stable

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆರೋಗ್ಯ ಸ್ಥಿರ: ಆಸ್ಪತ್ರೆಯಿಂದ ಬಿಡುಗಡೆ
ಕಳೆದ ಒಂದು ವಾರದಿಂದ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೇವೇಗೌಡ ಅವರು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

'ವೃಕ್ಷಮಾತೆ' ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿರ, ಮುಂದುವರೆದ ಚಿಕಿತ್ಸೆ
ಉಸಿರಾಟದ ತೊಂದರೆ, ಹೊಟ್ಟೆ ಹಾಗೂ ಸೋಂಕಿನ ಸಮಸ್ಯೆಯಿಂದಾಗಿ ನವೆಂಬರ್ 30ರಂದು ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಹೇಳಿದ್ದಾರೆ.

ಯುದ್ಧದ ಪ್ರಕ್ಷುಬ್ಧತೆಯಲ್ಲೂ ಶಾಂತವಾಗಿರುವ ತೈಲ ಮಾರುಕಟ್ಟೆ! (ಜಾಗತಿಕ ಜಗಲಿ)
2006ರಲ್ಲಿ, ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಹುದೇನೋ ಎಂದು ಇಂಧನ ಮಾರುಕಟ್ಟೆ ಆತಂಕ ಹೊಂದಿತ್ತು. ಅಂತಹ ಸಮಸ್ಯೆ ಎದುರಾಗದು ಎಂದು ಬಹಳಷ್ಟು ಜನರು ಭಾವಿಸಿದ್ದರೂ, ಹಾಗೇನಾದರೂ ಆದರೆ ಎಂಬ ಗುಮಾನಿಯೇ ತೈಲ ಬೆಲೆ 10% ಏರುವಂತೆ ಮಾಡಿತ್ತು.

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರ: ಮುಂದುವರೆದ ಚಿಕಿತ್ಸೆ
ಹಿರಿಯ ರಾಜಕಾರಣಿ ಮತ್ತು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಸೋಮವಾರ ಮಾಹಿತಿ ನೀಡಿದ್ದಾರೆ.

ಬರಗಾಲದಿಂದ ಈ ಬಾರಿ ವಿಶ್ವ ಕನ್ನಡ ಸಮ್ಮೇಳನ ನಡೆವ ಸಾಧ್ಯತೆಯಿಲ್ಲ; ಸರ್ಕಾರ ಅವಧಿ ಪೂರೈಸಲಿದೆ: ಎಸ್.ಎಸ್ ಮಲ್ಲಿಕಾರ್ಜುನ್
ಕಾಂಗ್ರೆಸ್ ಸರ್ಕಾರ ಪತನ ಅಸಾಧ್ಯ, ಬಿಜೆಪಿಯವರು ಮೊದಲಿನಿಂದಲೂ ಆಪರೇಷನ್ ಕಮಲ ಮಾಡುತ್ತಿದ್ದಾರೆ, ಅವರದ್ದು ತಿರುಕನ ಕನಸು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದ್ದಾರೆ.

ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ: ಸಾವಿನ ವದಂತಿಗಳಿಗೆ ತೆರೆ ಎಳೆದ ದತ್ತುಪುತ್ರ ಉಮೇಶ್ ವನಸಿರಿ
ಕರ್ನಾಟಕ ಸರ್ಕಾರದ ಪರಿಸರ ರಾಯಭಾರಿಯಾಗಿರುವ ವೃಕ್ಷ ಮಾತೆ, ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ಸ್ಥಿರ: ಅಪೊಲೊ ಆಸ್ಪತ್ರೆ ಹೆಲ್ತ್ ಬುಲೆಟಿನ್ ರಿಲೀಸ್
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದೆ.

ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ, ಚಿಕಿತ್ಸೆ ಮುಂದುವರಿಕೆ; ಆಶ್ರಮದತ್ತ ಸಾವಿರಾರು ಅಭಿಮಾನಿಗಳ ಆಗಮನ, ಭದ್ರತೆ ಹೆಚ್ಚಳ
ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ. ಈ ಮಧ್ಯೆ ಅಪಾರ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಆಶ್ರಮದತ್ತ ದೌಡಾಯಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅಶ್ರಮದಲ್ಲಿ ಅನ್ನದಾಸೋಹಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ: ಏಮ್ಸ್ ವೈದ್ಯರು
ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

