Sudha Murty

ಮತದಾನ ಪ್ರಜಾಪ್ರಭುತ್ವದ ಪವಿತ್ರ ಕರ್ತವ್ಯ, ಮತದಾನ ಮಾಡಿ: ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ, ಸುಧಾ ಮೂರ್ತಿ ಕರೆ
ಬೆಳಿಗ್ಗೆ 6 ಗಂಟೆಗೆ ಎದ್ದು ಮತದಾನ ಮಾಡುತ್ತಿದ್ದೇವೆ. ವಯಸ್ಸಾಗಿರುವ ನಮ್ಮನ್ನು ನೋಡಿ ಕಲಿಯಿರಿ. ಮತದಾನ ಮಾಡುವುದು ಪ್ರಜಾಪ್ರಭುತ್ವದ ಪವಿತ್ರ ಕರ್ತವ್ಯ. ಮತಕೇಂದ್ರಕ್ಕೆ ಬಂದು ಮತದಾನ ಮಾಡಿ ಮಾಡಿ ಎಂದು ಯುವ ಮತದಾರರಿಗೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಅವರು ಕರೆ ನೀಡಿದ್ದಾರೆ.

ನನ್ನ ಮಗಳು ಅಕ್ಷತಾ ಮೂರ್ತಿ ತನ್ನ ಗಂಡನನ್ನು ಪ್ರಧಾನಿಯನ್ನಾಗಿ ಮಾಡಿದ್ದಾಳೆ: ಸುಧಾ ಮೂರ್ತಿ
ಆನ್‌ಲೈನ್‌ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಸುಧಾ ಮೂರ್ತಿಯವರು ತಮ್ಮ ಮಗಳಿಂದಾಗಿ ರಿಷಿ ಸುನಕ್ ಯುಕೆಯ ಅತ್ಯಂತ ಕಿರಿಯ ಪ್ರಧಾನಿಯಾಗಿದ್ದಾರೆ. 'ನಾನು ನನ್ನ ಪತಿಯನ್ನು ಉದ್ಯಮಿ ಮಾಡಿದ್ದೇನೆ, ನನ್ನ ಮಗಳು ಆಕೆಯ ಪತಿಯನ್ನು ಯುಕೆ ಪ್ರಧಾನಿಯನ್ನಾಗಿ ಮಾಡಿದ್ದಾಳೆ' ಎಂದು ಹೇಳಿಕೊಂಡಿದ್ದಾರೆ.

ನನಗೆ ಸಿಕ್ಕಿದ ಮನ್ನಣೆ ಯುವ ಪೀಳಿಗೆ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆಯಾಗಬಹುದು ಎಂದು ಭಾವಿಸುತ್ತೇನೆ: ಸುಧಾ ಮೂರ್ತಿ
ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ, ಪರೋಪಕಾರಿ ಸುಧಾ ಮೂರ್ತಿ ಅವರಿಗೆ 2023ನೇ ಸಾಲಿನಲ್ಲಿ ಸಾಮಾಜಿಕ ಕಾರ್ಯಕ್ಕೆ ಪದ್ಮ ಭೂಷಣ ಪ್ರಶಸ್ತಿ ಲಭಿಸಿದೆ.

ಪದ್ಮಭೂಷಣ ಪ್ರಶಸ್ತಿ ವಿಚಾರ ಅಚ್ಚರಿ ಮೂಡಿಸಿತ್ತು: ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ
ಪ್ರಶಸ್ತಿ ಬಂದಿರುವುದು ಅಚ್ಚರಿ ಮೂಡಿಸಿತ್ತು. ಪ್ರಶಸ್ತಿಗೆ ನನ್ನನ್ನು ಯಾರು ನಾಮಿನೇಟ್ ಮಾಡಿದ್ದಾರೆ ಎಂಬುದು ನನಗೂ ಗೊತ್ತಿಲ್ಲ. ನಾನು ಮಾಡುವ ಸಣ್ಣ ಕೆಲಸಕ್ಕಾಗಿ ಜನರು ನನ್ನನ್ನು ಮೂರನೇ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯೊಂದಿಗೆ ಗುರುತಿಸಿರುವುದು ದೊಡ್ಡ ಗೌರವ ಎಂದು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಅವರು ಹೇಳಿದ್ದಾರೆ.

ಸುಧಾ ಮೂರ್ತಿಯವರ ಹೊಸ ಪುಸ್ತಕ, ಮಕ್ಕಳಿಗೆ ದೀಪಾವಳಿ ಉಡುಗೊರೆ
ಇನ್ಪೋಸಿಸ್ ಫೌಂಡೇಶನ್ ಮುಖಸ್ಥೆ ಹಾಗೂ ಲೇಖಕಿ ಸುಧಾ ಮೂರ್ತಿ ಅವರು ಮಕ್ಕಳಿಗೆ ದೀಪಾವಳಿ ಉಡುಗೊರೆಯೊಂದನ್ನು ನೀಡಿದ್ದಾರೆ.

ಡಾ. ಸುಧಾಮೂರ್ತಿ ಬಗ್ಗೆ ಅವಹೇಳನ: ನಿರ್ದೇಶಕ ಅಮರ್ ವಿರುದ್ಧ ದೂರು
ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರನ್ನು ಅವಹೇಳನ ಮಾಡಿದ ಆರೋಪದಡಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬನ್ನೇರುಘಟ್ಟ ಉದ್ಯಾನದ ಆನೆಮರಿಗೆ ಸುಧಾಮೂರ್ತಿ ಹೆಸರು ನಾಮಕರಣ
ಬನ್ನೇರುಘಟ್ಟ ಜೈವಿಕ ಉದ್ಯಾನವನದ ಆನೆಯ ಮರಿಯೊಂದಕ್ಕೆ ಲೇಖಕಿ, ಸಮಾಜ ಸೇವಕಿ, ಇನ್ಫೋಸಿಸ್ ಫೌಂಡೇಶನ್‌ನ ಅಧ್ಯಕ್ಷೆ ಸುಧಾ ಮೂರ್ತಿ ಅವರ ಹೆಸರಿಡಲಾಗಿದೆ. ಇದು ವನ್ಯಜೀವಿ ಸಂರಕ್ಷಣೆಗೆ ಅವರು ನೀಡಿದ ಕೊಡುಗೆಗಳಿಗೆ ಧನ್ಯವಾದ ಸೂಚಿಸಲಿಕ್ಕಾಗಿದೆ ಎಂದು ಜೈವಿಕ ಉದ್ಯಾನದ ಅಧಿಕಾರಿಗಳು ಹೇಳಿದ್ದಾರೆ.

ಕೊರೋನಾ: ದಕ್ಷಿಣ ಕನ್ನಡ ಜಿಲ್ಲೆಗೆ 28 ಲಕ್ಷ ರೂ. ಮೌಲ್ಯದ ವೈದ್ಯಕೀಯ ಸಲಕರಣೆಗಳ ನೆರವು ನೀಡಿದ ಸುಧಾ ಮೂರ್ತಿ
ಮಾರಕ ಕೊರೋನಾ ಸೋಂಕು ನಿಯಂತ್ರಿಸಲು ದಕ್ಷಿಣ ಕನ್ನಡ ಜಿಲ್ಲೆಗೆ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾ ಮೂರ್ತಿ ನೆರವು ನೀಡಿದ್ದಾರೆ.

ಈ ದಂಪತಿಗೆ ಸುಧಾಮೂರ್ತಿಯವರೇ ಪ್ರೇರಣೆ: ಸರ್ಕಾರಿ ಶಾಲೆ ನಿರ್ಮಾಣಕ್ಕೆ 1.9 ಕೋಟಿ ರೂ. ಕೊಡುಗೆ
ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿಯವರಿಂದ ಸ್ಪೂರ್ತಿ ಪಡೆದು ಕಂಪೆನಿಯ ಮಾಜಿ ಉದ್ಯೋಗಿಗಳಾದ ಹರ್ಷ ಮತ್ತು ಮಮತ ದಂಪತಿ ತುಮಕೂರು ಜಿಲ್ಲೆಯ ಕೋರಾ ಗ್ರಾಮದಲ್ಲಿ ಸುಸಜ್ಜಿತ ಸರ್ಕಾರಿ ಶಾಲೆಯನ್ನು ನಿರ್ಮಿಸಲು ಮುಂದಾಗಿದ್ದಾರೆ.

