Students

ಪೊಲೀಸರು ನಮ್ಮನ್ನು ಕ್ರಿಮಿನಲ್ ಗಳ ರೀತಿ ನಡೆಸಿಕೊಂಡರು: ಜಾಮಿಯಾ ವಿ.ವಿ ವಿದ್ಯಾರ್ಥಿಗಳು
ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿನಿಯರನ್ನು ತಳ್ಳಿದ್ದು ಈ ವೇಳೆ ಮಹಿಳಾ ಪೊಲೀಸರು ಇರಲಿಲ್ಲ ಎಂದಿದ್ದಾರೆ. ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾಗ ಅದು ಹಿಂಸಾತ್ಮಕ ರೂಪಕ್ಕೆ ತಿರುಗಿ ವಿದ್ಯಾರ್ಥಿಗಳು, ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ 40 ಮಂದಿ ಗಾಯಗೊಂಡಿದ್ದಾರೆ.

ಮೋದಿ ಸರ್ಕಾರ ದೇಶದ ವಿದ್ಯಾರ್ಥಿಗಳು, ಯುವಜನತೆ, ಪತ್ರಕರ್ತರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ: ಪ್ರಿಯಾಂಕಾ ಗಾಂಧಿ
ದೇಶದ ಜನರ ಸಮಸ್ಯೆಗಳನ್ನು ಆಲಿಸುವಲ್ಲಿ ಮೋದಿ ಸರ್ಕಾರ ಹೇಡಿತನ ಮಾಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ವಿದ್ಯಾರ್ಥಿಗಳು ಮತ್ತು ಪತ್ರಕರ್ತರ ಮೇಲೆ ದಬ್ಬಾಳಿಕೆ ತೋರುತ್ತಿದೆ ಎಂದು ಆರೋಪಿಸಿದ್ದಾರೆ.

ದೆಹಲಿಯಲ್ಲೂ ಹೊತ್ತಿಕೊಂಡ ಪೌರತ್ವ ಕಿಚ್ಚು: ಬಂಧನಕ್ಕೊಳಗಾಗಿದ್ದ 50 ವಿದ್ಯಾರ್ಥಿಗಳ ಬಿಡುಗಡೆ- ದೆಹಲಿ ಪೊಲೀಸರು
ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೆಹಲಿಯ ಜಾಮೀಯಾ ಮಿಲಿಯಾ ಇಸ್ಲಾಮಿಯಾ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ನಡೆಸಿದ್ದ ಪ್ರತಿಭಟನೆ ವೇಳೆ 50 ವಿದ್ಯಾರ್ಥಿಗಳನ್ನು ಬಂಧನಕ್ಕೊಳಪಡಿಸಲಾಗಿದ್ದು, ನಂತರ ಎಲ್ಲಾ ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಬಾಕಿ ಉಳಿಕೆ ಹಾಸ್ಟೆಲ್ ಶುಲ್ಕ ಪಟ್ಟಿ ಬಿಡುಗಡೆ ಮಾಡಿದ ಜೆಎನ್ ಯು: ಬೆದರಿಕೆ ತಂತ್ರ ಎಂದ ವಿದ್ಯಾರ್ಥಿಗಳು
ಹಾಸ್ಟೆಲ್ ನ ಶುಲ್ಕ ಮತ್ತು ಇತರ ಪಾವತಿ ಬಾಕಿ ಉಳಿಸಿಕೊಂಡಿರುವ ವಿದ್ಯಾರ್ಥಿಗಳ ಪಟ್ಟಿಯನ್ನು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಬಿಡುಗಡೆ ಮಾಡಿದೆ. ಇದು ವಿದ್ಯಾರ್ಥಿಗಳ ಮೇಲೆ ಬೆದರಿಕೆಯೊಡ್ಡುವ ತಂತ್ರ ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆ ಹೇಳಿದೆ.

ಬೆಳಗಾವಿ: ಮನುಷ್ಯನ ಕೂದಲಿನಿಂದ ಸಾವಯವ ರಸಗೊಬ್ಬರ ತಯಾರಿಸಿದ ವಿದ್ಯಾರ್ಥಿನಿಯರು!
ಯಾವುದಕ್ಕೂ ಉಪಯೋಗ ಬಾರದ ಮನುಷ್ಯನ ತಲೆಕೂದಲಿಂದ ನಿಮ್ಮ ತೋಟದಲ್ಲಿ ಯಾವುದಾದರೂ ಸಸ್ಯಗಳನ್ನು ಬೆಳೆಸಲು ಸಾಧ್ಯ ಎಂಬುದು ನಿಮಗೆ ಗೊತ್ತಿದೆಯೆ, ಹೌದು,ಬೆಳಗಾವಿಯ ಇಬ್ಬರು ವಿದ್ಯಾರ್ಥಿಗಳು ಇಂಥದೊಂದು ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ.

ದೆಹಲಿ: ತಾರಕಕ್ಕೇರಿದ ಜೆಎನ್ ಯು ಪ್ರತಿಭಟನೆ, ಸಂಸತ್ತಿಗೆ ಮೆರವಣಿಗೆ ಹೊರಟ ವಿದ್ಯಾರ್ಥಿಗಳನ್ನು ತಡೆದ ಪೊಲೀಸರು
ಹಾಸ್ಟೆಲ್ ಶುಲ್ಕ ಹೆಚ್ಚಳ ಸಂಪೂರ್ಣವಾಗಿ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುತ್ತಾ, ಭಿತ್ತಿಚಿತ್ರಗಳನ್ನು ಹೊತ್ತು ಸಾಗಿ ಸೋಮವಾರ ಸಂಸತ್ತಿನತ್ತ ಮೆರವಣಿಗೆ ಸಾಗಿದರು.

ಜೆಎನ್ ಯು ಕ್ಯಾಂಪಸ್ ಹೊರಗೆ ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ, ಪೊಲೀಸರ ನಿಯೋಜನೆ: ಸೆಕ್ಷನ್ 144 ಜಾರಿ
ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಸಮಸ್ಯೆಗಳನ್ನು ಬಗೆಹರಿಸಿ ಸಹಜ ಪರಿಸ್ಥಿತಿಗೆ ತರಲು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಮೂವರು ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿದೆ.

ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ; ವಿದ್ಯಾರ್ಥಿಗಳು ಪ್ರತಿಭಟನೆ ಹಿಂತೆಗೆದುಕೊಳ್ಳಬೇಕು: ಜೆಎನ್ ಯು ಉಪ ಕುಲಪತಿ
ಪ್ರತಿಭಟನೆಯಿಂದಾಗಿ ಕಳೆದ ಎರಡು ವಾರಗಳಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುತ್ತಿದ್ದು ವಿದ್ಯಾರ್ಥಿಗಳು ಮುಷ್ಕರವನ್ನು ನಿಲ್ಲಿಸಬೇಕು ಎಂದು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಉಪ ಕುಲಪತಿ ಮಮಿದಾಲ ಜಗದೀಶ್ ಕುಮಾರ್ ಮನವಿ ಮಾಡಿದ್ದಾರೆ.

ನಿಪ್ಪಾಣಿ: ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ಶಿಕ್ಷಕನ ಹಿಡಿದು ಗಳಗಳನೆ ಅತ್ತ ವಿದ್ಯಾರ್ಥಿಗಳು!
ಶಿಕ್ಷಕ ಹಾಗೂ ವಿದ್ಯಾರ್ಥಿಗಳ ಬಾಂಧವ್ಯ ಎಷ್ಟರ ಮಟ್ಟಿಗೆ ಇದೆ ಅಂದರೆ ಶಿಕ್ಷಕ ವರ್ಗಾವಣೆ ಆದ ನಂತರ ವಿದ್ಯಾರ್ಥಿಗಳು ಗಳಗಳನೇ ಅತ್ತ ಘಟನೆ ನಿಪ್ಪಾಣಿ ತಾಲೂಕಿನ ಬೋರಗಾಂವ ಪಟ್ಟಣದಲ್ಲಿ ನಡೆದಿದೆ.

