Sonam Wangchuk

Sonam Wangchuk ಬೆಂಬಲಕ್ಕೆ ನಿಂತ ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ!
"ಇದು ತಪ್ಪು ಮತ್ತು ದೇಶದ ಜನರನ್ನು ಸತ್ಯದಿಂದ ದೂರವಿಡುವ ಉದ್ದೇಶ ಹೊಂದಿದೆ" ಎಂದು ಮೂರು ಬಾರಿ ಕಣಿವೆ ರಾಜ್ಯದ ಮುಖ್ಯಮಂತ್ರಿಯಾಗಿರುವ ಮತ್ತು ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಹೇಳಿದ್ದಾರೆ.

ಕೇಂದ್ರದಿಂದ 'ಬಲಿಪಶು ಮಾಡುವ ತಂತ್ರ'; ಆದ್ರೆ ನಿಜವಾದ ಸಮಸ್ಯೆ ನಿರುದ್ಯೋಗ: Sonam Wangchuk ಕಿಡಿ
"ಅವರು ನನ್ನನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿಯಲ್ಲಿ ಎರಡು ವರ್ಷಗಳ ಕಾಲ ಜೈಲಿಗೆ ಹಾಕಲು ಯೋಜಿಸುತ್ತಿದ್ದಾರೆ. "ನಾನು ಅದಕ್ಕೆ ಸಿದ್ಧನಿದ್ದೇನೆ. ಆದರೆ ನನ್ನ ಜೈಲು ಶಿಕ್ಷೆಯು ಸರ್ಕಾರಕ್ಕೆ ಮತ್ತಷ್ಟು ಸಮಸ್ಯೆಗಳನ್ನು ಉಂಟುಮಾಡಬಹುದು".

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಉಲ್ಲಂಘನೆ: Sonam Wangchuk ಸಂಸ್ಥೆ ಪರವಾನಗಿ ರದ್ದುಪಡಿಸಿದ ಕೇಂದ್ರ ಸರ್ಕಾರ
ಸೋನಮ್ ವಾಂಗ್ಚುಕ್ ಸ್ಥಾಪಿಸಿರುವ ಎಚ್‌ಐಎಲ್ ಮತ್ತು SECMOL ಸಂಸ್ಥೆಯು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯನ್ನು (ಎಫ್‌ಸಿಆರ್‌ಎ) ಉಲ್ಲಂಘಿಸಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ನಡೆಸುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.

ಲಡಾಖ್ ಕಾರ್ಯಕರ್ತ Sonam Wangchuk ಸಂಸ್ಥೆಯ ವಿರುದ್ಧ FCRA ಉಲ್ಲಂಘನೆ ಆರೋಪ: ಸಿಬಿಐ ತನಿಖೆ
ಸ್ವಲ್ಪ ಸಮಯದಿಂದ ವಿಚಾರಣೆ ನಡೆಯುತ್ತಿದೆ ಆದರೆ ಇನ್ನೂ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Ladakh violence: ಸೋನಮ್ ವಾಂಗ್‌ಚುಕ್ ಪ್ರಚೋದನಕಾರಿ ಹೇಳಿಕೆಗಳೇ ಕಾರಣ- ಕೇಂದ್ರ ಸರ್ಕಾರ
ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು 6ನೇ ಪರಿಚ್ಛೇದ ಅಡಿ ಸೇರಿಸಲು ಒತ್ತಾಯಿಸಿ ದಿಢೀರ್ ಅಂತಾ ನಡೆದ ಪ್ರತಿಭಟನೆಗಳು ಹಿಂಸೆಯ ಸ್ವರೂಪ ತಾಳಿದೆ.

Watch | ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಹೋರಾಟ: ಬಿಜೆಪಿ ಕಚೇರಿಗೆ ಬೆಂಕಿ
ಲಡಾಖ್ ಬಿಜೆಪಿ ಕಚೇರಿಗೆ ಬೆಂಕಿ; ಹಿಂಸಾಚಾರದ ನಂತರ ಮುಷ್ಕರ ಹಿಂಪಡೆ ಸೋನಮ್ ವಾಂಗ್‌ಚುಕ್
ಇಂದು ನೂರಾರು ಜನ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಲೇಹ್ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ಸಹ ನಡೆಸಿದರು.

ಡಿಸೆಂಬರ್‌ನಲ್ಲಿ ಮಾತುಕತೆಗೆ ಕೇಂದ್ರ ಗೃಹ ಸಚಿವಾಲಯ ಒಪ್ಪಿಗೆ: ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯ!
ಲಡಾಖ್ ನ್ನು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ತಮ್ಮ ಬೆಂಬಲಿಗರೊಂದಿಗೆ ಲೇಹ್ ನಿಂದ ದೆಹಲಿಗೆ ಪಾದಯಾತ್ರೆ ನಡೆಸಿದ್ದ ಸೋನಮ್ ವಾಂಗ್ಚುಕ್, ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ದೆಹಲಿಯಲ್ಲಿ ಪ್ರತಿಭಟನೆ: ವಾಂಗ್ಚುಕ್ ಸೇರಿ 20 ಮಂದಿ ವಶಕ್ಕೆ!
20-25 ಮಂದಿ ಪ್ರತಿಭಟನಾ ನಿರತರು ವಾಂಗ್ಚುಕ್ ಜೊತೆ ನಿರಶನ ಕೈಗೊಂಡಿದ್ದರು. ಅವರನ್ನು ಲಡಾಖ್ ಭವನದ ಬಳಿ ವಶಕ್ಕೆ ಪಡೆಯಲಾಗಿದ್ದು ಮಂದಿರ್ ಮಾರ್ಗ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

