ರಾಜ್ಯಕಳಪೆ ಬೀಜ ಮಾರಾಟಗಾರರ ಒತ್ತಡ ತಂತ್ರಗಳಿಗೆ ಮಣಿಯುವುದಿಲ್ಲ: ಬಿ.ಸಿ. ಪಾಟೀಲ್
ರೈತರಿಗೆ ಒಳ್ಳೆಯದು ಮಾಡುವುದೇ ನನ್ನ ಕರ್ತವ್ಯ. ನಕಲಿ ಕಳಪೆ ಬೀಜ ಗೊಬ್ಬರ ಮಾರಾಟಗಾರರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಒತ್ತಡಕ್ಕೆ ಮಣಿಯುವುದು ತಾಯಿಯೇ ಮಗುವಿಗೆ ವಿಷವುಣಿಸಿದಂತೆ ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.