಗುಂಡಿನ ದಾಳಿ ನಡೆಸಿರುವ ಸಾಧ್ಯತೆಯನ್ನು ಇಸ್ರೇಲ್ ಸೇನೆ ಒಪ್ಪಿಕೊಂಡಿದೆ.

