State budget 2026

ಕೇಂದ್ರ ಸರ್ಕಾರವೇ ಸಾಲ ಮಾಡುತ್ತೆ; ಆರ್ಥಿಕ ಶಿಸ್ತು, ಜನರ ಕಲ್ಯಾಣ, ಅಭಿವೃದ್ಧಿಯತ್ತ ಗಮನ ಹರಿಸಿದೆ: ಬಜೆಟ್ ಕುರಿತು ಸಿಎಂ ಸಿದ್ದರಾಮಯ್ಯ
ರಾಜ್ಯದ ಈ ವರ್ಷದ ಬಜೆಟ್ ಗಾತ್ರ 4,48,004 ಕೋಟಿ ರೂ.ಗಳಷ್ಟಾಗಲಿದೆ. 2025-26ರಲ್ಲಿ ನಮ್ಮ ಬಜೆಟ್ ಗಾತ್ರ 4,09,549 ರೂಗಳಷ್ಟಿತ್ತು. ಕಳೆದ ವರ್ಷದ ಆಯವ್ಯಯಕ್ಕೆ ಹೋಲಿಸಿದರೆ ಈ ಆಯವ್ಯಯವು 38,455 ಕೋಟಿ ರೂಗಳಷ್ಟು ಹೆಚ್ಚಾಗಿದ್ದು ಶೇ.9.4ರಷ್ಟು ಬೆಳವಣಿಗೆಯಾಗಿದೆ.

ಸುಂಕದ ಶಾಕ್: ಮದ್ಯದಲ್ಲಿರುವ ಆಲ್ಕೋಹಾಲ್ ಅಂಶ ಆಧರಿಸಿ ತೆರಿಗೆ, 45000 ಕೋಟಿ ರೂ ಸಂಗ್ರಹದ ಗುರಿ!
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದು ಮದ್ಯ ಪ್ರಿಯರಿಗೆ ಸುಂಕದ ಶಾಕ್ ನೀಡಿದ್ದಾರೆ. ಮದ್ಯದ ಮೇಲೆ ವಿಧಿಸುವ ತೆರಿಗೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ರಾಜ್ಯದ ರಾಜಸ್ವ ಸಂಗ್ರಹವನ್ನು ಗಣನೀಯವಾಗಿ ಏರಿಕೆ ಮಾಡಲು ನಿರ್ಧರಿಸಿದ್ದಾರೆ.

ಬೇರೆಯವ್ರಿಗೆ ಬಜೆಟ್ ಬೇಕು ನಮಗೆ ಬೇಡ, ನಮ್ಮ ಜಿಲ್ಲೆ ಕೆಲಸ ಬಜೆಟ್ ಮೇಲೆ ನಿಂತಿಲ್ಲ: ಡಿ.ಕೆ ಶಿವಕುಮಾರ್
ಇಡೀ ದೇಶದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಮಾತ್ರ ಒಂದು ಶಾಲೆಗೆ 15 ಕೋಟಿ ರೂ. ವೆಚ್ಚದಂತೆ 25 ಕೆಪಿಎಸ್ ಶಾಲೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇದನ್ನು ನಾವು ಬಜೆಟ್‌ನಲ್ಲಿ ಬರೆಸಿದ್ದೇವಾ?

ಬಜೆಟ್‌ನಲ್ಲಿ 200 ಕೋಟಿ ರೂ ಅನುದಾನಕ್ಕೆ ತೃತೀಯ ಲಿಂಗ ಸಮುದಾಯ ಆಗ್ರಹ; ಮಾತು ಉಳಿಸಿಕೊಳ್ಳುವಂತೆ ಸರ್ಕಾರಕ್ಕೆ ಒತ್ತಾಯ
ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ವರ್ಷಕ್ಕೆ ರೂ.200 ಕೋಟಿ ಅನುದಾನ ನೀಡುವುದಾಗಿ ಭರವಸೆ ನೀಡಿದ್ದರೂ, ಮೂರು ವರ್ಷಗಳಾದರೂ ಅದನ್ನು ಜಾರಿಗೆ ತರಲಾಗಿಲ್ಲ.

ರಾಜ್ಯ ಬಜೆಟ್ 2026-27: ಪರಿಸರ ರಕ್ಷಣೆಗೆ 4,500 ಕೋಟಿ ರೂ ಅನುದಾನ ಕೋರಿದ ಅರಣ್ಯ ಇಲಾಖೆ..!
ಮುಂದಿನ ಹಣಕಾಸು ವರ್ಷದ ರಾಜ್ಯ ಬಜೆಟ್ ಸುಮಾರು ರೂ. 4.5 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದ್ದು, ಇದರ 1 ಶೇಕಡಾ ಅಂದರೆ ರೂ. 4,500 ಕೋಟಿ ಅನುದಾನವನ್ನು ಅರಣ್ಯ ಹಾಗೂ ಪರಿಸರ ಇಲಾಖೆ ಕೋರಿದೆ.

Guarantee scheme: ಅರ್ಹವಲ್ಲದ ಫಲಾನುಭವಿಗಳ ಕೈಬಿಟ್ಟು ಹಣ ಉಳಿಸಲು ಸರ್ಕಾರ ಮುಂದು; ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಕಡಿತ?
2023ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತ್ತು. ಅದೇ ವರ್ಷ ಪೂರಕ ಬಜೆಟ್‌ನಲ್ಲಿ ಎಂಟು ತಿಂಗಳಿಗೆ ರೂ.35,410 ಕೋಟಿ ಅನುದಾನ ಮೀಸಲಿಡಲಾಗಿತ್ತು.

