strike

6ನೇ ವೇತನ ಆಯೋಗದ ಶಿಫಾರಸು ಜಾರಿ ಸಾಧ್ಯವೇ ಇಲ್ಲ, ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ: ಸಾರಿಗೆ ನೌಕರರಿಗೆ ಸಿಎಂ ಯಡಿಯೂರಪ್ಪ
ಪ್ರಸ್ತುತದ ಪರಿಸ್ಥಿತಿಯಲ್ಲಿ ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸು ಜಾರಿ ಸಾಧ್ಯವೇ ಇಲ್ಲ. ಈಗಾಗಲೇ ಈ ಕುರಿತು ಸ್ಪಷ್ಟವಾಗಿ ಹೇಳಲಾಗಿದ್ದು, ಈಗಲೂ ಹಠ ಮಾಡುವುದು ಸರಿಯಲ್ಲ. ಈಗಲಾದರೂ ಅರ್ಥಮಾಡಿಕೊಂಡು ಕರ್ತವ್ಯಕ್ಕೆ ಹಾಜರಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

ಸಾರಿಗೆ ಸಚಿವರ ತವರು ಜಿಲ್ಲೆಯಲ್ಲೇ ಇಲಾಖೆ ನೌಕರ ಆತ್ಮಹತ್ಯೆ: ಅಧಿಕಾರಿಗಳಿಂದ ಕಿರುಕುಳ ಆರೋಪ
ವೇತನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಪ್ರತಿಭಟನೆ ತೀವ್ರವಾಗಿದೆ.

ಬಿಡದಿ ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಮುಷ್ಕರ: ಸರ್ಕಾರ ಮಧ್ಯ ಪ್ರವೇಶಿಸಬೇಕು- ಎಚ್ ಡಿಕೆ
ಬಿಡದಿ ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಮುಷ್ಕರಕ್ಕೆ ಎರಡು ತಿಂಗಳಾಗುತ್ತಿದೆಯಾದರೂ, ಪರಿಹಾರ ಕಾಣಿಸುತ್ತಿಲ್ಲ. ರಾಜ್ಯದ ಔದ್ಯಮಿಕ ಪ್ರಗತಿ ದೃಷ್ಟಿಯಿಂದ ಈ ಸಮಸ್ಯೆಗೆ ಅಂತ್ಯ ಹಾಡುವುದು ಈಗಿನ ಅಗತ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮುಂದುವರೆದ ಸಾರಿಗೆ ಸಿಬ್ಬಂದಿ ಮುಷ್ಕರ: ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರು
ರಾಜ್ಯದಲ್ಲಿ ಸಾರಿಗೆ ಸಿಬ್ಬಂದಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆ ಈಡೇರುವವರೆಗೂ ಮುಷ್ಕರ ಮುಂದುವರಿಸಲು ನೌಕರರು ಹಠಹಿಡಿದಿದ್ದು ಇದರಿಂದಾಗಿ ರಾಜ್ಯಾದ್ಯಂತ ಜನಜೀವನ ಭಾಧಿತವಾಗಿದೆ.

ಶಸ್ತ್ರಚಿಕಿತ್ಸೆಗೆ ಆಯುರ್ವೇದ ವೈದ್ಯರಿಗೆ ಅನುಮತಿ: ಇಂದು ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್
ಕೇಂದ್ರ ಸರ್ಕಾರವು ಆಯುರ್ವೇದ ವೈದ್ಯರಿಗೆ ಕೆಲವು ಶಸ್ತ್ರ ಚಿಕಿತ್ಸೆ ನಡೆಸಲು ಅವಕಾಶ ನೀಡಿರುವುದನ್ನು ವಿರೋಧಿಸಿ ಅಲೋಪತಿ ವೈದ್ಯರು ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಒಪಿಡಿ (ಹೊರರೋಗಿ ವಿಭಾಗದ) ಸೇವೆಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ಮುಂದಾಗಿವೆ.

ನಾಳೆ ಸಾರಿಗೆ ನೌಕರರ ಧರಣಿ: ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನೌಕರರು ಬೆಂಗಳೂರಿನಲ್ಲಿ ಗುರುವಾರ ಬೃಹತ್ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ.

ಸರ್ಕಾರಿ ವೈದ್ಯರ ಮುಷ್ಕರ ಸೆ.18ವರೆಗೂ ಮುಂದುವರಿಕೆ!
ಸರ್ಕಾರಿ ವೈದ್ಯರ ವೇತನ ಪರಿಷ್ಕರಣೆ, ಬಡ್ತಿ ಸೇರಿದಂತೆ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಸಮ್ಮತಿ ನೀಡಿದ್ದರೂ, ಕೆಲವು ಬೇಡಿಕೆಗಳ ಬಗ್ಗೆ ಹಗ್ಗ ಜಗ್ಗಾಟ ನಡೆಯುತ್ತಿದೆ. ಹೀಗಾಗಿ ಮಂಗಳವಾರದಿಂದ ಆರಂಭಿಸಿರುವ ಅಸಹಕಾರ ಮುಷ್ಕರವನ್ನು ಸೆ.18ರವರೆಗೆ ಮುಂದುವರಿಸಲು ಸರ್ಕಾರಿ ವೈದ್ಯರು ನಿರ್ಧರಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆರೋಗ್ಯ ಇಲಾಖೆ ವೈದ್ಯರಿಂದ ಮುಷ್ಕರ
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದಿನಿಂದ ಆರೋಗ್ಯ ಇಲಾಖೆ ವೈದ್ಯರು ಇಂದಿನಿಂದ ಸರ್ಕಾರಿ ಸಭೆಗಳನ್ನು ಬಹಿಷ್ಕರಿಸಿ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ.

ಡೀಸೆಲ್ ದರ ಕಡಿತದಲ್ಲಿ ನಿರ್ಲಕ್ಷ್ಯ: ಲಾರಿ ಮಾಲೀಕರಿಂದ ಮುಷ್ಕರದ ಬೆದರಿಕೆ
ಡೀಸೆಲ್ ಬೆಲೆ ಕಡಿತಗೊಳಿಸುವ ತಮ್ಮ ಬೇಡಿಕೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಗಣಿಸುತ್ತಿಲ್ಲ, ಒಂದು ವೇಳೆ ತಮ್ಮ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ ರಾಜ್ಯ ಮಾಲೀಕರ ಸಂಘ ರಾಷ್ಟ್ರದಾದ್ಯಂತ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಲಾರಿ ಮಾಲೀಕರ ಅಸೋಸಿಯೇಷನ್ ಫೆಡರೇಷನ್ ಅಧ್ಯಕ್ಷ ಬಿ. ಚನ್ನಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

