ರಾಜ್ಯಟೌನ್ ಶಿಪ್ ಗೆ ಭೂಮಿ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ, ಇಲ್ಲವೇ ನೈಸ್ ಸಂಸ್ಥೆಯಿಂದ ಭೂಮಿ ವಾಪಸ್!
ನೈಸ್ ಸಂಸ್ಥೆಯು ಟೌನ್ ಶಿಫ್ ಗೆಂದು ಭೂಮಿ ಸ್ವಾಧೀನಪಡಿಸಿಕೊಂಡ ರೈತರಿಗೆ ಸೂಕ್ತ ರೀತಿಯಲ್ಲಿ ಪರಿಹಾರ ನೀಡಬೇಕು. 2013ರಲ್ಲಿ ಕೆಐಎಡಿಬಿ ನಿಗದಿಪಡಿಸಿದ ದರದಲ್ಲಿ ಸಂಸ್ಥೆ ಪರಿಹಾರ ನೀಡದಿದ್ದರೆ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿ ಭೂಮಿ ವಾಪಸ್ ಕೊಡಿಸಲು ಕ್ರಮವಹಿಸಲಾಗುವುದು ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.