ರಾಜ್ಯಜೀವ ಬೆದರಿಕೆ-ವಂಚನೆ ಪ್ರಕರಣ: ಕೇಂದ್ರ ಸಚಿವ ಸೋಮಣ್ಣ ಪುತ್ರ ಅರುಣ್ ಸೇರಿ ಮೂವರಿಗೆ ನಿರೀಕ್ಷಣಾ ಜಾಮೀನು ಮಂಜೂರು
ಉದ್ಯಮದಲ್ಲಿ ವಂಚಿಸಿ, ಜೀವ ಬೆದರಿಕೆ ಹಾಕಿದ ಆರೋಪ ಸಂಬಂಧಿತ ಪ್ರಕರಣದಲ್ಲಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ ಸೋಮಣ್ಣ ಪುತ್ರ ಡಾ. ಬಿ ಎಸ್ ಅರುಣ್ ಸೇರಿದಂತೆ ಮೂವರಿಗೆ ಬೆಂಗಳೂರಿನ ಸತ್ರ ನ್ಯಾಯಾಲಯ ಶನಿವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.