special court

ಗೌರಿ ಲಂಕೇಶ್, ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣ: ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಸಿಎಂ ಸೂಚನೆ
ಹಿರಿಯ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹಾಗೂ ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸೂಚನೆ ನೀಡಿದ್ದಾರೆ.

ನಕ್ಸಲ್ ಚಟುವಟಿಕೆಯಲ್ಲಿ ಭಾಗಿ: ಸಾಕ್ಷ್ಯಾಧಾರ ಕೊರತೆ, 3 ಆರೋಪಿಗಳ ಬಿಡುಗಡೆಗೊಳಿಸಿದ ವಿಶೇಷ ನ್ಯಾಯಾಲಯ
ನಕ್ಸಲ್ ಚಟುವಟಿಕೆಗಳಲ್ಲಿ ಭಾಗಿಯಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳನ್ನು ವಿಶೇಷ ನ್ಯಾಯಾಲಯ ಬಿಡುಗಡೆ ಮಾಡಿದೆ.

ಲಿಂಗಾಯತ ಮುಖ್ಯಮಂತ್ರಿ ಭ್ರಷ್ಟರು ಹೇಳಿಕೆ: ಸಿದ್ದರಾಮಯ್ಯ ವಿರುದ್ಧದ ದೂರು ವಜಾಗೊಳಿಸಿದ ವಿಶೇಷ ನ್ಯಾಯಾಲಯ
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದ ಪ್ರಚಾರದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟರು ಎಂದು ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂದು ದೂರಿ ಸಲ್ಲಿಸಲಾಗಿದ್ದ ಖಾಸಗಿ ದೂರನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾಗೊಳಿಸಿದೆ.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಸ್ತಿ ವಿಲೇವಾರಿ ಮಾಡುವಂತೆ ಕೇಳಿದ ವಿಶೇಷ ನ್ಯಾಯಾಲಯ
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಂದ ವಶಪಡಿಸಿಕೊಂಡಿರುವ ಆಸ್ತಿಯನ್ನು ವಿಲೇವಾರಿ ಮಾಡಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಅನ್ನು ನೇಮಿಸುವಂತೆ ವಿಶೇಷ ನ್ಯಾಯಾಲಯವು ಕರ್ನಾಟಕ ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದೆ.

ಐಸಿಯುನಲ್ಲಿರುವ ಸಹೋದರಿ ಭೇಟಿ ಮಾಡಲು ನ್ಯಾಯಾಲಯದಿಂದ ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಅನುಮತಿ
ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಅವರು ಅನಾರೋಗ್ಯದಿಂದ ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಹೋದರಿಯ ಕ್ಷೇಮ ವಿಚಾರಿಸಲು ಮೂರು ತಾಸುಗಳ ಕಾಲಾವಕಾಶವನ್ನು ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶನಿವಾರ ಆದೇಶಿಸಿದೆ.

ಪಿಎಸ್‌ಐ ನೇಮಕಾತಿ ಪ್ರಕರಣ: ಎಲ್ಲಾ ದಾಖಲೆ ಸಲ್ಲಿಸುವಂತೆ ಎಸಿಎಂಎಂಗೆ ವಿಶೇಷ ನ್ಯಾಯಾಲಯ ನಿರ್ದೇಶನ
ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಪಿಎಸ್ ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಎಸಿಎಂಎಂಗೆ ವಿಶೇಷ ನ್ಯಾಯಾಲಯ ನಿರ್ದೇಶನ ನೀಡಿದೆ.

ಉಡುಪಿ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ; ತಂದೆಗೆ ಜೀವಾವಧಿ ಶಿಕ್ಷೆ
ತನ್ನ 14 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಉಡುಪಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 20,000 ರೂ. ದಂಡ ವಿಧಿಸಿದೆ.

2018ರ ಬೋದ್ ಗಯಾ ಸ್ಫೋಟ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ, 5 ಮಂದಿಗೆ 10 ವರ್ಷ ಜೈಲು
2018ರ ಬೋದ್ ಗಯಾ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದು, 5 ಮಂದಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಫೋನ್ ಕದ್ದಾಲಿಕೆ ಪ್ರಕರಣ: ಸಿಬಿಐ ಬಿ ರಿಪೋರ್ಟ್'ಗೆ ಭಾಸ್ಕರ್ ರಾವ್ ತಕರಾರು ಅರ್ಜಿ
ರಾಜಕೀಯ ವಲಯದಲ್ಲಿ ತೀವ್ರ ಸಂಚಲನವನ್ನುಂಟು ಮಾಡಿದ್ದ ಐಪಿಎಸ್ ಅಧಿಕಾರಿಯ ಫೋನ್ ಕದ್ದಾಲಿಕೆ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಬಿ-ರಿಪೋರ್ಟ್'ಗೆ ಐಪಿಎಸ್ ಅಧಿಕಾರಿ ಎಂ.ಭಾಸ್ಕರ್ ರಾವ್ ತೀವ್ರ ಆಕ್ಷೇಪ ವ್ಯಕ್ತಪಡಿಸಿ ತಕರಾರು ಅರ್ಜಿ ಹಾಕಿದ್ದಾರೆ.

