State Government

ಐಎಂಎ ಹಗರಣ:ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಸರ್ಕಾರದ ಅನುಮತಿ ಕೇಳಿದ ಸಿಬಿಐ
4 ಸಾವಿರ ಕೋಟಿ ರೂಪಾಯಿಗಳ ಐಎಂಎ ಹಗರಣದಲ್ಲಿ ಲಂಚ ಸ್ವೀಕರಿಸಿದ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ,ಬೆಂಗಳೂರು ನಗರದ ಮಾಜಿ ಜಿಲ್ಲಾಧಿಕಾರಿ ಬಿಎಂ ವಿಜಯಶಂಕರ್, ಮಾಜಿ ಉಪ ವಿಭಾಗೀಯ ಅಧಿಕಾರಿ ಎಲ್ ಸಿ ನಾಗರಾಜ್ ಮತ್ತು ಮಾಜಿ ಗ್ರಾಮ ಲೆಕ್ಕಿಗ ಎನ್ ಮಂಜುನಾಥ್ ಅವರ ವಿರುದ್ಧ ತನಿಖೆ ನಡೆಸಲು ಸಿಬಿಐ ರಾಜ್ಯ ಸರ್ಕಾರದ ಅನುಮತಿ ಕೋರಿದೆ.

ಆಸ್ತಿಗಳನ್ನು ಕಾನೂನುಬದ್ಧಗೊಳಿಸಲು ಪರ್ಯಾಯ ಮಾರ್ಗದ ಹುಡುಕಾಟದಲ್ಲಿ ಸರ್ಕಾರ
ಸರ್ಕಾರದ ಬಹು ನಿರೀಕ್ಷಿತ ಅಕ್ರಮ-ಸಕ್ರಮ ಯೋಜನೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಹೀಗಾಗಿ ಆಸ್ತಿಗಳನ್ನು ಕಾನೂನು ಬದ್ದಗೊಳಿಸಲು ಸರ್ಕಾರ ಪರ್ಯಾಯ ಮಾರ್ಗ ಹುಡುಕುತ್ತಿದೆ.

ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್ ನಂತರ ಹೋಂ ಕ್ವಾರಂಟೈನ್ ಗೆ ಅವಕಾಶ: ಆರೋಗ್ಯ ಇಲಾಖೆ
ಕೊರೋನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸೋಂಕಿತರನ್ನು ಸಾಂಸ್ಥಿಕ ಕ್ವಾರೆಂಟೈನ್ ಗೆ ಒಳಪಡಿಸುವುದು ಬಹುದೊಡ್ಡ ಸವಾಲಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ಕೇಂದ್ರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಕ್ವಾರೆಂಟೈನ್ ಅವಧಿಯನ್ನು 7 ದಿನಕ್ಕೆ ಇಳಿಕೆ ಮಾಡಲಾಗಿದೆ.

ಕೊನೆಗೂ ವಲಸೆ ಕಾರ್ಮಿಕರ ಪರ ನಿಂತ ಸುಪ್ರೀಂ ಕೋರ್ಟ್: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೊಟೀಸ್
ನೂರಾರು ಮೈಲಿ ಸೈಕಲ್ ನಲ್ಲಿ ಮತ್ತು ಕಾಲ್ನಡಿಗೆಯಲ್ಲಿ ಹೋಗುವ ವಲಸೆ ಕಾರ್ಮಿಕರ ಕಷ್ಟದ ಪರಿಸ್ಥಿತಿ ಬಗ್ಗೆ ಕೊನೆಗೂ ಸುಪ್ರೀಂ ಕೋರ್ಟ್ ಗಮನ ಹರಿಸಿದ್ದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನೊಟೀಸ್ ಕಳುಹಿಸಿದೆ.

ಭಾರಿ ಸಂಖ್ಯೆಯ ವಲಸಿಗ ಕಾರ್ಮಿಕರಿಂದ ಗೊಂದಲ: ಸಂಕಷ್ಟಕ್ಕೆ ಮಿಡಿದ ಸಚಿವ ಡಾ.ಕೆ.ಸುಧಾಕರ್
ತಮ್ಮ ತಮ್ಮ ರಾಜ್ಯಗಳಿಗೆ ತೆರಳಲು ಒಡಿಶಾ ಮತ್ತು ಈಶಾನ್ಯ ರಾಜ್ಯಗಳ ವಲಸೆ ಕಾರ್ಮಿಕರು ಭಾರಿ ಸಂಖ್ಯೆಯಲ್ಲಿ ಆಗಮಿಸಿ ಗೊಂದಲ ಉಂಟಾಗಿದ್ದನ್ನು ಗಮನಿಸಿ ವೈದ್ಯಕೀಯ ಶಿಕ್ಷಣ ಸಚಿವರೇ ಖುದ್ದು ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ ಘಟನೆ ಶನಿವಾರ ಅರಮನೆ ಮೈದಾನದ ಬಳಿ ನಡೆಯಿತು.

ಇಂಟರ್ ಸಿಟಿ ವಿಶೇಷ ರೈಲುಗಳ ಸಂಚಾರಕ್ಕೆ ಅನುಮತಿ ಕೋರಿ ಭಾರತೀಯ ರೈಲ್ವೆಗೆ ರಾಜ್ಯ ಸರ್ಕಾರ ಮನವಿ
ರಾಜ್ಯದೊಳಗೆ ಪ್ರಮುಖ ನಗರಗಳ ನಡುವೆ ವಿಶೇಷ ರೈಲುಗಳ ಸಂಚಾರಕ್ಕೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಭಾರತೀಯ ರೈಲ್ವೆಗೆ ಮನವಿ ಮಾಡಿಕೊಂಡಿದೆ. ಕೆಲ ದಿನಗಳಲ್ಲಿ ತೀರ್ಮಾನವೊಂದನ್ನು ಕೈಗೊಳ್ಳವುದಾಗಿ ರೈಲ್ವೆ ಮಂಡಳಿ ತಿಳಿಸಿದೆ.

ರಾಜಧಾನಿ ಎಕ್ಸ್ ಪ್ರೆಸ್ ರೈಲು ದರ ಏರಿಕೆ: ಸರ್ಕಾರದ ವಿರುದ್ಧ ಮುಗಿಬಿದ್ದ ಪ್ರತಿಪಕ್ಷಗಳು
ರಾಜ್ಯ ರಾಜಧಾನಿಗೆ ಬರುವ ಜನರು ಹೆಚ್ಚಿನ ಹಣ ನೀಡಬೇಕಾಗಿದೆ, ಹೀಗಾಗಿ ಕೆಲ ನಾಯಕರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ರಾಜಧಾನಿ ಎಕ್ಸ್ ಪ್ರೆಸ್ ರೈಲಿನಲ್ಲಿ ಅಧಿಕ ಪ್ರಮಾಣದ ದರ ವಿಧಿಸಲಾಗುತ್ತಿದೆ.

ಲಾಕ್ ಡೌನ್: ಸಂಕಷ್ಟದಲ್ಲಿರುವವರಿಗೆ ಹೆಚ್ಚುವರಿಯಾಗಿ 162 ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ
ಕಳೆದ ಒಂದು ವಾರದ ಹಿಂದಷ್ಟೇ ಲಾಕ್ ಡೌನ್ ನಿಂದ ಸಂಕಷ್ಟದ ಪರಿಸ್ಥಿತಿಯಲ್ಲಿರುವವರಿಗೆ 1, 610 ಕೋಟಿ ರೂ. ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಿಸಿತ್ತು. ಇದೀಗ ಹೆಚ್ಚುವರಿಯಾಗಿ 162 ಕೋಟಿ ರೂ. ಪರಿಹಾರ ನೀಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಕೊರೊನಾ ಸಂಕಷ್ಟ: ಬಿಬಿಎಂಪಿ ಬಜೆಟ್ ಅನುದಾನ ಕಡಿತ ಮಾಡಿದ ಸರ್ಕಾರ!
ಕಳೆದ ಮೇ 7ರಂದು ಮಂಡನೆಯಾಗಿದ್ದ ಬಿಬಿಎಂಪಿ ಬಜೆಟ್ ಗೆ ಸರ್ಕಾರ ಅನುಮೋದನೆ ಕೊಟ್ಟಿದೆ.ಕೊರೊನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಜೆಟ್ ಅನುದಾನ ಕಡಿಗೊಳಿಸಿ ಸರ್ಕಾರ ಅನುಮೋದನೆ ನೀಡಿದೆ.

