State budget 2023

ಸರ್ಕಾರದಲ್ಲಿ 5.5 ಲಕ್ಷ ಕೋಟಿ ರೂ. ಸಾಲ, ಬಜೆಟ್ ನಲ್ಲಿ ಘೋಷಣೆ ಮಾಡುವಾಗ ಮುಖ್ಯಮಂತ್ರಿಗಳು ಎಚ್ಚರಿಕೆ ವಹಿಸಬೇಕು: ತಜ್ಞರು
ಇಂದು ಶುಕ್ರವಾರ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆಲವೇ ಹೊತ್ತಿನಲ್ಲಿ ಮಂಡಿಸಲಿದ್ದಾರೆ.

2023-24ನೇ ಸಾಲಿನ ರಾಜ್ಯ ಬಜೆಟ್'ಗೆ ಕ್ಷಣಗಣನೆ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಬಂಪರ್ ಘೋಷಣೆಗಳ ನಿರೀಕ್ಷೆ
2023-24ನೇ ಸಾಲಿನ ರಾಜ್ಯ ಬಜೆಟ್'ಗೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ತಮ್ಮ ಎರಡನೆಯ ಹಾಗೂ ಈ ಸರ್ಕಾರದ ಕೊನೆಯ ಬಜೆಟ್ ಮಂಡನೆ ಮಾಡಲಿದ್ದಾರೆ.

ಇದು ಬಿಸಿಲು ಕುದುರೆ ಬಜೆಟ್, ಯಾರ ಕೈಗೂ ಸಿಗಲ್ಲ: ಡಿ.ಕೆ.ಶಿವಕುಮಾರ್
ಇದೊಂದು ಬಿಸಿಲು ಕುದುರೆ ಬಜೆಟ್ ಆಗಿದ್ದು, ಯಾರ ಕಣ್ಣಿಗೂ ಕಾಣಿಸುವುದಿಲ್ಲ, ಯಾರ ಕೈಗೂ ಸಿಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ರಾಜ್ಯ ಬಜೆಟ್ 2023: ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಘೋಷಣೆ
ಮುಖ್ಯಮಂತ್ರಿ ವಿದ್ಯಾಶಕ್ತಿ ಹೊಸ ಯೋಜನೆ ಘೋಷಿಸಿದ್ದಾರೆ. ಈ ಯೋಜನೆಯಡಿ ಸರ್ಕಾರಿ ಪದವಿ ಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಘೋಷಿಸಿದ್ದಾರೆ.

2023-24ನೇ ಸಾಲಿನ ರಾಜ್ಯ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ
ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2023-24ನೇ ಸಾಲಿನ ರಾಜ್ಯ ಬಜೆಟ್ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

LIVE: 2023-24ನೇ ಸಾಲಿನ ರಾಜ್ಯ ಬಜೆಟ್: 2ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಬೊಮ್ಮಾಯಿ
2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 2ನೇ ಬಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬಜೆಟ್ ಮಂಡಿಸುತ್ತಿದ್ದಾರೆ.

ರಾಮನಗರಕ್ಕೆ ಬಂಪರ್- ವಿರೋಧ ಪಕ್ಷಗಳಿಗೆ ಟಕ್ಕರ್: ರಾಮಮಂದಿರ ನಿರ್ಮಾಣ ಘೋಷಿಸಿದ ಚೀಫ್ ಮಿನಿಸ್ಟರ್!
2023-24ನೇ ಸಾಲಿನ ರಾಜ್ಯ ಬಜೆಟ್ ಅನ್ನು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದಾರೆ. ಬಜೆಟ್‌ನಲ್ಲಿ ರಾಮನಗರಕ್ಕೆ ವಿಶೇಷ ಕೊಡುಗೆ ನೀಡಲಾಗಿದೆ. ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಬಿಜೆಪಿ ಸರ್ಕಾರ ತೀರ್ಮಾನಿಸಿದೆ.

ರಾಜ್ಯ ಬಜೆಟ್ 2023-24: ಯಾವ ಇಲಾಖೆಗೆ ಎಷ್ಟು ಅನುದಾನ?
ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-2024ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಶಿಕ್ಷಣ ಇಲಾಖೆ, ಕೃಷಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಬಂಪರ್ ಅನುದಾನವನ್ನು ಘೋಷಣೆ ಮಾಡಿದ್ದಾರೆ.

