ರಾಜ್ಯರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಗೊಂದಲ ಬೇಡ; ಇದು ಸಂಪೂರ್ಣ ವಿದ್ಯಾರ್ಥಿ ಕೇಂದ್ರಿತ: ಡಾ. ಸಿ.ಎನ್. ಅಶ್ವತ್ಥ ನಾರಾಯಣ
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ದೇಶದ ಅಭಿವೃದ್ಧಿಗೆ ಪೂರಕವಾಗಿದ್ದರೂ ಇದರ ಬಗ್ಗೆ ಸಮಾಜದಲ್ಲಿ ಗೊಂದಲ ಸೃಷ್ಟಿಸುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಅದಕ್ಕೆ ಕಿವಿಗೂಡುವ ಅಗತ್ಯವಿಲ್ಲ. ಸರ್ಕಾರ ಕಲಿಕೆಯಲ್ಲಿ ಸುಧಾರಣೆ ತರುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.