Sonia Gandhi

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೆ ಕೊರೋನಾ ಪಾಸಿಟಿವ್
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಮತ್ತೆ ಕೋವಿಡ್ ಪಾಸಿಟಿವ್ ಬಂದಿದೆ. ಸರ್ಕಾರದ ಕೊರೋನಾ ಶಿಷ್ಟಾಚಾರ ಪ್ರಕಾರ ಅವರು ಹೋಂ ಐಸೊಲೇಷನ್ ಗೆ ಒಳಗಾಗಲಿದ್ದಾರೆ ಎಂದು ಪಕ್ಷದ ಸಂಸದ ಹಾಗೂ ಸಂವಹನ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಟ್ವೀಟ್ ಮಾಡಿದ್ದಾರೆ.

'ರಾಷ್ಟ್ರಪತ್ನಿ' ವಿವಾದ: ಅಧೀರ್ ರಂಜನ್ ಗೆ ಮಹಿಳಾ ಆಯೋಗ ನೋಟಿಸ್, ಕ್ರಮಕೈಗೊಳ್ಳುವಂತೆ ಸೋನಿಯಾಗೂ ಪತ್ರ
ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿಗೆ ಮಹಿಳಾ ಆಯೋಗ ನೋಟಿಸ್ ನೀಡಿದ್ದು ಇದರ ಜೊತೆಗೆ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಸೋನಿಯಾ ಗಾಂಧಿಗೂ ಪತ್ರ ಬರೆಯಲಾಗಿದೆ.

'ನನ್ನೊಂದಿಗೆ ಮಾತನಾಡಬೇಡಿ': ಸ್ಮೃತಿ ಇರಾನಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿರುಗೇಟು!
ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು 'ರಾಷ್ಟ್ರಪತ್ನಿ' ಎಂದು ಕರೆದಿದ್ದಕ್ಕಾಗಿ ಇಂದು ಸಂಸತ್ತಿನಲ್ಲಿ ನಾಟಕೀಯ ಬೆಳವಣಿಗೆಗಳು ನಡೆದವು.

'ರಾಣಿ ಅಥವಾ ಯುವರಾಜ' ಕಾನೂನಿಗಿಂತ ಯಾರೂ ದೊಡ್ಡವರಲ್ಲ: ಕಾಂಗ್ರೆಸ್ ಪ್ರತಿಭಟನೆಗೆ ಕೇಂದ್ರ ತಿರುಗೇಟು
ಸಂಸತ್ತಿನಲ್ಲಿ ಪ್ರತಿಭಟನೆಯ ನಂತರ 24 ಸಂಸದರನ್ನು ಅಮಾನತುಗೊಳಿಸಿರುವುದು ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಉಲ್ಲಂಘಿಸಿದಂತೆ ಎಂದು ಪ್ರತಿಪಕ್ಷಗಳು ತೀವ್ರತರವಾದ ದನಿ ಎತ್ತಿವೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: 12 ಗಂಟೆಗಳ ವಿಚಾರಣೆ ಅಂತ್ಯ, ಸೋನಿಯಾ ಗಾಂಧಿಗೆ ಸದ್ಯ ರಿಲೀಫ್
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಎದುರಿಸುತ್ತಿದ್ದ ವಿಚಾರಣೆ ಇಂದು ಅಂತ್ಯಗೊಂಡಿದೆ. ಮೂರು ದಿನಗಳಿಂದ 12 ಗಂಟೆಗಳ ಕಾಲ ನಡೆದ ವಿಚಾರಣೆಯಲ್ಲಿ 100ಕ್ಕೂ ಅಧಿಕ ಪ್ರಶ್ನೆಗಳನ್ನು ಕೇಳಲಾಗಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: 3ನೇ ಸುತ್ತಿನ ವಿಚಾರಣೆಗೆ ಇ.ಡಿ ಕಚೇರಿಗೆ ಆಗಮಿಸಿದ ಸೋನಿಯಾ ಗಾಂಧಿ
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಸುತ್ತಿನ ವಿಚಾರಣೆಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ದೆಹಲಿಯ ಜಾರಿ ನಿರ್ದೇಶನಾಲಯದ (ಇ.ಡಿ) ಕಚೇರಿಗೆ ಹಾಜರಾಗಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: 6 ಗಂಟೆಗಳ ಕಾಲ ಸೋನಿಯಾ ಗಾಂಧಿ ವಿಚಾರಣೆ, ಮತ್ತೆ ನಾಳೆ ಹಾಜರಾಗುವಂತೆ ಸೂಚನೆ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮಂಗಳವಾರ ಸುಮಾರು 6 ಗಂಟೆಗಳ ಕಾಲ ವಿಚಾರಣೆ ಒಳಪಡಿಸಿದ ಜಾರಿ ನಿರ್ದೇಶನಾಲಯ(ಇಡಿ) ಬುಧವಾರ...

ಸೋನಿಯಾ ಇಡಿ ತನಿಖೆಗೆ ವಿರೋಧ, ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ, ರಾಹುಲ್ ಸೇರಿ ಹಲವು ಮುಖಂಡರ ಬಂಧನ
ಕೇಂದ್ರ ಸರ್ಕಾರ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ರಾಷ್ಟ್ರಪತಿ ಭವನದವರೆಗೂ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ, ಎರಡನೇ ಬಾರಿಗೆ ವಿಚಾರಣೆ, ಇಡಿ ಕಚೇರಿಗೆ ಸೋನಿಯಾ ಗಾಂಧಿ ಆಗಮನ
ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಎರಡನೇ ಬಾರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

