Srinagar airport

Srinagar airport: ಪಾರ್ಕಿಂಗ್ ಕಂಬಕ್ಕೆ ಡಿಕ್ಕಿ ಹೊಡೆದ IndiGo ವಿಮಾನ; ಪ್ರಯಾಣಿಕರು ಸುರಕ್ಷಿತ..!
ವಿಮಾನವನ್ನು ನಿಲ್ದಾಣದ 'ಬೇ ನಂಬರ್ 06' ರ ಪಾರ್ಕಿಂಗ್ ಜಾಗಕ್ಕೆ ಕೊಂಡೊಯ್ಯುತ್ತಿದ್ದಾಗ, ವಿಮಾನದ ಮುಂಭಾಗದ ಮೂಗಿನ (Nose) ಭಾಗವು ಅಲ್ಲಿಯೇ ಇದ್ದ 'ವಿಷುಯಲ್ ಡಾಕಿಂಗ್ ಗೈಡೆನ್ಸ್ ಸಿಸ್ಟಮ್' (VDGS) ಲೋಹದ ಕಂಬಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ.

SpiceJet ಉದ್ಯೋಗಿಗಳ ಮೇಲೆ Indian Army ಅಧಿಕಾರಿ ಮಾರಣಾಂತಿಕ ಹಲ್ಲೆ; ಬೆನ್ನುಮೂಳೆ ಮುರಿತ, ದವಡೆಗೆ ಗಾಯ; Video!
ಕಳೆದ ಜುಲೈ 26ರಂದು ಶ್ರೀನಗರ ವಿಮಾನ ನಿಲ್ದಾಣದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಹಿರಿಯ ಸೇನಾ ಅಧಿಕಾರಿಯೊಬ್ಬರು ಸ್ಪೈಸ್‌ಜೆಟ್‌ನ ನಾಲ್ವರು ಉದ್ಯೋಗಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಕಾಶ್ಮೀರ: ಶ್ರೀನಗರ ವಿಮಾನ ನಿಲ್ದಾಣದಲ್ಲಿ ವಿಮಾನ ಸೇವೆ ಪುನರಾರಂಭ
ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ಮೇ 9 ರಂದು ಶ್ರೀನಗರ ವಿಮಾನ ನಿಲ್ದಾಣ ಸೇರಿದಂತೆ ಗಡಿ ರಾಜ್ಯಗಳಾದ್ಯಂತ 31 ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು.

ಜಿ 20 ಶೃಂಗಸಭೆ: ಮೆಗಾ ಪವರ್ ಸ್ಟಾರ್ ರಾಮಚರಣ್ ವಿಶೇಷ ಆಕರ್ಷಣೆ!
ಜಿ 20 ಶೃಂಗಸಭೆಯಲ್ಲಿ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ವಿಶೇಷ ಆಕರ್ಷಣೆಯಾಗಿದ್ದಾರೆ. ಭಾರತ ಸರ್ಕಾರ ಆಯೋಜಿಸಿರುವ ಪ್ರತಿಷ್ಠಿತ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಶ್ರೀನಗರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಟನನ್ನು ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು.

ಶ್ರೀನಗರದಿಂದ ರಾಹುಲ್ ಗಾಂಧಿ, ಪ್ರತಿಪಕ್ಷ ನಾಯಕರನ್ನು ವಾಪಸ್ ಕಳುಹಿಸಿದ ಕಾಶ್ಮೀರ ಸರ್ಕಾರ
ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವುದಕ್ಕಾಗಿ ಶನಿವಾರ ಶ್ರೀನಗರ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ 11 ಪ್ರತಿಪಕ್ಷ ನಾಯಕರನ್ನು ಕಾಶ್ಮೀರ ಸರ್ಕಾರ ದೆಹಲಿಗೆ ವಾಪಸ್ ಕಳುಹಿಸಿದೆ.

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸೀತಾರಾಮ್ ಯೆಚೂರಿ ಬಂಧನ
ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರನ್ನು ಶ್ರೀನಗರ ವಿಮಾನ ನಿಲ್ದಾಣದಲ್ಲಿ ಇಂದು ಬಂಧಿಸಲಾಗಿದೆ.

ಶ್ರೀನಗರದಲ್ಲಿ ಗುಲಾಂ ನಬಿ ಆಜಾದ್‌ಗೆ ತಡೆ, ಬಲವಂತವಾಗಿ ಹಿಂದಕ್ಕೆ ಕಳುಹಿಸಲಾಗಿದೆ: ಕಾಂಗ್ರೆಸ್
ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಲಾಗಿದ್ದು ಇದನ್ನು ತೀವ್ರವಾಗಿ ಕಾಂಗ್ರೆಸ್ ವಿರೋಧಿಸಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್...

ಗ್ರೆನೇಡ್ ಹೊತ್ತು ವಿಮಾನ ಪ್ರಯಾಣಕ್ಕೆ ಮುಂದಾಗಿದ್ದ ಯೋಧನ ಬಂಧನ!
ಬ್ಯಾಗ್ ನಲ್ಲಿ 2 ಗ್ರೆನೇಡ್ ಹೊತ್ತು ದೆಹಲಿಗೆ ವಿಮಾನದಲ್ಲಿ ಪ್ರಯಾಣಕ್ಕೆ ಮುಂದಾಗಿದ್ದ ಯೋಧನೋರ್ವನನ್ನು ಕಾಶ್ಮೀರದ ಶ್ರೀನಗರ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.

