SSLC exam

ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೂ ಎಸ್ಎಸ್ಎಲ್'ಸಿ ಪರೀಕ್ಷೆ ಬರೆಯಲು ಅವಕಾಶ
ಎಸ್ಎಸ್ಎಲ್'ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಹಾಲ್ ಟಿಕೆಟ್ (ಪ್ರವೇಶ ಪತ್ರ) ಸಿಗದೇ ಇದ್ದರೆ, ತಕ್ಷಣ ಹಾಲ್ ಟಿಕೆಟ್ ವಿತರಿಸಲು ಕ್ರಮ ತೆಗೆದುಕೊಳ್ಳಬೇಕು’ ಎಂದು ಎಲ್ಲ ಡಿಡಿಪಿಐ ಹಾಗೂ ಬಿಇಒಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ. ಅನ್ಬುಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.

ಶಿಕ್ಷಣ ಸಚಿವರು ನನ್ನೊಂದಿಗೆ ಚರ್ಚಿಸಿಯೇ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ದಿನಾಂಕ ನಿಗದಿ: ಯಡಿಯೂರಪ್ಪ
ಶಿಕ್ಷಣ ಸಚಿವ ಎಸ್. ಸುರೆಶ್ ಕುಮಾರ್ ಅವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ

ಆರೋಗ್ಯ ಇಲಾಖೆಯ ಸಲಹೆಯಂತೆಯೇ ಪರೀಕ್ಷಾ ದಿನಾಂಕ ಘೋಷಣೆ ಮಾಡಲಾಗಿದೆ: ಎಸ್. ಸುರೇಶ್ ಕುಮಾರ್
ಆರೋಗ್ಯ ಇಲಾಖೆಯ ಸಲಹೆಯಂತೆಯೇ ಪರೀಕ್ಷಾ ದಿನಾಂಕಗಳ ಘೋಷಣೆ ಮಾಡಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳ ಅನುಮತಿ ಕೂಡ ಪಡೆಯಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಜುಲೈ 19-22 ರಂದು ಎಸ್.ಎಸ್.ಎಲ್.ಸಿ ಪರೀಕ್ಷೆ, ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಜುಲೈ ಎರಡನೇ ವಾರ: ಸುರೇಶ್ ಕುಮಾರ್
ಕೊನೆಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಎಸ್ಎಸ್ ಎಲ್.ಸಿ ಮಕ್ಕಳಿಗೆ ಪರೀಕ್ಷಾ ದಿನಾಂಕ ಪ್ರಕಟಿಸಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆಯ ಮಾದರಿ ಪ್ರಶ್ನೆಪತ್ರಿಕೆ ಬಿಡುಗಡೆ: ಜುಲೈ ಮೂರನೇ ವಾರದಲ್ಲಿ ಪರೀಕ್ಷೆ
ಕೊರೋನಾ ಸೋಂಕಿನ ಎರಡನೇ ಅಲೆ ತೀವ್ರವಾದ ಕಾರಣ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಜುಲೈ ಮೂರನೇ ವಾರದಲ್ಲಿ ಮುಹೂರ್ತ ನಿಗದಿಪಡಿಸಿರುವ ರಾಜ್ಯ ಸರ್ಕಾರ ಶನಿವಾರ ಮಾದರಿ ಪ್ರಶ್ನೆಪತ್ರಿಕೆಗಳನ್ನು ಬಿಡುಗಡೆ ಮಾಡಿದೆ.

ಮಕ್ಕಳಲ್ಲಿ ಭಯವನ್ನಲ್ಲ, ಆತ್ಮವಿಶ್ವಾಸ ತುಂಬೋಣ; ಸಂದರ್ಶನದಲ್ಲಿ ಸಚಿವ ಸುರೇಶ್ ಕುಮಾರ್
ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಿ ಎಸ್ಎಸ್ಎಲ್'ಸಿ ಪರೀಕ್ಷೆ ನಡೆಸುವ ನಿರ್ಧಾರವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮರ್ ಅವರು ಸಮರ್ಥಿಸಿಕೊಂಡಿದ್ದು, ತಜ್ಞರು ಹಾಗೂ ಸಂಬಂಧಪಟ್ಟವರಿಂದ ಪ್ರತಿಕ್ರಿಯೆ ಪಡೆದೇ ವಿದ್ಯಾರ್ಥಿಗಳ ಹಿತಾಸಕ್ತಿ ದೃಷ್ಟಿಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

'ಶಿಕ್ಷಣ ಸಚಿವರದ್ದು ಎಡಬಿಡಂಗಿ ನಿರ್ಧಾರ: ಸರ್ಕಾರದ ದೌರ್ಬಲ್ಯದಿಂದ ಅಧಿಕಾರಿಗಳು ಸೂಪರ್ ಮ್ಯಾನ್ ಗಳಂತಾಡುತ್ತಿದ್ದಾರೆ'
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ನಡೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೋನಾ ನಿಯಂತ್ರಣಕ್ಕೆ ಬಂದರೆ ಮಾತ್ರ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸ್ತೀವಿ, ಇಲ್ಲಾಂದ್ರೆ ಇಲ್ಲ: ಸಿಎಂ ಯಡಿಯೂರಪ್ಪ
ಎಸ್ ಎಸ್ ಎಲ್ ಸಿ ಪರೀಕ್ಷೆ ಕೊರೋನಾ ಸೋಂಕು ಕಡಿಮೆಯಾದರೆ ನಡೆಸುತ್ತೇವೆ, ಇಲ್ಲದಿದ್ದರೆ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು ಮಾಡಿದರೆ ಮಕ್ಕಳ ಭವಿಷ್ಯ ಕಷ್ಟ: ಬಸವರಾಜ ಹೊರಟ್ಟಿ
ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು ಮಾಡುವುದು ಸರಿಯಲ್ಲ. ಪರೀಕ್ಷೆ ರದ್ದು ಮಾಡಿದರೆ ಮಕ್ಕಳ ಭವಿಷ್ಯ ಕಷ್ಟ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

