State Government

ಪರೀಕ್ಷೆ ಇಲ್ಲದೆ ರೀಪಿಟರ್ಸ್ ಪಾಸು: ದ್ವಿತೀಯ ಪಿಯು ರಿಸಲ್ಟ್ ಘೋಷಣೆಗೆ ಸೂತ್ರವನ್ನು ಹೈಕೋರ್ಟ್ ಮುಂದಿಟ್ಟ ಸರ್ಕಾರ!
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲು ವಿದ್ಯಾರ್ಥಿಗಳ ಕಾರ್ಯಕ್ಷಮತೆ ಮೌಲ್ಯಮಾಪನ ಮಾಡಲು ಸೂತ್ರವೊಂದನ್ನು ರಾಜ್ಯ ಸರ್ಕಾರ ಸೋಮವಾರ ಹೈಕೋರ್ಟ್ ಮುಂದಿಟ್ಟಿದೆ.

ಶಾಲಾ ಶುಲ್ಕ ವಿವಾದದಲ್ಲಿ ಭಾವನೆಗಳನ್ನು ಪರಿಗಣಿಸಲು ಸಾಧ್ಯವಿಲ್ಲ: ಹೈಕೋರ್ಟ್
ಪ್ರಸಕ್ತ ಶೈಕ್ಷಣಿಕ ಸಾಲಿನ ಖಾಸಗಿ ಶಾಲೆಗಳ ಶುಲ್ಕ ವಿವಾದವನ್ನು ಬಗೆಹರಿಸಲು ಸಮಿತಿಯನ್ನು ರಚಿಸಿ ನ್ಯಾಯಾಲಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಅನುಮತಿ ಕೇಳಿರುವ ರಾಜ್ಯ ಸರ್ಕಾರದ ಹೇಳಿಕೆ ಭಾವನಾತ್ಮಕವಾಗಿದೆ ಎಂದು ಹೈಕೋರ್ಟ್ ಬಣ್ಣಿಸಿದೆ.

ಡೆಲ್ಟಾ ಪ್ಲಸ್ ವೈರಸ್ ಭೀತಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ
ಕೊರೊನಾ ಎರಡನೇ ಅಲೆ ಮುಗಿಯುವ ಮೊದಲೇ ಡೆಲ್ಟಾ ಪ್ಲಸ್ ಎಂಬ ರೂಪಾಂತರಿ ವೈರಸ್ಸನ್ನು ನಿಭಾಯಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ರೀತಿಯ ಕ್ರಮಗಳನ್ನು ಸಮರೋಪಾದಿಯಲ್ಲಿ ತೆಗೆದುಕೊಳ್ಳಬೇಕಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಒಳಚರಂಡಿ ವ್ಯವಸ್ಥೆ ಕೋರಿ ಪಿಐಎಲ್: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ರಾಮನಗರ ಜಿಲ್ಲೆಯ ಚನ್ನಪಟ್ಟಣದ ಒಳಚರಂಡಿ (ಯುಜಿಡಿ) ವ್ಯವಸ್ಥೆ ಒದಗಿಸುವಂತೆ ನಿರ್ದೇಶನ ನೀಡಬೇಕೆಂದು ಸ್ಥಳೀಯ ನಿವಾಸಿಗಳು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ರಾಜ್ಯಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.

ವೈದ್ಯರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ
ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಪ್ರಕರಣ ದಾಖಲಿಸಲು ಮತ್ತು ಕಠಿಣ ಸಾಂಕ್ರಾಮಿಕ ರೋಗಗಳ (ತಿದ್ದುಪಡಿ) ಕಾಯ್ದೆ 2020 ಅನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಶನಿವಾರ ರಾಜ್ಯ ಸರ್ಕಾರಗಳಿಗೆ ಹೇಳಿದೆ.

ರಾಜ್ಯದಲ್ಲಿ ಲೂಟಿಕೋರರ ಆಡಳಿತ: ಜಿದ್ದಿಗೆ ಬಿದ್ದವರಂತೆ ಪೈಪೋಟಿಯಿಂದ ಭ್ರಷ್ಟಾಚಾರ- ಸಿದ್ದರಾಮಯ್ಯ
ರಾಜ್ಯದಲ್ಲಿ ಹಣ ದೋಚಲು ಆಡಳಿತ ಪಕ್ಷದವರ ನಡುವೆಯೇ ಕಿತ್ತಾಟ ನಡೆಯುತ್ತಿದೆ. ನಾನೆಷ್ಟು, ನೀನೆಷ್ಟು ಎಂದು ಜಿದ್ದಿಗೆ ಬಿದ್ದವರಂತೆ ಪೈಪೋಟಿಯಿಂದ ಬ್ರಷ್ಟಾಚಾರ ಮಾಡುತ್ತಿದ್ದಾರೆ. ಇಂತಹ ಭ್ರಷ್ಟ ಸರ್ಕಾರವನ್ನು ಅಧಿಕಾರದಿಂದ ಕಿತ್ತು ಹಾಕಿದರೆ ಮಾತ್ರ ರಾಜ್ಯಕ್ಕೆ ಪರಿಹಾರ ದೊರೆಯಲಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವ ಕುರಿತು ಸುತ್ತೋಲೆ
ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಇಂದು ಸುತ್ತೋಲೆ ಹೊರಡಿಸಿದ್ದಾರೆ.

ಬಜೆಟ್ ನಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ಮೀಸಲಿಟ್ಟಿದ್ದು 168 ಕೋಟಿ ರೂ.; ಆದರೆ ಬಿಡುಗಡೆಯಾಗಿದ್ದು ಕೇವಲ 25 ಲಕ್ಷ ರೂ.!
ಬಜೆಟ್ ನಲ್ಲಿ ರಾಜ್ಯ ಸರ್ಕಾರ ಚುನಾವಣಾ ಆಯೋಗಕ್ಕೆ 168 ಕೋಟಿ ರು, ಅನುದಾನ ಮೀಸಲಿಟ್ಟಿತ್ತು, ಆದರೆ ಕೇವಲ 25 ಲಕ್ಷ ರು ಮಾತ್ರ ಹಣ ಬಿಡುಗಡೆ ಮಾಡಿದೆ.

ರಾಜ್ಯದ ಆರು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕೊರೋನಾ ಎರಡನೇ ಅಲೆ ನಿಯಂತ್ರಿಸಲು ಜಾರಿಯಾಗಿರುವ ಲಾಕ್ ಡೌನ್ ನಡುವೆಯೂ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಒಟ್ಟು 6 ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

