Students

ಕೆಎಸ್‌ಆರ್‌ಟಿಸಿ ವಿದ್ಯಾರ್ಥಿ ಪಾಸ್ ಅವಧಿ ವಿಸ್ತರಣೆ; ಅಕ್ಟೋಬರ್ ವರೆಗೆ ಪ್ರಯಾಣಕ್ಕೆ ಅವಕಾಶ
ರಾಜ್ಯದ ಕೆಲವು ಕಾಲೇಜುಗಳು ಇನ್ನೂ ಪರೀಕ್ಷೆಗಳನ್ನು ನಡೆಸದ ಕಾರಣ 2022-23ನೇ ಶೈಕ್ಷಣಿಕ ವರ್ಷಕ್ಕೆ ನೀಡಲಾದ ಕೆಎಸ್‌ಆರ್‌ಟಿಸಿಯ ವಿದ್ಯಾರ್ಥಿ ಬಸ್ ಪಾಸ್‌ಗಳ ಅವಧಿಯನ್ನು ಅಕ್ಟೋಬರ್‌ವರೆಗೆ ವಿಸ್ತರಿಸಲಾಗಿದೆ.

ಕೋಟಾ ಆತ್ಮಹತ್ಯೆ: ಪೋಷಕರ ಮೇಲಿನ ಸಾಲದ ಹೊರೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ; ರಾಜಸ್ಥಾನ ಸಚಿವ
ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಜಸ್ಥಾನದ ಸಚಿವರು, ಪೋಷಕರ ಮೇಲಿನ ಶಿಕ್ಷಣದ ಸಾಲದ ಹೊರೆಯು ನೀಟ್ ಆಕಾಂಕ್ಷಿಗಳಲ್ಲಿ ಒತ್ತಡಕ್ಕೆ ಒಂದು ಕಾರಣವಾಗಿದ್ದು, ಪೋಷಕರು ಶಿಕ್ಷಣಕ್ಕಾಗಿ ಸಾಲ ಪಡೆಯದಂತೆ ಕೇಂದ್ರವು ನೀತಿಯನ್ನು ರೂಪಿಸಬೇಕು ಎಂದು ಸೋಮವಾರ ಹೇಳಿದ್ದಾರೆ.

ರಾಜ್ಯದ 1,695 ಅನಧಿಕೃತ ಶಾಲೆಗಳನ್ನು ಬಂದ್ ಮಾಡಲಾಗುವುದು: ಶಿಕ್ಷಣ ಸಚಿವ ಮಧು ಬಂಗಾರಪ್ಪ
ರಾಜ್ಯಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿದ್ದು, ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವನ್ನು ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚಲಾಗುತ್ತದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಅವರು ಶುಕ್ರವಾರ ಹೇಳಿದರು.

ರಾಜ್ಯಕ್ಕೆ ಬರುವ ಮಣಿಪುರದ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ನೀಡುವಂತೆ ಶಿಕ್ಷಣ ಇಲಾಖೆ ಸುತ್ತೋಲೆ
ಮಣಿಪುರ ರಾಜ್ಯದಲ್ಲಿನ ಪ್ರಸ್ತುತ ಪ್ರಕ್ಷುಬ್ದ ಪರಿಸ್ಥಿತಿಯಿಂದಾಗಿ ರಾಜ್ಯಕ್ಕೆ ಬರುವ ಮಣಿಪುರದ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿಯನ್ನು ನೀಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಖಾಸಗಿ ಕ್ಷಣಗಳ ವಿಡಿಯೋ ವೈರಲ್; ದಾವಣಗೆರೆಯ ಇಬ್ಬರು ಪದವಿ ವಿದ್ಯಾರ್ಥಿಗಳು ಆತ್ಮಹತ್ಯೆ!
ಖಾಸಗಿ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದರಿಂದ ನೊಂದು ದಾವಣಗೆರೆಯ ಪದವಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಉತ್ತರ ಪ್ರದೇಶ: ತರಗತಿಯಲ್ಲಿ ವಿದ್ಯಾರ್ಥಿಗಳ ಮುಂದೆ ನಗ್ನವಾಗಿ ಮಲಗಿದ ಮುಖ್ಯೋಪಾಧ್ಯಾಯನ ಅಮಾನತು!
ಮದ್ಯದ ಅಮಲಿನಲ್ಲಿ ವಿದ್ಯಾರ್ಥಿಗಳ ಮುಂದೆ ನಗ್ನವಾಗಿ ಮಲಗಿಕೊಂಡಿದ್ದ ವಿಶೇಶ್ವರ್‌ಗಂಜ್ ಪ್ರದೇಶದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನನ್ನು ಅಮಾನತು ಮಾಡಲಾಗಿದೆ.

ಮೈಸೂರು: ಹಾಸ್ಟೆಲ್ ಆಹಾರ ಸೇವಿಸಿದ 7 ವಿದ್ಯಾರ್ಥಿಗಳು ಅಸ್ವಸ್ಥ
ಗುಂಡ್ಲುಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ಆಹಾರ ಸೇವಿಸಿ 7 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಗುರುವಾರ ನಡೆದಿದೆ.

NEP-ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಿ 3 ವರ್ಷ; ಯೋಜನೆ ಬಗ್ಗೆ ಸಂಬಂಧಪಟ್ಟ ಸಂಪನ್ಮೂಲ ವ್ಯಕ್ತಿಗಳು ಏನಂತಾರೆ?
ರಾಷ್ಟ್ರೀಯ ಶಿಕ್ಷಣ ನೀತಿ(NEP)ಯನ್ನು ಜಾರಿಗೆ ತಂದ ನಂತರ ನಿಗದಿತವಾಗಿ ಆನ್ ಲೈನ್ ಕೋರ್ಸ್ ಗಳಿಗೆ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಾಗಿದೆ ಎನ್ನುತ್ತಾರೆ ಇಂಡಿಯನ್ ಇನ್ಸ್ಟ್ ಟ್ಯೂಟ್ ಆಫ್ ಸೈನ್ಸ್ ನ ನಿರ್ದೇಶಕ ಗೋವಿಂದನ್ ರಂಗರಾಜನ್.

ಜಂಗಲ್ ಲಾಡ್ಜಸ್: ಹಿರಿಯ ನಾಗರಿಕರು, ವಿದ್ಯಾರ್ಥಿಗಳಿಗೆ 'ವಿಶೇಷ ಪ್ಯಾಕೇಜ್’!
‘ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್‌ನ (ಜೆಎಲ್‌ಆರ್) ಬಳಕೆ ಹೆಚ್ಚಿಸಲು ಹಿರಿಯ ನಾಗರಿಕರು ಹಾಗೂ ವಿದ್ಯಾರ್ಥಿಗಳಿಗೆ ವಿಶೇಷ ಪ್ಯಾಕೇಜ್ ನೀಡಲು ನಿರ್ಧರಿಸಲಾಗಿದೆ’ ಎಂದು ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಸೋಮವಾರ ಹೇಳಿದರು.

