Sports

ಕೋಬ್ ಚಾಲೆಂಜರ್ ಟೆನಿಸ್: ರಾಮಕುಮಾರ್-ಪುರವ್ ರಾಣಾ ಚಾಂಪಿಯನ್
ಜಪಾನ್‌ನಲ್ಲಿ ನಡೆದ ಕೋಬ್ ಚಾಲೆಂಜರ್ ಟೆನಿಸ್ ಪಂದ್ಯಾವಳಿಯಲ್ಲಿ ಭಾರತದ ರಾಮ್‌ಕುಮಾರ್ ರಾಮನಾಥನ್ ಮತ್ತು ಪುರವ್ ರಾಣಾ ಡಬಲ್ಸ್ ಪ್ರಶಸ್ತಿಯನ್ನು ಗೆದ್ದು ಕೊಂಡಿದ್ದಾರೆ.

ತಮ್ಮದೇ ರಾಷ್ಟ್ರೀಯ ದಾಖಲೆ ಮುರಿದ ದ್ಯುತಿ ಚಾಂದ್
ವಿಶ್ವ ಚಾಂಪಿಯನ್ ಶಿಪ್ ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿರುವ ಸ್ಟಾರ್ ಓಟಗಾರ್ತಿ ದ್ಯುತಿ ಚಾಂದ್ ಅವರು 59ನೇ ರಾಷ್ಟ್ರೀಯ ಓಪನ್ ಅಥ್ಲೇಟಿಕ್ಸ್ ಚಾಂಪಿಯನ್ ಶಿಪ್ ನ 100 ಮೀಟರ್ ಓಟದ ಸ್ಪರ್ಧೆಯಲ್ಲಿ ದಾಖಲೆ ನಿರ್ಮಿಸಿದ್ದಾರೆ.

ಲಿಯೋನೆಲ್ ಮೆಸ್ಸಿಗೆ "ವರ್ಷದ ಫಿಫಾ ಆಟಗಾರ" ಪ್ರಶಸ್ತಿ
ವಿಶ್ವ ಶ್ರೇಷ್ಠ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಅವರು ವರ್ಷದ ಫಿಫಾ ಪುರುಷರ ಫಿಫಾ ಆಟಗಾರ ಪ್ರಶಸ್ತಿಗೆ ಸೋಮವಾರ ಭಾಜನರಾಗಿದ್ದಾರೆ.

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಚೊಚ್ಚಲ ಪದಕ ಗೆದ್ದ ವಿನೇಶ್ ಫೊಗಾಟ್!
ಏಷ್ಯನ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ಭಾರತದ ವಿನೇಶ್ ಫೊಗಾಟ್ ಅವರು ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಜಯಿಸಿದ್ದಾರೆ.

ನಾಲ್ಕನೇ ಬಾರಿಗೆ ಅಮೆರಿಕ ಓಪನ್ ಪ್ರಶಸ್ತಿಗೆ ಮುತ್ತಿಟ್ಟ ರಾಫೆಲ್ ನಡಾಲ್
ತೀವ್ರ ಕುತೂಹಲ ಕೆರಳಿಸಿದ್ದ ಅಮೆರಿಕ ಓಪನ್ ಟೂರ್ನಿಯ ಪೈನಲ್ ನಲ್ಲಿ ಸ್ಪೈನ್ ನ ಟೆನ್ನಿಸ್ ದಂತಕಥೆ ರಾಫೆಲ್ ನಡಾಲ್ ವಿರೋಚಿತ ಜಯ ಸಾಧಿಸಿ ನಾಲ್ಕನೇ ಬಾರಿಗೆ ಯುಎಸ್ ಓಪನ್ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ.

23 ಬಾರಿ ಚಾಂಪಿಯನ್ ಸೆರೆನಾ ಮಣಿಸಿ ಗ್ರಾಂಡ್ ಸ್ಲಾಮ್ ಗೆದ್ದ 19 ವರ್ಷದ ಬಿಯಾಂಕಾ ಆಂಡ್ರೀಸ್ಕು
ಯುಎಸ್ ಓಪನ್ ಟೂರ್ನಿಯಲ್ಲಿ 23 ಗ್ರಾಂಡ್ ಸ್ಲಾಮ್ ವಿನ್ನರ್ ಅಮೆರಿಕದ ಸೆರೆನಾ ವಿಲಿಯಮ್ಸ್ ಗೆ 19 ವರ್ಷದ ಉದಯೋನ್ಮುಖ ಆಟಗಾರ್ತಿ ಬಿಯಾಂಕಾ ಆಂಡ್ರೀಸ್ಕು ಆಘಾತ ನೀಡಿದ್ದು. ಚೊಚ್ಚಲ ಅಮೆರಿಕ ಓಪನ್ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ.

'ಖೇಲ್ ರತ್ನ' ಪ್ರಶಸ್ತಿಗೆ ದೀಪಾ ಮಲ್ಲಿಕ್ , ಅರ್ಜುನ ಪ್ರಶಸ್ತಿಗೆ ಜಡೇಜಾ ಹೆಸರು ಶಿಫಾರಸು
ಈ ಬಾರಿಯ ಅತ್ಯುನ್ನತ ಕ್ರೀಡಾ ಪ್ರಶಸ್ತಿ ಖೇಲ್ ರತ್ನ ಪ್ರಶಸ್ತಿಗೆ ಕುಸ್ತಿ ಪಟು ಬಜರಂಗ್ ಪುನಿಯಾ ಜೊತೆಗೆ ಪ್ಯಾರಾಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗಳಿಸಿದ್ದ ದೀಪಾ ಮಲ್ಲಿಕ್ ಅವರ ಹೆಸರನ್ನು ನಾಮನಿರ್ದೇಶನ ಮಾಡಲಾಗಿದೆ.

ವಿಶ್ವ ಪೊಲೀಸ್ ಕ್ರೀಡಾಕೂಟದಲ್ಲಿ ಗೀತಿಕಾ ಜಾಖರ್ ಗೆ ಚಿನ್ನದ ಗರಿ
ಹರಿಯಾಣದ ಉಪ ಪೊಲೀಸ್ ಅಧೀಕ್ಷಕಿ ಗೀತಿಕಾ ಜಾಖರ್ ಅವರು ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ತಂದಿದ್ದು, ವಿಶ್ವ ಪೊಲೀಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.

ರಾಷ್ಟ್ರೀಯ ಉದ್ದೀಪನ ಮದ್ದು ನಿಗ್ರಹ ಘಟಕ - ನಾಡಾ ವ್ಯಾಪ್ತಿಗೆ ಬಿಸಿಸಿಐ; ಕೇಂದ್ರ ಕ್ರೀಡಾ ಕಾರ್ಯದರ್ಶಿ
ದೇಶದಲ್ಲಿ ಕ್ರೀಡಾಪಟುಗಳ ಉದ್ದೀಪನ ಮದ್ದು ಸೇವನೆ ಮೇಲೆ ನಿಗಾ ವಹಿಸಿರುವ ರಾಷ್ಟ್ರೀಯ ಉದ್ದೀಪನ ಮದ್ದು ನಿಗ್ರಹ ಘಟಕ (ನಾಡಾ) ವ್ಯಾಪ್ತಿಗೆ ಒಳಪಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸಮ್ಮತಿಸಿದೆ ಎಂದು ಕೇಂದ್ರ ಕ್ರೀಡಾ ಕಾರ್ಯದರ್ಶಿ ರಾಧೇಶ್ಯಾಮ್ ಜುಲಾನಿಯಾ ಶುಕ್ರವಾರ ತಿಳಿಸಿದ್ದಾರೆ.

