State Government

ಡ್ರಗ್ಸ್ ತಡೆಗೆ ಕಠಿಣ ಕಾನೂನು ಜಾರಿಗೆ ಮುಂದಾದ ರಾಜ್ಯ ಸರ್ಕಾರ
ರಾಜ್ಯದಲ್ಲಿ ಡ್ರಗ್ಸ್ ಕಾನೂನು ಬಲಪಡಿಸಲು ಉದ್ದೇಶಿಸಿರುವ ಸರ್ಕಾರ, ಡ್ರಗ್ಸ್ ಪ್ರಚೋದಕರನ್ನೂ ಕಾನೂನಿನ ವ್ಯಾಪ್ತಿಯೊಳಗೆ ತಂದು ಶಿಕ್ಷೆ ವಿಧಿಸಲು ತೀರ್ಮಾನಿಸಿದೆ. ಈ ಸಂಬಂಧದ ಕಾಯ್ದೆಗಳ ರಚನೆಗೆ ರಾಷ್ಟ್ರೀಯ ಕಾನೂನು ಶಾಲೆ ಮೊರೆಹೋಗಿದೆ.

ಕೊರೋನಾ ಆರ್ಥಿಕ ಸಂಕಷ್ಟ: ಹಣಕಾಸು ನೆರವಿಗಾಗಿ ಶಿವಮೊಗ್ಗ ಖಾಸಗಿ ಬಸ್ ನಿರ್ವಾಹಕರ ಕೋರಿಕೆ
ಕೊರೋನಾ ಲಾಕ್ ಡೌನ್ ಸಮಯದಲ್ಲಿ ಉಂಟಾದ ಆರ್ಥಿಕ ನಷ್ಟದ ಹಿನ್ನೆಲೆಯಲ್ಲಿ ಖಾಸಗಿ ಬಸ್ ನಿರ್ವಾಹಕರು ಸರ್ಕಾರದಿಂದ ಧನ ಕೋರಿದ್ದಾರೆ.

ರೈತರಿಗೆ ಅಗತ್ಯ ರಸಗೊಬ್ಬರ ಪೂರೈಸಲು ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಕೊರತೆ ಉಂಟಾಗಿದ್ದು, ರೈತರು ಮುಂದೇನು ಗತಿ ಎಂದು ಆತಂಕಕ್ಕೀಡಾಗಿದ್ದಾರೆ. ತಕ್ಷಣ ಸರ್ಕಾರ ಆದ್ಯತೆ ಮೇರೆಗೆ ಯೂರಿಯಾ ಆಮದು ಮಾಡಿಕೊಂಡು, ರೈತರಿಗೆ ಅಗತ್ಯ ಪ್ರಮಾಣದಲ್ಲಿ ವಿತರಿಸುವ ಕೆಲಸ ಮಾಡಬೇಕೆಂದು ಸಿಎಂ ಯಡಿಯೂರಪ್ಪ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇದೇ 16 ರಂದು ರಾಜ್ಯಸರ್ಕಾರದಿಂದ ವಿವಿಧ ಕಡೆಗಳಲ್ಲಿ ಸಾಲ ಮೇಳ, ಮೂರು ಲಕ್ಷದವರೆಗೂ ಯಾವುದೇ ಬಡ್ಡಿ ಇರಲ್ಲ
ಇದೇ ತಿಂಗಳ 16 ರಂದು ವಿವಿಧ ಕಡೆಗಳಲ್ಲಿ ಸಾಲ ಮೇಳವನ್ನು ರಾಜ್ಯ ಸರ್ಕಾರ ಆಯೋಜಿಸಿದೆ.ಇದರಿಂದಾಗಿ ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಉಲ್ಬಣದ ನಂತರ ಉದ್ಯೋಗ ಕಳೆದುಕೊಂಡಂತಹವರು ಮತ್ತು ವ್ಯವಹಾರ ಮುಂದುವರೆಸಲು ಆಗದೇ ಸಂಕಷ್ಟ ಪಡುತ್ತಿರುವ ಸಾವಿರಾರು ಜನರಿಗೆ ನೆರವಾಗುವ ಸಾಧ್ಯತೆಯಿದೆ.

ಒಳ ಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನ ವಿಸ್ತೃತ ಪೀಠದ ಆದೇಶಕ್ಕೆ ಕಾಯುತ್ತೇವೆ:ಗೋವಿಂದ ಎಂ.ಕಾರಜೋಳ
ಒಳ ಮೀಸಲಾತಿ ಬಗ್ಗೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ಆದೇಶ ಮತ್ತು ಸದಾಶಿವ ಆಯೋಗ ವರದಿ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸಂಡೆ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ್ದಾರೆ.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತ ಕಾಯುವಲ್ಲಿ ಸರ್ಕಾರ ವಿಫಲ: ಕಾಂಗ್ರೆಸ್ ಆರೋಪ
ಶಾಲೆಗಳನ್ನು ಪುನಾರಾರಂಭಿಸಲು ಸೂಕ್ತವಾದ ರೋಡ್ ಮ್ಯಾಪ್ ರೂಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಆರೋಪಿಸಿದೆ. ಅದರಲ್ಲೂ ವಿಶೇಷವಾಗಿ ಗ್ರಾಮೀಣ ಪ್ರದೇಶದ ಶಾಲಾ ಮಕ್ಕಳ ಬಗ್ಗೆ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

ಬಿಬಿಎಂಪಿ ಚುನಾವಣೆ ಮುಂದೂಡಲು ಸರ್ಕಾರದ ಕಸರತ್ತು: ಕೋರ್ಟ್ ಮೊರೆ ಹೋಗುವ ಸಾಧ್ಯತೆ
ಬಿಬಿಎಂಪಿ ಚುನಾವಣೆ ಮುಂದೂಡಲು ಸರಕಾರ ಕಸರತ್ತು ಆರಂಭಿಸಿದೆ. ಇದಕ್ಕಾಗಿ ವಾರ್ಡ್ ಮರು ವಿಂಗಡಣೆ ಅಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆಸುತ್ತಿದೆ.

ರಾಯಣ್ಣ ಪ್ರತಿಮೆ ಸ್ಥಾಪನೆ- ವಿವಾದ ಮಾಡಿಕೊಂಡಿದ್ದು ಸರ್ಕಾರದ ತಪ್ಪು- ಸಿದ್ದರಾಮಯ್ಯ
ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣ ವಿಚಾರದಲ್ಲಿ ರಾಜ್ಯ ಸರ್ಕಾರ ಬೇಗನೆ ಒಂದು ನಿರ್ಧಾರ ತೆಗೆದುಕೊಂಡಿದ್ದರೆ ಇಂದು ರಾಯಣ್ಣ ವರ್ಸಸ್ ಶಿವಾಜಿ, ಕನ್ನಡಿಗರು ವರ್ಸಸ್ ಮರಾಠಿಗರು ಎಂಬ ಪರಿಸ್ಥಿತಿಯೇ ನಿರ್ಮಾಣವಾಗುತ್ತಿರಲಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಪರಿಣಾಮಕಾರಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧ - ಗೋವಿಂದ ಕಾರಜೋಳ
ಕೇಂದ್ರ ಸರ್ಕಾರವು ಯುವಪೀಳಿಗೆಗೆ ಅನುಗುಣವಾಗಿ ರೂಪಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಬದ್ದವಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.

