Srinagar

ಪಿಡಿಪಿ ಮುಖಂಡನ ಮನೆ ಮೇಲೆ ಉಗ್ರರ ದಾಳಿ, ಓರ್ವ ಪೊಲೀಸ್ ಸಿಬ್ಬಂದಿ ಸಾವು
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿದ್ದು, ಪಿಡಿಪಿ ಮುಖಂಡನ ಮನೆ ಮೇಲೆ ದಾಳಿ ನಡೆಸಿದ ಉಗ್ರರು ಓರ್ವ ಪೊಲೀಸ್ ಸಿಬ್ಬಂದಿಯನ್ನು ಹತ್ಯೆಗೈದಿದ್ದಾರೆ.

ಕಳೆದೆರಡು ದಿನಗಳಿಂದ ನನಗೆ ಮತ್ತೆ ಗೃಹಬಂಧನ: ಮೆಹಬೂಬಾ ಮುಫ್ತಿ ಆರೋಪ
ವಿಧಿ 370ರ ರದ್ಧತಿ ಬೆನ್ನಲ್ಲೇ ಗೃಹ ಬಂಧನಕ್ಕೀಡಾಗಿ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಪಿಡಿಪಿ ಮುಖ್ಯಸ್ಥೆ ಹಾಗೂ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರನ್ನು ಮತ್ತೆ ವಿಚಾರಣೆಗೊಳಪಡಿಸಲಾಗಿದೆ ಎಂದು ಹೇಳಲಾಗಿದೆ.

ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆ: ಓರ್ವ ಉಗ್ರ, ಆತನ ಸಹಚನ ಬಂಧನ
ಭಾರತೀಯ ಸೇನೆ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಮತ್ತು ಆತನಿಗೆ ಸಹಾಯ ಮಾಡುತ್ತಿದ್ದ ಓರ್ವ ಸ್ಥಳೀಯ ವ್ಯಕ್ತಿಯನ್ನು ಬಂಧಿಸಲಾಗಿದೆ.

ಉಗ್ರರಿಗೆ ಆರ್ಥಿಕ ನೆರವು: ಶ್ರೀನಗರ, ದೆಹಲಿ ಎನ್'ಜಿಒ, ಟ್ರಸ್ಟ್'ಗಳ ಮೇಲೆ ಎನ್ಐಎ ದಾಳಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದೇಶದ ವಿವಿಧೆಡೆ ನಡೆಸುತ್ತಿರುವ ದಾಳಿಗಳು ಗುರುವಾರ ಕೂಡ ಮುಂದುವರೆದಿದೆ.

ಉತ್ತರ ಕಾಶ್ಮೀರದಲ್ಲಿ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ಅಲ್-ಬದರ್ ಉಗ್ರರು ಶರಣಾಗತಿ
ಉತ್ತರ ಕಾಶ್ಮೀರದ ಸೇಬು ಪಟ್ಟಣವಾದ ಸೊಪೋರ್ ನಲ್ಲಿ ಭದ್ರತಾ ಪಡೆಗಳು ಗುರುವಾರ ನಡೆಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ಅಲ್-ಬದರ್ ಉಗ್ರರು ಶರಣಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಶ್ರೀನಗರದಲ್ಲಿ ಕಳೆದ 9 ತಿಂಗಳಲ್ಲಿ ಎಂಟು ಎನ್‍ಕೌಂಟರ್, 18 ಉಗ್ರರು ಹತ: ಡಿಜಿಪಿ ದಿಲ್ಬಾಗ್ ಸಿಂಗ್
ಜಮ್ಮು-ಕಾಶ್ಮೀರ ರಾಜ್ಯದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಕಳೆದ 9 ತಿಂಗಳಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎಂಟು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ 18 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.

ಶ್ರೀನಗರದಲ್ಲಿ ಎನ್'ಕೌಂಟರ್: ಸೇನಾಪಡೆ ಗುಂಡಿಗೆ ಎಲ್ಇಟಿ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರು ಹತ
ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ.

ಶ್ರೀನಗರದಲ್ಲಿ ಉಗ್ರರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ
ಜಮ್ಮು-ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಸೋಮವಾರ ತೀವ್ರ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

ಶ್ರೀನಗರದಲ್ಲಿ ಉಗ್ರರ ದಾಳಿ: ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ, ಮೂವರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ನೌಗಾಮ್ ನಲ್ಲಿ ಸೋಮವಾರ ಮಧ್ಯಾಹ್ನ ಭದ್ರತಾ ಪಡೆಗಳ ಗಸ್ತು ತಂಡದ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು, ಇತರ ಮೂವರು ಗಾಯಗೊಂಡಿದ್ದಾರೆ.

