ರಾಜ್ಯಡಿಜೆ ಹಳ್ಳಿ ಗಲಭೆ ಪೂರ್ವ ನಿಯೋಜಿತವಲ್ಲ: ವರದಿ
ನಗರದ ಡಿಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಗಲಭೆ ಕೋಮು ಪ್ರೇರಿತವಾಗಲಿ, ಪೂರ್ವ ನಿಯೋಜಿತವಾಗಲಿ ಅಲ್ಲ. ಹಿಂದೂ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಗಲಭೆ ನಡೆದಿಲ್ಲ. ಇದೊಂದು ಸಹಜವಾಗಿ ನಡೆದ ಘಟನೆ ಎಂದು ಬೆಂಗಳೂರು ನಾಗರೀಕ ಸಾಮಾಜಿಕ ಸಂಸ್ಥೆಗಳ ಸಹಯೋಗದಲ್ಲಿ ನಡೆಸಿದ ಸತ್ಯಶೋಧನಾ ವರದಿ ಅಭಿಪ್ರಾಯಪಟ್ಟಿದೆ.