ದೇಶಲೋಕಸಭಾ ಚುನಾವಣೆಯಲ್ಲಿ ಜನರಿಂದ ಪ್ರಬಲ ವಿರೋಧ ಪಕ್ಷ ಆಯ್ಕೆ: ಸೂಪರ್ ಸ್ಟಾರ್ ರಜನಿಕಾಂತ್
ನರೇಂದ್ರ ಮೋದಿ ಅವರು ಇಂದು ಸಂಜೆ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೇಶ, ವಿದೇಶದ ಆಹ್ವಾನಿತ ಗಣ್ಯರು ರಾಷ್ಟ್ರ ರಾಜಧಾನಿಗೆ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೂಪರ್ ಸ್ಟಾರ್ ರಜನಿಕಾಂತ್ ಬೆಳಗ್ಗೆ ನವದೆಹಲಿಗೆ ತೆರಳಿದರು.