ರಾಜ್ಯಸರ್ಕಾರದ ಮೊಂಡುತನದ ವಿರುದ್ಧ ತೀವ್ರ ಕಿಡಿ: ಸಾಮೂಹಿಕ ರಾಜೀನಾಮೆ ನೀಡುತ್ತೇವೆಂದ ಆಶಾ ಕಾರ್ಯಕರ್ತೆಯರು
ಸೇವೆಗಳನ್ನು ಸ್ಥಗಿತಗೊಳಿಸಿ ಕಳೆದ 10 ದಿನಗಳಿಂದ ಧರಣಿ ನಡೆಸುತ್ತಿದ್ದರೂ, ಯಾವುದೇ ಸ್ಪಂದನೆಗಳನ್ನು ನೀಡದೆ ಮೊಂಡುತನ ಪ್ರದರ್ಶಿಸುತ್ತಿರುವ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ತೀವ್ರವಾಗಿ ಕಿಡಿಕಾರಿದ್ದು, ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ.