Sonia Gandhi

ನಿಮಗೆ ನಮ್ಮ ಬೆಂಬಲವಿದೆ: ರಾಜ್ಯಸಭೆಯಿಂದ ಅಮಾನತುಗೊಂಡಿರುವ ಎಎಪಿಯ ಸಂಜಯ್ ಸಿಂಗ್‌ಗೆ ಸೋನಿಯಾ ಗಾಂಧಿ
'ಅಶಿಸ್ತಿನ ವರ್ತನೆಗಾಗಿ' ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಂಡಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರಿಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, 'ನಿಮಗೆ ತಮ್ಮ ಪಕ್ಷದ ಬೆಂಬಲವಿದೆ' ಎಂದು ಬುಧವಾರ ಹೇಳಿದ್ದಾರೆ.

ಚುನಾವಣಾ ರಾಜಕೀಯಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಗುಡ್‌ಬೈ: ಕರ್ನಾಟಕದಿಂದಲೇ ರಾಜ್ಯಸಭೆಗೆ?
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಕರ್ನಾಟಕದಲ್ಲಿ ಮುಂದಿನ ಎಂಟು ತಿಂಗಳಲ್ಲಿ ಚುನಾವಣೆ ನಡೆಯಬೇಕಿದೆ. ಈ ಬಾರಿ ಮೇಲ್ಮನೆಗೆ ರಾಜ್ಯದಿಂದ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡಲು ಕಾಂಗ್ರೆಸ್ ಬಯಸಿದೆ ಎನ್ನಲಾಗುತ್ತಿದೆ.

ಪ್ರಧಾನಿ ಮೋದಿಯೊಂದಿಗೆ ಸೋನಿಯಾ ಗಾಂಧಿ ಮಾತುಕತೆ: ಸಂಸತ್ತಿನಲ್ಲಿ ಮಣಿಪುರ ಪರಿಸ್ಥಿತಿ ಕುರಿತ ಚರ್ಚೆಗೆ ಒತ್ತಾಯ
ಮಣಿಪುರದ ಪರಿಸ್ಥಿತಿಯ ಬಗ್ಗೆ ಸದನದಲ್ಲಿ ಚರ್ಚಿಸುವಂತೆ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರುವಾರ ಒತ್ತಾಯಿಸಿದ್ದಾರೆ ಎಂದು ಲೋಕಸಭೆಯಲ್ಲಿನ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಸೋನಿಯಾ ಗಾಂಧಿ ಮುಖಾಮುಖಿ; ಕೆಲಕಾಲ ಮಾತುಕತೆ
ಮುಂಗಾರು ಅಧಿವೇಶನದ ಮೊದಲ ದಿನವಾದ ಗುರುವಾರ ಲೋಕಸಭೆಯ ಸಭಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮುಖಾಮುಖಿಯಾದರು. ಈ ವೇಳೆ ಅವರು ಕೆಲಕಾಲ ಮಾತುಕತೆ ನಡೆಸಿದರು.

ನಾನು ಮನಷ್ಯನಲ್ವ ಮಾರಾಯ್ರೆ, ಊಟಕ್ಕೆ ಕರೆದಿದ್ರೂ ಹೋಗಿದ್ದೆ: ಶಿಷ್ಟಾಚಾರ ಉಲ್ಲಂಘನೆ ಆರೋಪಕ್ಕೆ ಖಾದರ್ ಪ್ರತಿಕ್ರಿಯೆ!
ಬೆಂಗಳೂರಿನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಮಹಾಘಟಬಂಧನ್ ಶಕ್ತಿಪ್ರದರ್ಶನ ನಡೆಯಿತು. ಇದರ ಭಾಗವಾಗಿ ಸೋನಿಯಾ ಗಾಂಧಿ ಡಿನ್ನರ್ ಪಾರ್ಟಿಗೆ ಸ್ಪೀಕರ್ ಯು.ಟಿ ಖಾದರ್ ಹೋಗಿದ್ದರು.

ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ವಿಮಾನ ತುರ್ತು ಭೂಸ್ಪರ್ಶ!
ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಭೋಪಾಲ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹವಾಮಾನ ವೈಪರೀತ್ಯದಿಂದಾಗಿ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.

ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ನಡೆಯತ್ತ ಎಲ್ಲರ ಚಿತ್ತ!
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸಮ್ಮುಖದಲ್ಲಿ ಕೆಲವು ಮಹತ್ವದ ನಿರ್ಧಾರಗಳು ಹೊರಬೀಳುವ ನಿರೀಕ್ಷೆಯಿದೆ.

ಪ್ರತಿಪಕ್ಷಗಳ ಸಭೆ: ಒಗ್ಗಟ್ಟು ಪ್ರದರ್ಶಿಸಲು 24 ಪಕ್ಷಗಳ ನಾಯಕರು ಬೆಂಗಳೂರಿಗೆ ಆಗಮನ- Photos
ಕಾಂಗ್ರೆಸ್ ಕರೆದಿರುವ ಎರಡನೇ ಏಕತಾ ಸಭೆಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ.

ಪ್ರತಿಪಕ್ಷಗಳ 2ನೇ ಸಭೆ: ಬೆಂಗಳೂರಿಗೆ ಸೋನಿಯಾ, ರಾಹುಲ್, ಮಮತಾ, ಅಖಿಲೇಶ್ ಯಾದವ್ ಆಗಮನ
ಬೆಂಗಳೂರಿನಲ್ಲಿ ಕಾಂಗ್ರೆಸ್ ಕರೆದಿರುವ ಎರಡನೇ ಏಕತಾ ಸಭೆಗೆ 24 ವಿರೋಧ ಪಕ್ಷಗಳ ನಾಯಕರಿಗೆ ಆಹ್ವಾನ ನೀಡಲಾಗಿದ್ದು, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ...

