SSLC Exams

ಇಂದಿನಿಂದ SSLC ಪರೀಕ್ಷೆ: 8.96 ಲಕ್ಷ ವಿದ್ಯಾರ್ಥಿಗಳಿಗೆ ಗುಡ್ ಲಕ್!
ಪರೀಕ್ಷೆಗೆ 8.42 ಲಕ್ಷ ವಿದ್ಯಾರ್ಥಿಗಳು ಸೇರಿ ಒಟ್ಟು 8,96,887 ಮಕ್ಕಳು ನೋಂದಾಯಿಸಿದ್ದಾರೆ. ಈ ಪೈಕಿ 3.35 ಲಕ್ಷಕ್ಕೂ ಹೆಚ್ಚು ಗಂಡುಮಕ್ಕಳು, 3.78 ಲಕ್ಷಕ್ಕೂ ಹೆಚ್ಚು ಬಾಲಕಿಯರು ಮತ್ತು 5 ತೃತೀಯ ಲಿಂಗಿಗಳು ಇದ್ದಾರೆ.

ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ, ಈ ಬಾರಿ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ನೋಂದಣಿ!
ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಪರಿಗಣಿಸಲಾದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಇಂದಿನಿಂದ (ಮಾ.31) ಆರಂಭವಾಗಲಿದೆ. ರಾಜ್ಯ ವಿಧಾನಸಭಾ ಚುನಾವಣಾ ಪ್ರಕ್ರಿಯೆ ನಡುವೆಯೂ ಏಪ್ರಿಲ್ 15 ರವರೆಗೂ ನಡೆಯಲಿರುವ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ: ಶಿಕ್ಷಣ ಇಲಾಖೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿದ್ದು, ಈ ನಡುವಲ್ಲೇ ರಾಜ್ಯ ವಿಧಾನಸಭಾ ಚುನಾವಣೆ ಕೂಡ ಹತ್ತಿರ ಬರುತ್ತಿರುವುದು ಪರೀಕ್ಷೆಯ ಮೇಲೆ ಬೀರುವ ಸಾಧ್ಯತೆಗಳ ಕುರಿತು ಆತಂಕಗಳು ಎದುರಾಗಿವೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಶಿಕ್ಷಣ ಇಲಾಖೆಯು ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ ಎಂದು ಹೇಳಿದೆ.

2023ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2023ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ.

2023ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಶನಿವಾರ ಪ್ರಕಟಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅವಕಾಶ ಸಿಗದೆ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಗೆ ಸಚಿವ ಸುರೇಶ್ ಕುಮಾರ್ ಸಹಾಯದ ಭರವಸೆ
ಜುಲೈ 19 ಮತ್ತು ಜುಲೈ 22 ರಂದು ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯಲು ಸಾಧ್ಯವಾಗದಿರುವ ಬಗ್ಗೆ ಚಿಂತೆಗೀಡಾದ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯೊಬ್ಬಳು ಕಳೆದ ರಾತ್ರಿ ಕೊರಟಗೆರೆಯ ಹನುಮಂತಪುರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸಿದ್ದಾಳೆಂದು ವರದಿಯಾಗಿದೆ.

10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ ಸಾರಿಗೆ ವ್ಯವಸ್ಥೆ
ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ರಾಜ್ಯ ಸರ್ಕಾರ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಿದೆ. ವಿದ್ಯಾರ್ಥಿಗಳ ಅಗತ್ಯತೆಗಳನ್ನು ಮನಗಂಡು ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸುತ್ತಿದೆ.

ಎಸ್ಎಸ್ಎಲ್'ಸಿ ಪರೀಕ್ಷೆ ಕುರಿತು ಮರುಚಿಂತನೆ ನಡೆಸಿ: ಸರ್ಕಾರಕ್ಕೆ ವಿಪಕ್ಷಗಳ ಆಗ್ರಹ
ಕೊರೋನಾ 2ನೇ ಅಲೆ ನಡುವೆಯೇ ಎಸ್ಎಸ್ಎಲ್'ಸಿ ಪರೀಕ್ಷೆ ನಡೆಸಲು ನಿರ್ಧರಿಸುವ ಸರ್ಕಾರದ ನಿರ್ಧಾರಕ್ಕೆ ಜೆಡಿಎಸ್ ಮತ್ತು ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಕುರಿತು ಮರುಚಿಂತನೆ ನಡೆಸುವಂತೆ ಆಗ್ರಹಿಸಿವೆ.

1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ, ನಿಗದಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ: ಸುರೇಶ್ ಕುಮಾರ್
ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1-9 ತರಗತಿಯ ವಿದ್ಯಾರ್ಥಿಗಳಿಗೆ ಈ ವರ್ಷ ವಾರ್ಷಿಕ ಪರೀಕ್ಷೆ ನಡೆಸದಿರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

