State Government

ಕಾರ್ಮಿಕರ ವಲಸೆ ಕುರಿತ ಸುಳ್ಳು ಸುದ್ದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ರಾಜ್ಯಗಳಿಗೆ ಕೇಂದ್ರದ ಸೂಚನೆ
ಸಮಾಜಕ್ಕೆ ಮಾರಕವಾಗಿರುವ ಸುಳ್ಳು ಸುದ್ದಿಗಳ ವಿರುದ್ಧ ಸೂಕ್ತ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ನೀಡಿದೆ. ಈ ಸಂಬಂಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ

ಏಪ್ರಿಲ್ 12ರಿಂದ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಿದ ರಾಜ್ಯ ಸರ್ಕಾರ
ರಾಜ್ಯಾದ್ಯಂತ ಕೊರೋನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವಂತೆಯೇ ಇತ್ತ ರಾಜ್ಯ ಸರ್ಕಾರ ಇದೇ ಏಪ್ರಿಲ್ 12ರಿಂದ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಿದೆ.

ಲಾಕ್ ಡೌನ್ ಉಲ್ಲಂಘಿಸಿದರೇ ನಿಮ್ಮ ವಾಹನ ಸೀಜ್: ರಾಜ್ಯ ಸರ್ಕಾರದ ಮಹತ್ವದ ಆದೇಶ
ದೇಶಾದ್ಯಂತ ಕೊರೋನಾ ವೈರಸ್ ನಿರಂತರವಾಗಿ ಹರಡುತ್ತಲೇ ಇದೆ. ಹೀಗಾಗಿ ಕೇಂದ್ರ ಸರ್ಕಾರ 21 ದಿನಗಳ ಲಾಕ್ಡೌನ್ ಆದೇಶ ಹೊರಡಿಸಿದೆ. ಆದಾಗ್ಯೂ ಅನೇಕರು ರಸ್ತೆಯ ಮೇಲೆ ಅನಗತ್ಯವಾಗಿ ಸುತ್ತಾಡುತ್ತಿದ್ದಾರೆ. ಈ ಬಗ್ಗೆ ಪೊಲೀಸರು ಎಷ್ಟೇ ಸೂಚನೆ ನೀಡಿದರು ಜನರು ಮಾತ್ರ ಬದಲಾಗುತ್ತಿಲ್ಲ. ಹೀಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.

ಹೊಟೇಲ್‌ಗಳಲ್ಲಿ ಕ್ವಾರೆಂಟೇನ್ ಮಾಡಲು ಕಾಂಗ್ರೆಸ್ ನಾಯಕ ಎಚ್.ಕೆ.ಪಾಟೀಲ್ ಸಲಹೆ
ಹೊರದೇಶಗಳಿಂದ ರಾಜ್ಯಕ್ಕೆ ಬರುವವರಿಂದ ಸುರಕ್ಷಿತವಾಗಲು ಸರ್ಕಾರ ಕ್ವಾರೆಂಟೇನ್ ಮಾಡುವಂತೆ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ಸಲಹೆ ನೀಡಿದ್ದಾರೆ.

ಶುಲ್ಕ ವಿವರ ನೀಡದ ಖಾಸಗಿ ಶಾಲೆಗಳ ವಿರುದ್ಧ ದಂಡ ಹಾಕಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ
ಖಾಸಗಿ ಶಾಲೆಗಳಲ್ಲಿ ಮಕ್ಕಳ ಪೋಷಕರಿಂದ ತೆಗೆದುಕೊಳ್ಳುವ ಶುಲ್ಕದ ವಿವರ, ಶಿಕ್ಷಕ-ಶಿಕ್ಷಕಿಯರ ಮಾಹಿತಿ, ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲವಾದ ಖಾಸಗಿ ಶಾಲೆಗಳ ವಿರುದ್ಧ ದಂಡ ಹಾಕಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತಿಳಿಸಿದೆ.

'ಆರೋಗ್ಯ ವಿಚಾರದಲ್ಲಿ ರಾಜಕೀಯವಿಲ್ಲ: ಕೊರೋನಾ ತಡೆಗೆ ಸರ್ಕಾರಕ್ಕೆ ನನ್ನ ಬೆಂಬಲ'
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿರುವ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಶ್ರೀ ವೀರ ಸೋಮೇಶ್ವರ ಸ್ವಾಮಿ ಮತ್ತು ಶ್ರೀ ವೀರ ಗಂಗಾಧರೇಶ್ವರ ಸ್ವಾಮಿ ಅವರ ಆಶೀರ್ವಾದ ಪಡೆದರು.

ಎನ್ ಪಿಆರ್ ಜಾರಿಗೆ ತರುವುದಿಲ್ಲ ಎಂದು ರಾಜ್ಯ ಸರ್ಕಾರಗಳು ಒಂದಾಗಿ ನಿರ್ಧಾರ ತೆಗೆದುಕೊಳ್ಳಬೇಕು: ಮನೀಶ್ ತಿವಾರಿ
ರಾಜ್ಯ ಸರ್ಕಾರಗಳು ಒಟ್ಟಾಗಿ ನಿಂತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ(ಎನ್ ಪಿಆರ್)ನ್ನು ಜಾರಿಗೆ ತರುವುದಿಲ್ಲ ಎಂದು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಹೇಳಿದ್ದಾರೆ.

ಸದ್ಯದಲ್ಲಿಯೇ ಬೆಂಗಳೂರಿನಲ್ಲಿ ಆಸ್ತಿ ಬೆಲೆ ಏರಿಕೆ ಸಾಧ್ಯತೆ?
ರಾಜಧಾನಿ ಬೆಂಗಳೂರಿನಲ್ಲಿ ಸದ್ಯದಲ್ಲಿಯೇ ಆಸ್ತಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ. ಈ ವರ್ಷ ಶೇ. 8 ರಿಂದ 10 ರಷ್ಟು ಮಾರ್ಗಸೂಚಿ ಮೌಲ್ಯಗಳನ್ನು ಪರಿಷ್ಕರಿಸಲು ಸ್ಟಾಂಪ್ಸ್ ಮತ್ತು ನೋಂದಣಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ.

15 ದಿನದಲ್ಲಿ ಸರ್ಕಾರಿ ಡಿಪ್ಲೊಮಾ, ಪಾಲಿಟೆಕ್ನಿಕ್, ಚಿತ್ರಕಲಾ ಸಿಬ್ಬಂದಿಗಳಿಗೆ ವೇತನ: ಸರ್ಕಾರದ ಭರವಸೆ
ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಗೂ ಖಾಸಗಿ ಅನುದಾನಿತ ಚಿತ್ರಕಲಾ ಮಹಾವಿದ್ಯಾಲಯಗಳ ಅತಿಥಿ ಉಪನ್ಯಾಸಕರಿಗೆ, ಸಿಬ್ಬಂದಿಗಳ ಬಾಕಿ ವೇತನವನ್ನು ಇನ್ನು 15 ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಮೇಲ್ಮನೆಯ ಸದನಕ್ಕೆ ಭರವಸೆ ನೀಡಿದ್ದಾರೆ.

