ರಾಜ್ಯವಶಿಷ್ಠ ಸೌಹಾರ್ದ ಸಹಕಾರ ಸಂಘದ ಠೇವಣಿದಾರರಿಗೆ 26.97 ಕೋಟಿ ರೂ. ಠೇವಣಿ ಹಣ ಮರುಪಾವತಿ: ಎಸ್.ಟಿ.ಸೋಮಶೇಖರ್
ಬೆಂಗಳೂರು ನಗರದ ಶ್ರೀ ವಶಿಷ್ಠ ಸೌಹಾರ್ದ ಸಹಕಾರ ಸಂಘದ ಅವ್ಯವಹಾರದ ಕುರಿತು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದ್ದು, 729 ಠೇವಣಿ ಖಾತೆಗಳನ್ನು ಮುಕ್ತಾಯಗೊಳಿಸಿ 26.97 ಕೋಟಿ ರೂ. ಠೇವಣಿ ಹಣವನ್ನು ಮರುಪಾವತಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ವಿಧಾನಪರಿಷತ್ ನಲ್ಲಿಂದು ತಿಳಿಸಿದರು