ರಾಜ್ಯವಿಶೇಷ ಹೂಡಿಕೆ ಪ್ರದೇಶ ಅಧಿನಿಯಮ ಜಾರಿಗೆ ರಾಜ್ಯ ಸಂಪುಟ ನಿರ್ಧಾರ!
ರಾಜ್ಯಕ್ಕೆ ಬಂಡವಾಳ ಹೂಡಿಕೆ ಆಕರ್ಷಿಸಲು ಜಾಗತಿಕ ಹೂಡಿಕೆದಾರರ ಸಮ್ಮೇಳನ ನಡೆಯುತ್ತಿರುವ ಬೆನ್ನಲ್ಲೇ ಉದ್ಯಮ ಮತ್ತು ಹೂಡಿಕೆದಾರರಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲು 'ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಅಧಿನಿಯಮ' ಎಂಬ ಹೊಸ ಕಾಯಿದೆ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ನಿರ್ಧಾರ ತೆಗೆದುಕೊಂಡಿದೆ.