State Tour

ನಿರಂತರ ಮಳೆಗೆ ಬೆಳೆ ಹಾನಿ: ರೈತರ ಸಾಲ ಮನ್ನಾಗೆ JDS ಆಗ್ರಹ; ರಾಜ್ಯ ಪ್ರವಾಸಕ್ಕೆ ನಿಖಿಲ್ ಕುಮಾರಸ್ವಾಮಿ ಮುಂದು
ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಕೈಗೊಳ್ಳಲಾಗಿದ್ದು, ಬೆಳೆ ಹಾನಿ, ಮನೆ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ನೀಡಲಿದ್ದೇವೆ.

BJP ಬಣ ಬಡಿದಾಟ: ಒಡೆದ ಮನಸ್ಸುಗಳ ಒಗ್ಗೂಡಿಸಲು ಶೀಘ್ರದಲ್ಲೇ ಶ್ರೀರಾಮುಲು ರಾಜ್ಯ ಪ್ರವಾಸ
ರಾಜ್ಯದಲ್ಲಿ ಬಿಜೆಪಿಯ ಎಲ್ಲಾ ನಾಯಕರೂ ಒಂದೇ ವೇದಿಕೆಯಲ್ಲಿ ಬರಬೇಕು. ಹೈಕಮಾಂಡ್ ಎಲ್ಲರನ್ನೂ ಒಟ್ಟಿಗೆ ತರಬೇಕು. ಬಿಜೆಪಿಯ ಎಲ್ಲಾ ಒಡೆದ ಮನಸ್ಸುಗಳನ್ನು ಒಟ್ಟುಗೂಡಿಸುವ ಸದುದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ.

BJP ಭಿನ್ನಮತ, ಬಣ ರಾಜಕೀಯ ತಾರಕಕ್ಕೆ: BSY ಅಖಾಡಕ್ಕೆ; ಪಕ್ಷ ಬಲಪಡಿಸಲು ರಾಜ್ಯ ಪ್ರವಾಸಕ್ಕೆ ಮುಂದು!
ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಬಲವರ್ಧನೆ ಕುರಿತು ಸಮಾಲೋಚನೆ ನಡೆಸಲಾಗಿದೆ. ಮುಂದಿನ ವಾರದಿಂದ ರಾಜ್ಯದ ಪ್ರತಿಯೊಂದು ಜಿಲ್ಲೆಗೆ ಭೇಟಿ ನೀಡಲಾಗುವುದು. ಪ್ರತಿ ದಿನ 2 ಜಿಲ್ಲೆಯಂತೆ ಪ್ರವಾಸ ಕೈಗೊಳ್ಳಲಾಗುವುದು.

ಅಸಮಾಧಾನಿತ ಹರಿಪ್ರಸಾದ್ ರಾಜ್ಯ ಪ್ರವಾಸ: ಹೈಕಮಾಂಡ್ ಮಧ್ಯ ಪ್ರವೇಶಿಸದಿದ್ದರೇ ಸಿಎಂಗೆ ಮತ್ತಷ್ಟು ಪ್ರಯಾಸ!
ಸಿದ್ದರಾಮಯ್ಯ ಸಂಪುಟದಿಂದ ಹೊರಗುಳಿದ ಹಿನ್ನೆಲೆಯಲ್ಲಿ ಆಸಮಾಧಾನಗೊಂಡಿರುವ ಕಾಂಗ್ರೆಸ್‌ನ ಹಿರಿಯ ಎಂಎಲ್‌ಸಿ ಬಿಕೆ ಹರಿಪ್ರಸಾದ್ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಪ್ರವಾಸಕ್ಕೆ ಯಾವುದೇ ಅಡ್ಡಿ ಇಲ್ಲ: ಸಿಎಂ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜ್ಯ ಪ್ರವಾಸಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಯಡಿಯೂರಪ್ಪ ಹಾದಿಯಲ್ಲೇ ಬೊಮ್ಮಾಯಿ; ಮುಖ್ಯಮಂತ್ರಿ ಸ್ಟೇಟ್ ಟೂರ್; ಮಾಜಿ ಸಿಎಂ ಪ್ರವಾಸ ದುರ್ಬಲಗೊಳಿಸುವ ಯತ್ನ?
ತಮ್ಮ ಗುರು-ಮಾರ್ಗದರ್ಶನ ಯಡಿಯೂರಪ್ಪ ಅವರ ಹಾದಿಯನ್ನೇ ಅನುಸರಿಸಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕಾರಿಣಿ: ಚುನಾವಣಾ ಕಾರ್ಯಸೂಚಿ ಚರ್ಚೆ, ನಾಲ್ಕು ತಂಡಗಳಿಂದ ರಾಜ್ಯಾದ್ಯಂತ ಪ್ರವಾಸ
ರಾಜ್ಯಾದ್ಯಂತ ಪಕ್ಷದ ಸಂಘಟನೆ, ಬಲವರ್ಧನೆ, ಸೇವಾ ಹಿ ಸಂಘಟನ, ಸೇವಾ ಸಮರ್ಪಣ ಅಭಿಯಾನ, ನಮೊ ಮೊಬೈಲ್ ಅಪ್ಲಿಕೇಶನ್ ಒಗ್ಗೂಡಿಸುವಿಕೆ ಸೇರಿದಂತೆ ಹಲವು ವಿಷಯಗಳನ್ನು ದಾವಣಗೆರೆಯಲ್ಲಿ ನಿನ್ನೆ ಆರಂಭವಾಗಿರುವ ಎರಡು ದಿನಗಳ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ನಾಯಕರು ಚರ್ಚಿಸಿದರು.

ಮೂಲೆಗುಂಪಾಗುವ ಆತಂಕ, ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಟ: ರಾಜ್ಯಾದ್ಯಂತ ಬಿಎಸ್ ವೈ ಪ್ರವಾಸ; ಬಿಸಿ ಮುಟ್ಟಿಸುವ ತಂತ್ರ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಕಟಿಸಿದ ಬೆನ್ನೆಲ್ಲೇ ಮಾಜಿ ಸಿಎಂ ಯಡಿಯೂರಪ್ಪ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.

ಪಕ್ಷ ಸಂಘಟನೆ, ಉಪಚುನಾವಣೆಗೆ ಕಾಂಗ್ರೆಸ್ ಸಿದ್ಧತೆ: ರಣದೀಪ್ ಸುರ್ಜೇವಾಲ 5 ದಿನಗಳ ರಾಜ್ಯ ಪ್ರವಾಸ
ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಇದೇ 22ರಿಂದ ರಾಜ್ಯ ಪ್ರವಾಸ ಮಾಡಲಿದ್ದು, 25 ಜಿಲ್ಲೆಗಳ ಕಾಂಗ್ರೆಸ್ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.

