State Government

ಸಾರಿಗೆ ನೌಕರರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ, ಜನಸಾಮಾನ್ಯರ ಪರದಾಟ ತಪ್ಪಿಸಿ- ಎಂ.ಎಸ್. ರಕ್ಷಾ ರಾಮಯ್ಯ
ಯುಗಾದಿ ಸೇರಿದಂತೆ ಸರಣಿ ಹಬ್ಬಗಳ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಹಠ ಮಾರಿ ಧೋರಣೆಯಿಂದಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಒಂದು ವಾರದಿಂದ ಮುಷ್ಕರ ನಡೆಸುತ್ತಿದ್ದು, ಕೂಡಲೇ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆ ತಪ್ಪಿಸುವಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಒತ್ತಾಯಿಸಿದ್ದಾರೆ.

ಡಿಸಿ ಜೊತೆ ಪ್ರತಿಷ್ಠೆಗೆ ಬಿತ್ತ ಸರ್ಕಾರ? ರೋಹಿಣಿ ಸಿಂಧೂರಿ ಕೊರೋನಾ ಟಫ್ ರೂಲ್ಸ್ ಜಾರಿಗೆ ಬ್ರೇಕ್!
ಕೊರೋನಾ ನಿಯಂತ್ರಣ ವಿಚಾರದಲ್ಲಿ ಸರ್ಕಾರ ಪ್ರತಿಷ್ಠೆಗೇನಾದ್ರೂ ಬಿದ್ದಿದ್ಯಾ ಎಂಬ ಅನುಮಾನದ ಪ್ರಶ್ನೆ ಎದ್ದಿದೆ. ಇತ್ತೀಚಿಗೆ ಕೇಂದ್ರ ಸರ್ಕಾರ ಪ್ರಕಟಿಸಿದ್ದ ಮಾರ್ಗಸೂಚಿಯಲ್ಲಿ ಅಗತ್ಯಬಿದ್ರೆ ಜಿಲ್ಲಾಡಳಿತಗಳು ಟಫ್ ರೂಲ್ಸ್ ಜಾರಿ ಮಾಡಬಹುದು ಎಂದಿತ್ತು.

ಸರ್ಕಾರಿ ಶಾಲಾ ಮಕ್ಕಳಿಗೆ ಸ್ಮಾರ್ಟ್ ತರಗತಿ ಆರಂಭಿಸಲು ಸರ್ಕಾರ ಚಿಂತನೆ: ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ
ಕೊರೋನಾ ಆತಂಕದ ನಡುವೆ ಶಾಲೆಗಳು ಇನ್ನೂ ಮಕ್ಕಳಿಗೆ ಆರಂಭವಾಗದಿರುವ ಸಂದರ್ಭದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.

ಕರ್ತವ್ಯನಿರತ ಪೊಲೀಸರಿಗೆ ಬಾಡಿ ಕ್ಯಾಮೆರಾ ಕಡ್ಡಾಯ: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್
ಕರ್ತವ್ಯನಿರತ ಪೊಲೀಸರು ಕಡ್ಡಾಯವಾಗಿ ಬಾಡಿ ಕ್ಯಾಮೆರಾ ಧರಿಸಲು ನಿರ್ದೇಶಿಸಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ

ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ನಿಗದಿಪಡಿಸಿ: ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೊಟೀಸ್
ಸಮಯ ಮುಗಿದರೂ ಕೂಡ 21 ನಗರ ಸ್ಥಳೀಯ ಸಂಸ್ಥೆಗಳಿಗೆ ಇನ್ನೂ ಚುನಾವಣಾ ದಿನಾಂಕ ನಿಗದಿಪಡಿಸದಿರುವ ಬಗ್ಗೆ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನಿನ್ನೆ, ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ.

ಕೋವಿಡ್-19 ಚಿಕಿತ್ಸೆಗೆ ಮೀಸಲಾದ ಆಸ್ಪತ್ರೆಗಳ ಅಗ್ನಿ ಸುರಕ್ಷತಾ ಪರಿಶೋಧನೆ ನಡೆಸಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಆದೇಶ
ದೇಶಾದ್ಯಂತ ಕೋವಿಡ್-19 ಚಿಕಿತ್ಸೆಗೆ ನಿರ್ದಿಷ್ಟವಾಗಿರುವ ಆಸ್ಪತ್ರೆಗಳಲ್ಲಿ ಅಗ್ನಿ ಅವಘಡದಂತಹ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ಎಲ್ಲಾ ರಾಜ್ಯ ಸರ್ಕಾರಗಳು ಅಗ್ನಿ ಸುರಕ್ಷತಾ ಪರಿಶೋಧನೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.

ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ ಸ್ಥಾಪನೆ: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ ಸ್ಥಾಪನೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.

ಎಸ್ಮಾ ಜಾರಿ ಮಾಡಿ, ಎದುರಿಸಲು ಸಿದ್ಧ; ಸರ್ಕಾರಕ್ಕೆ ಕೋಡಿಹಳ್ಳಿ ಸವಾಲು
ಮುಷ್ಕರ ನಿರತ ಸಾರಿಗೆ ನೌಕರರ ವಿರುದ್ಧ ಸರ್ಕಾರ ಎಸ್ಮಾ ಜಾರಿ ಮಾಡುವುದಾದರೆ ಮಾಡಲಿ, 1.30 ಲಕ್ಷ ನೌಕರರು ಮತ್ತು ಅವರ ಕುಟುಂಬದವರು ಜೈಲಿಗೆ ಹೋಗಲು ಸಿದ್ಧರಾಗಿದ್ದೇವೆ ಎಂದು ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಬಿಬಿಎಂಪಿ ಚುನಾವಣೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸರ್ಕಾರ
ಆದಷ್ಟು ಬೇಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

