ರಾಜ್ಯಶೌಚಗುಂಡಿಗೆ ಮಕ್ಕಳನ್ನು ಇಳಿಸಿದ ಪ್ರಕರಣ: ಅಧ್ಯಯನಕ್ಕೆ ಬಿಜೆಪಿ ಸಮಿತಿ ರಚನೆ
ಕೋಲಾರ ಜಿಲ್ಲೆಯ ಮಾಲೂರು ಸಮೀಪದ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಸ್ವಚ್ಛಗೊಳಿಸಿರುವ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಖಂಡಿಸಿದ್ದು, ಈ ಘಟನೆಯ ವಸ್ತುಸ್ಥಿತಿ ಅಧ್ಯಯನಕ್ಕೆ ರಾಜ್ಯ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.