ರಾಜಕೀಯಬೆಂಗಳೂರು: ಫ್ರೀಡಂ ಪಾರ್ಕ್ನಿಂದ ರಾಜಭವನದವರೆಗೆ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಇಡಿ ತನಿಖೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ಘಟಕದಿಂದ ಫ್ರೀಡಂ ಪಾರ್ಕ್ ನಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ. ಪೊಲೀಸರ ಬ್ಯಾರಿಕೇಡ್ ಗೂ ಬಗ್ಗದ ಕಾಂಗ್ರೆಸ್ ಮುಖಂಡರು, ಬ್ಯಾರಿಕೇಡ್ ನೆಗೆದು ಮೆರವಣಿಗೆಯಲ್ಲಿ ಸಾಗಿದರು.