Stray Dogs

ರಾಮಪುರ: ಬೀದಿ ನಾಯಿಗಳ ದಾಳಿಗೆ ಬಾಲಕನ ಸಾವು
ನಾಯಿಗಳು ತಲೆ, ಕಿವಿ, ಎದೆ, ಎರಡೂ ಕೈ ಮತ್ತು ಕಾಲುಗಳನ್ನು ಕಚ್ಚಿ ಬಾಲಕನನ್ನು ಘಾಸಿಗೊಳಿಸಿತ್ತು. ಮಿಥುನ್ ಅವರನ್ನು ತಕ್ಷಣ ಸಮುದಾಯ ಆರೋಗ್ಯಕ್ಕೆ ಸ್ಥಳಾಂತರಿಸಲಾಯಿತು.

ಬೀದಿ ನಾಯಿಗಳ ಅಕ್ರಮಣಶೀಲತೆ ತಗ್ಗಿಸಲು ಕ್ರಮ: ಆಹಾರ ವ್ಯವಸ್ಥೆಗೆ ಹೊಸ ಯೋಜನೆ: BBMP
ಬೀದಿ ನಾಯಿಗಳಿಗೆ ಆಹಾರ ಸಿಗದಂತಹ ಪ್ರದೇಶಗಳಲ್ಲಿ ‘ಆಹಾರ ವ್ಯವಸ್ಥೆ’ ಮಾಡುವುದಕ್ಕಾಗಿ ಹೊಸ ಯೋಜನೆಯನ್ನು ಬಿಬಿಎಂಪಿ ಪ್ರಾಯೋಗಿಕವಾಗಿ ಜಾರಿಗೆ ತರಲು ನಿರ್ಧರಿಸಿದ್ದು, ಇದರಿಂದ ಬೀದಿ ನಾಯಿಗಳು ಆಕ್ರಮಣಕಾರಿಯಾಗಿ ವರ್ತಿಸುತ್ತವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬೀದಿ ನಾಯಿ ಹಾವಳಿ ತಡೆಗೆ ಮೈಕ್ರೋಚಿಪ್ ಅಳವಡಿಕೆ: BBMP ವಿನೂತನ ಪ್ರಯೋಗಕ್ಕೆ ಚಾಲನೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಪಾಲಿಕೆಯ ಆರೋಗ್ಯ ಮತ್ತು ಪಶುಪಾಲನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಹೇಳಿದ್ದಾರೆ.

ಹೈದರಾಬಾದ್‌ನಲ್ಲಿ ಬೀದಿ ನಾಯಿಗಳ ದಾಳಿಗೆ ಐದು ತಿಂಗಳ ಕಂದಮ್ಮ ದಾರುಣ ಸಾವು
ಬೀದಿ ನಾಯಿಗಳ ದಾಳಿಯಲ್ಲಿ ಐದು ತಿಂಗಳ ಹಸುಗೂಸು ಸಾವಿಗೀಡಾಗಿರುವ ಮತ್ತೊಂದು ಭಯಾನಕ ಘಟನೆ ವರದಿಯಾಗಿದೆ. ಹೈದರಾಬಾದ್‌ನ ಶೇಕ್‌ಪೇಟ್ ಪ್ರದೇಶದ ವಿನೋಬಾ ನಗರದಲ್ಲಿ ತನ್ನ ಗುಡಿಸಲಿನಲ್ಲಿ ಮಲಗಿದ್ದ ಶಿಶು ಮೇಲೆ ಡಿಸೆಂಬರ್ 8 ರಂದು ಬೀದಿ ನಾಯಿಗಳ ಹಿಂಡು ದಾಳಿ ಮಾಡಿತ್ತು.

ಮಂಡ್ಯ: ಫುಟ್‌ಪಾತ್‌ನಲ್ಲಿ ಮಲಗಿದ್ದ ವೃದ್ಧನ ಮೇಲೆ ಬೀದಿ ನಾಯಿಗಳು ದಾಳಿ, ಸಾವು
ಮಂಡ್ಯ ಜಿಲ್ಲೆಯಲ್ಲಿ ಬೀದಿ ನಾಯಿಗಳ ಗುಂಪೊಂದು ಫುಟ್‌ಪಾತ್‌ನಲ್ಲಿ ಮಲಗಿದ್ದ ವೃದ್ಧನ ಮೇಲೆ ದಾಳಿ ನಡೆಸಿ, ಕೊಂದು ಹಾಕಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಾಯಿ ಕಡಿತ ಪ್ರಕರಣ ಕಳೆದ ವರ್ಷಕ್ಕಿಂತ ಹೆಚ್ಚಳ
ಕಳೆದ ವರ್ಷಕ್ಕೆ ಹೋಲಿಸಿದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಯಿ ಕಡಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.

ದೆಹಲಿ; ಬೀದಿನಾಯಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ; ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲು
ವ್ಯಕ್ತಿಯೊಬ್ಬ ಬೀದಿನಾಯಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ರಾಜೌರಿ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.

ಬೆಂಗಳೂರು: ಫುಡ್ ಡೆಲಿವರಿ ಏಜೆಂಟ್ ಮೇಲೆ ಬೀದಿ ನಾಯಿಗಳ ದಾಳಿ, ಇಬ್ಬರ ವಿರುದ್ಧ ಪ್ರಕರಣ ದಾಖಲು
53 ವರ್ಷದ ಫುಡ್ ಡೆಲಿವರಿ ಏಜೆಂಟ್ ಮೇಲೆ ಮೂರು ಬೀದಿ ನಾಯಿಗಳು ದಾಳಿ ಮಾಡಿರುವ ಘಟನೆ ನಡೆದಿದೆ. ಮಹಿಳೆ ಮತ್ತು ಆಕೆಯ ಮಗ ನಾಯಿಗಳನ್ನು ಏಜೆಂಟ್ ಮೇಲೆ ದಾಳಿ ಮಾಡುವಂತೆ ಪ್ರೇರೇಪಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಡ್ರೋನ್ ಮೂಲಕ ಬೀದಿ ನಾಯಿ ಗಣತಿಗೆ ತಜ್ಞರ ತಕರಾರು!
ಕೃತಕ ಬುದ್ಧಿಮತ್ತೆ (ಎಐ) ಹಾಗೂ ಡ್ರೋನ್ ಸಹಾಯದಿಂದ ನಗರದ ಕೆಲವು ಕೆರೆಗಳ ಪ್ರದೇಶದಲ್ಲಿರುವ ಬೀದಿ ನಾಯಿಗಳ ಗಣತಿ ಕಾರ್ಯವನ್ನು ಬಿಬಿಎಂಪಿ, ಭಾರತೀಯ ವಿಜ್ಞಾನ ಸಂಸ್ಥೆಯ ಸಹಯೋಗದಲ್ಲಿ ಆರಂಭಿಸಿದೆ.

