Students

ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್'ನ ಬ್ರೇಕ್ ಫೇಲ್: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ಮಹಾರಾಷ್ಟ್ರದ ಮಹಾಬಲೇಶ್ವರದಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಬೆಂಗಳೂರು: ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಮೊಬೈಲ್ ಹುಡುಕಲು ಹೋದವರಿಗೆ ಸಿಕ್ತು ಕಾಂಡೋಮ್, ಗರ್ಭನಿರೋಧಕ ಮಾತ್ರೆ; ಹೌಹಾರಿದ ಸಿಬ್ಬಂದಿ, ದಂಗಾದ ಪೋಷಕರು!
ಶಾಲಾ ವಿದ್ಯಾರ್ಥಿಗಳ ಬ್ಯಾಗ್‌ನಲ್ಲಿ ಕಾಂಡೋಮ್‌ಗಳು, ಲೈಟರ್, ಸಿಗರೇಟ್‌ಗಳು, ವೈಟ್‌ನರ್‌ಗಳು ಮತ್ತು ಗರ್ಭನಿರೋಧಕ ಮಾತ್ರೆ(ಐ-ಪಿಲ್), ನೀರಿನ ಬಾಟಲಿಗಳಲ್ಲಿ ಆಲ್ಕೋಹಾಲ್ ಇರುವುದೂ ಪತ್ತೆಯಾಗಿರುವ ಆಘಾತಕಾರಿ ಸಂಗತಿ ಹೊರಬಿದ್ದಿದೆ.

ರಾಜ್ಯ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ ಹೆಚ್ಚಳ, ಶಿಕ್ಷಕರ ಸಂಖ್ಯೆ ಮಾತ್ರ ಕಡಿಮೆ: ವರದಿ
2020-21ಕ್ಕೆ ಹೋಲಿಸಿದರೆ ಶಾಲಾ ಶಿಕ್ಷಣದ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಉನ್ನತ ಮಾಧ್ಯಮಿಕ ಮಟ್ಟದಲ್ಲಿ 2021-22 ರಲ್ಲಿ ಜಿಇಆರ್ (ಒಟ್ಟು ದಾಖಲಾತಿ ಅನುಪಾತ ) ಸುಧಾರಿಸಿದೆ ಎಂದು ವರದಿಯಿಂದ ತಿಳಿದುಬಂದಿದೆ.

ಶಾಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ 10 ನಿಮಿಷ ಧ್ಯಾನ ಕಡ್ಡಾಯ: ಸಚಿವ ಬಿ.ಸಿ.ನಾಗೇಶ್ ಸೂಚನೆ
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಧ್ಯಾನ ಮಾಡುವ ಸಂಬಂಧ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ.

ಕೋಟಿ ಕಂಠ ಗಾಯನ: ಕಾರವಾರದಲ್ಲಿ ಬಿಸಿಲ ಬೇಗೆಗೆ ಬಸವಳಿದು ಮೂರ್ಛೆ ಹೋದ ವಿದ್ಯಾರ್ಥಿಗಳು!
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ರಾಜ್ಯದ ಹಲವೆಡೆ ಕೋಟಿ ಕಂಠಸಿರಿಯಲ್ಲಿ ನನ್ನ ನಾಡು, ನನ್ನ ಹಾಡು ಹೆಸರಿನಲ್ಲಿ 6 ಹಾಡುಗಳು ಹೊರಮ್ಮಿವೆ.

ಬಿಎಂಟಿಸಿ ಬಸ್ ಹರಿದು ಮೃತಪಟ್ಟ ಬೆಂಗಳೂರು ವಿವಿ ವಿದ್ಯಾರ್ಥಿನಿ ಕುಟುಂಬಕ್ಕೆ 1.5 ಕೋಟಿ ರೂ. ಪರಿಹಾರಕ್ಕೆ ಒತ್ತಾಯ
ಬಿಎಂಟಿಸಿ ಬಸ್ ಹರಿದು ಮೃತಪಟ್ಟ ವಿದ್ಯಾರ್ಥಿನಿ ಕುಟುಂಬಕ್ಕೆ ರೂ.1.5 ಕೋಟಿ ಪರಿಹಾರ ನೀಡಬೇಕು ಎಂದು ಬೆಂಗಳೂರು ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಹಿಜಾಬ್ ವಿವಾದ: ಸುಪ್ರೀಂ ಕೋರ್ಟ್ ನ ಭಿನ್ನ ತೀರ್ಪಿನಿಂದ ಉಡುಪಿ ವಿದ್ಯಾರ್ಥಿನಿಯರಲ್ಲಿ ಭರವಸೆಯ ಆಶಾಕಿರಣ
ಹಿಜಾಬ್ ವಿವಾದ ಕುರಿತು ಸುಪ್ರೀಂ ಕೋರ್ಟ್ ನಿನ್ನೆ ಭಿನ್ನ ತೀರ್ಪು ನೀಡಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿರುವುದು ಹಿಜಾಬ್ ನಿಷೇಧ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿರುವ ವಿದ್ಯಾರ್ಥಿಗಳಲ್ಲಿ ಭರವಸೆಯ ಆಶಾಕಿರಣ ಮೂಡಿಸಿದೆ.

ಮಲ್ಪೆ: ಹೂಡೆ ಬೀಚ್ ನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವು
ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೂಡ್ ಬೀಚ್ ನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ.

ಗದಗ: ಹದಗೆಟ್ಟ ರಸ್ತೆಗಳ ವಿರುದ್ಧ ಗ್ರಾಮ ಪಂಚಾಯಿತಿ ಕಚೇರಿಗೆ ಘೇರಾವ್ ಹಾಕಿದ ವಿದ್ಯಾರ್ಥಿಗಳು
ಗದಗ ಜಿಲ್ಲೆಯ ಗೊಜನೂರು ಗ್ರಾಮದಲ್ಲಿ ಹಠಾತ್ ಪ್ರವಾಹಕ್ಕೆ ಬಸ್ ಜಲಾವೃತಗೊಂಡಿದ್ದು, ರಸ್ತೆ ಹದಗೆಟ್ಟಿರುವ ವಿರುದ್ಧ ಶಾಲಾ ಮಕ್ಕಳು ಶಾಲೆಗೆ ತೆರಳದೆ ಗ್ರಾಮ ಪಂಚಾಯಿತಿ ಕಚೇರಿಗೆ ಬಂದು ಪ್ರತಿಭಟನೆ ನಡೆಸಿದ್ದಾರೆ.

