ರಾಜ್ಯಏತ ನೀರಾವರಿಗೆ ಯೋಜನೆ ಪೂರ್ಣಗೊಳಿಸಲು 3.5 ಕೋಟಿ ರೂ. ನೀಡಿದ ಶಾಸಕ ಶ್ರೀಮಂತ್ ಪಾಟೀಲ್: ಕಾಂಗ್ರೆಸ್ ಕಿಡಿ
ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರನ್ನು ಸೆಳೆಯಲು ಶಾಸಕರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಅವರು, ತಮ್ಮ ಕ್ಷೇತ್ರದಲ್ಲಿ ಅನುಷ್ಠಾನಗೊಳ್ಳುತ್ತಿರುವ ಬಸವೇಶ್ವರ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಲು ಗುತ್ತಿಗೆದಾರರಿಗೆ 3.50 ಕೋಟಿ ರೂ.ಗಳ ಚೆಕ್ ಅನ್ನು ನೀಡಿದ್ದಾರೆ.