State Government

ಹಸಿರು ಪಟಾಕಿ ಮಾತ್ರ ಮಾರಾಟ ಮಾಡಲಾಗುತ್ತಿದೆಯೇ ಎಂಬುದನ್ನು ಖಚಿತ ಪಡಿಸಿಕೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ರಾತ್ರಿ 8 ರಿಂದ 10 ರವರೆಗೆ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಹಾಗೂ ಸರ್ಕಾರ ಹೊರಡಿಸಿರುವ ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಎಲ್ಲಾ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸರಿಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.

ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರ್ಯವೈಖರಿ ಬಗ್ಗೆ ತನಿಖೆ ಮಾಡುತ್ತೀರೋ, ಇಲ್ಲವೊ: ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ಕೋರ್ಟ್ ಆದೇಶ ಹೊರಡಿಸದಿದ್ದರೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್ ಪಿಸಿಬಿ)ಯಲ್ಲಿ ಯಾವುದೂ ಮುಂದೆ ಸಾಗುವುದಿಲ್ಲ ಎಂದು ರಾಜ್ಯ ಹೈಕೋರ್ಟ್ ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರ್ಯಶೈಲಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ.

ಐಎಂಎ ಠೇವಣಿದಾರರಿಗೆ ಹಣ; ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿದ ಸರ್ಕಾರ
ಐಎಂಎ ಕಂಪನಿಯ ಠೇವಣಿದಾರರಿಗೆ ಹಣ ಬಿಡುಗಡೆ ಮಾಡುವ ಸಂಬಂಧ ನ.25ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದೆಂದು ರಾಜ್ಯ ಸರ್ಕಾರ ಹೈಕೋರ್ಟ್'ಗೆ ಮಾಹಿತಿ ನೀಡಿದೆ.

ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ, ಹೆಚ್ಚಿದ ಆತಂಕ!
ಬಿಬಿಎಂಪಿ ವಾರ್ಡ್ ಗಳ ಪುನರ್ ವಿಂಗಡಣೆಗಾಗಿ ಸಮಿತಿಯೊಂದನ್ನು ರಚಿಸುವುದಾಗಿ ರಾಜ್ಯ ಸರ್ಕಾರ ಹೇಳಿದ ಬೆನ್ನಲ್ಲೇ ನಾಗರಿಕ ಗುಂಪುಗಳು, ಮಾಜಿ ಕಾರ್ಪೋರೇಟರ್ ಗಳು ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಜಿಎಸ್ಟಿ ಪರಿಹಾರ: ಕೇಂದ್ರ ಹಣಕಾಸು ಸಚಿವಾಲಯದ ಅಧಿಕೃತ ಪತ್ರದ ಮನವಿಯನ್ನು ಪರಿಶೀಲಿಸುತ್ತಿರುವ ರಾಜ್ಯ ಸರ್ಕಾರ
ಭವಿಷ್ಯದ ಜಿಎಸ್ಟಿ ಪರಿಹಾರಕ್ಕೆ ಬಡ್ಡಿ ಪಾವತಿ ಮತ್ತು ಸಾಲವನ್ನು ಹಿಂತಿರುಗಿಸಿರುವ ಬಗ್ಗೆ ಅಧಿಕೃತ ಪತ್ರ ನೀಡಬೇಕೆಂದು ಕೇಂದ್ರ ಸರ್ಕಾರ ಮಾಡಿರುವ ಮನವಿ ಬಗ್ಗೆ ರಾಜ್ಯ ಹಣಕಾಸು ಇಲಾಖೆ ಅಧ್ಯಯನ ನಡೆಸುತ್ತಿದೆ.

ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರ ಪತ್ರ
ಕೋವಿಡ್-19 ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಂದೂಡುವಂತೆ ರಾಜ್ಯ ಸರ್ಕಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.

ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತನೆ- ಎಚ್.ಡಿ.ಕುಮಾರಸ್ವಾಮಿ
ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೋನಾ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ.

ಗ್ರಾಮೀಣ ಭಾಗದಲ್ಲಿರುವ ಖಾಸಗಿ ಶಾಲೆಗಳ ನಿರ್ಲಕ್ಷ್ಯ: ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಆರೋಪ
ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೂ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿರುವ ಖಾಸಗಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಅನುದಾನ ರಹಿಸ ಖಾಸಗಿ ಶಾಲೆಗಳ ಸಂಘ ಆರೋಪಿಸಿದೆ.

ಅಕ್ಟೋಬರ್ 15ರವರೆಗೆ ಶಾಲೆ, ಕಾಲೇಜುಗಳಿಗೆ ಮಕ್ಕಳು ಬರುವಂತಿಲ್ಲ: ರಾಜ್ಯ ಸರ್ಕಾರ
ರಾಜ್ಯದಲ್ಲಿ ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಲೇ ಇರುವುದರಿಂದ ಅ.15ರವರೆಗೆ ಶಾಲಾ ಕಾಲೇಜುಗಲನ್ನು ಬಂದ್ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಕೆಲ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯ ಸಂದೇಹಗಳನ್ನು ಬಗೆಹರಿಸಿಕೊಳ್ಳಲು ಶಾಲೆ, ಕಾಲೇಜಿಗೆ ಭೇಟಿ ನೀಡಲು ಇದ್ದ ಅನುಮತಿಯನ್ನೂ ರದ್ದುಪಡಿಸಿದೆ.

