Sriramulu

ಯಡಿಯೂರಪ್ಪ ಭೀಷ್ಮ, ಬೊಮ್ಮಾಯಿ ಅರ್ಜುನ ಎಂದು ಕೊಂಡಾಡಿದ ಸಚಿವ ಶ್ರೀರಾಮುಲು
ದಾವಣಗೆರೆಯಲ್ಲಿ ಶನಿವಾರ ನಡೆದ ವಿಜಯ ಸಂಕಲ್ಪ ಯಾತ್ರೆ ಮಹಾಸಂಗಮದಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಅವರು ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೀಷ್ಮ, ಅರ್ಜುನ ಎಂದು ಕರೆದು ಕೊಂಡಾಡಿದರು.

ಸಿದ್ದರಾಮಯ್ಯ, ನಾನು ಸ್ವಾರ್ಥಕ್ಕಾಗಿ ಕ್ಷೇತ್ರ ಬಿಡಲಿಲ್ಲ, ‘ಪಾಪ್ಯುಲರ್ ಅಭ್ಯರ್ಥಿ ಬೇರೆ ಬೇರೆ ಕಡೆ ನಿಲ್ಲಬೇಕಾಗುತ್ತೆ': ಶ್ರೀರಾಮುಲು
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಕ್ಷೇತ್ರ ಆಯ್ಕೆಯ ಗೊಂದಲ ಮುಂದುವರಿದಿರುವಂತೆ ಬಳ್ಳಾರಿಯಲ್ಲಿ ಮಾತನಾಡಿರುವ ಸಾರಿಗೆ ಸಚಿವ ಶ್ರೀರಾಮುಲು ಅವರ ಬಗ್ಗೆ ಮೃದು ಧೋರಣೆ ತಳೆದು ಮಾತನಾಡಿದ್ದಾರೆ.

ಸರ್ಕಾರದ ಭರವಸೆ ತಿರಸ್ಕರಿಸಿದ ಸಾರಿಗೆ ನೌಕರರು: ಮಾರ್ಚ್.21ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ
ಶೇ.15ರಷ್ಟು ವೇತನ ಹೆಚ್ಚಳ ಮಾಡುವ ಸರ್ಕಾರದ ಭರವಸೆಯನ್ನು ಸಾರಿಗೆ ನೌಕರರು ತಿರಸ್ಕರಿಸಿದ್ದು, ಈ ಹಿಂದೆ ನಿರ್ಧರಿಸಿದಂತೆಯೇ ಮಾರ್ಚ್ 21ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

ಸಾರಿಗೆ ನೌಕರರಿಗೆ ಶೇ 15ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ: ಸಚಿವ ಶ್ರೀರಾಮುಲು
ಸಾರಿಗೆ ಇಲಾಖೆ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಗುರುವಾರ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಶೇ.15 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

ಶೇ.20ರಷ್ಟು ವೇತನ ಹೆಚ್ಚಳಕ್ಕೆ ಸಾರಿಗೆ ಸಂಸ್ಥೆ ನೌಕರರ ಪಟ್ಟು: ಸಚಿವ ಶ್ರೀರಾಮುಲು ನಡೆಸಿದ 2ನೇ ಸಂಧಾನ ಸಭೆಯೂ ವಿಫಲ
ಸಾರಿಗೆ ನೌಕರರ ವೇತನ ಹೆಚ್ಚಳ ಕುರಿತು ಚರ್ಚಿಸಲು ಕೆಎಸ್ಆರ್'ಸಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸಾರಿಗೆ ನೌಕರರ ಸಂಘಟನೆಗಳ ಮುಖಂಡರ ನಡುವೆ ಸಚಿವ ಶ್ರೀರಾಮುಲು ಅವರು ಬುಧವಾರ ನಡೆಸಿದ ಎರಡನೇ ಸುತ್ತಿನ ಸಭೆ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ವೇತನ ಹೆಚ್ಚಳದ ಚೆಂಡು ಇದೀಗ ಮುಖ್ಯಮಂತ್ರಿಗಳ ಅಂಗಳ ತಲುಪಿದೆ.

ವೇತನ ಹೆಚ್ಚಳಕ್ಕೆ ಆಗ್ರಹ: ಸಾರಿಗೆ ನೌಕರರ ಜೊತೆಗಿನ ಸಚಿವ ಶ್ರೀರಾಮುಲು ಸಭೆ ವಿಫಲ
ಪ್ರತಿ ವರ್ಷ ರಾಜ್ಯದಲ್ಲಿ ಸಾರಿಗೆ ನೌಕರರ ವೇತನ ಹೆಚ್ಚಿಸುವಂತೆ ಮುಷ್ಕರ, ಪ್ರತಿಭಟನೆಗಳು ನಡೆಯುತ್ತಿರುತ್ತವೆ. ಈ ವಿಚಾರ ಸಂಬಂಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿವಿಧ ಒಕ್ಕೂಟಗಳೊಂದಿಗೆ ಸಾರಿಗೆ ಸಚಿವ ಬಿ ಶ್ರೀರಾಮುಲು ಅವರು ಬುಧವಾರ ನಡೆಸಿದ ಸಭೆ ವಿಫಲವಾಗಿದೆ.

ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ
2018ರಲ್ಲಿ ಶ್ರೀರಾಮುಲು ವಿರುದ್ಧ ತೊಡೆತಟ್ಟಿದ್ದ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಇದೀಗ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಫೆ.23ಕ್ಕೆ ಸಂಡೂರಿಗೆ ಅಮಿತ್ ಶಾ; ಬೃಹತ್ ಸಮಾವೇಶ: ಸಚಿವ ಬಿ. ಶ್ರೀರಾಮುಲು
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.23ರಂದು ಸಂಡೂರಿಗೆ ಆಗಮಿಸಲಿದ್ದು, ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಶನಿವಾರ ಹೇಳಿದ್ದಾರೆ.

ಶೀಘ್ರದಲ್ಲೇ ಸಾರಿಗೆ ನೌಕರರ ವೇತನ ಪರಿಷ್ಕರಣೆ: ಸಚಿವ ಬಿ.ಶ್ರೀರಾಮುಲು
ಸಾರಿಗೆ ನೌಕರರಿಗೆ 7ನೇ ವೇತನ ಜಾರಿಗೆ ಕಷ್ಟವಾಗಬಹುದು. ಆದರೆ ವೇತನ ಪರಿಷ್ಕರಣೆಗೆ ಈಗಾಗಲೇ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಲಾಗಿದ್ದು, ಆದಷ್ಟು ಶೀಘ್ರದಲ್ಲಿ ವೇತನ ಪರಿಷ್ಕರಣೆ ಕಾರ್ಯ ಮಾಡಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಶನಿವಾರ ಭರವಸೆ ನೀಡಿದರು.

