Sudhakar

ಬಿಜೆಪಿ ಶಾಸಕ ಎಸ್. ರಘು ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ: ತಪ್ಪಿತಸ್ಥರ ವಿರುದ್ಧ ಕ್ರಮ- ಸಚಿವ ಸುಧಾಕರ್
ಸಿ.ವಿ.ರಾಮನ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ರಘು ಅವರ ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಚಿವ ಸುಧಾಕರ್ ಅವರು ಮಂಗಳವಾರ ಹೇಳಿದ್ದಾರೆ.

ಪಾಸಿಟಿವಿಟಿ ದರ ಶೇ.5ಕ್ಕಿಂತ ಕೆಳಗಿಳಿವವರೆಗೆ ಲಾಕ್ಡೌನ್ ವಿಸ್ತರಿಸಿ: ಸರ್ಕಾರಕ್ಕೆ ತಜ್ಞರ ಸಮಿತಿ ಸಲಹೆ
ನಿತ್ಯದ ಸೋಂಕಿನ ಪ್ರಮಾಣ 5 ಸಾವಿರದೊಳಗೆ ಬರಬೇಕು ಹಾಗೂ ಪಾಸಿಟಿವಿಟಿ ದರ ಶೇ.5 ಮತ್ತು ಸಾವಿನ ದರ ಶೇ.1ರ ಮಿತಿಯೊಳಗೆ ಬರಬೇಕು. ಇಷ್ಟು ಬೆಳವಣಿಗೆಗಳು ಕಂಡು ಬರುವವರೆಗೂ ರಾಜ್ಯದಲ್ಲಿ ಲಾಕ್ಡೌನ್ ಮುಂದುವರೆಸಬೇಕು.ಈ ಗುರಿ ಸಾಧನೆ ಜೂ.7ರೊಳಗೆ ಅಸಂಭವವಾದ ಕಾರಣ ಕನಿಷ್ಟ ಒಂದು ವಾರ ಲಾಕ್ಡೌನ್ ವಿಸ್ತರಿಸಿ ಎಂದು ಕೊರೋನಾ ತಾಂತ್ರಿಕ...

ರಾಜ್ಯದಲ್ಲಿ 1,250 ಜನರಿಗೆ ಬ್ಲ್ಯಾಕ್ ಫಂಗಸ್: 39 ಮಂದಿ ಸಾವು
ಕರ್ನಾಟಕದಲ್ಲಿ ಈವರೆಗೆ ಒಟ್ಟು 1,250 ಜನರಿಗೆ ಬ್ಲಾಕ್ ಫಂಗಸ್ ಸೋಂಕು ಉಂಟಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ 39 ಜನರು ಸಾವನ್ನಪ್ಪಿದ್ದಾರೆಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಶೀಘ್ರದಲ್ಲೇ ಎಲ್ಲರಿಗೂ ಲಸಿಕೆ, ಕೊರೋನಾ 3ನೇ ಅಲೆ ತಡೆಯಲು ಇದೊಂದೇ ರಾಮಬಾಣ: ಸಚಿವ ಸುಧಾಕರ್
ಆದಷ್ಟು ಬೇಗ ಎಲ್ಲರಿಗೂ ಲಸಿಕೆ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಇದರಿಂದ ಕೊರೋನಾ ಮೂರನೇ ಅಲೆಯನ್ನು ತಡೆಯಬಹುದು. ಲಸಿಕೆ ಅಭಿಯಾನ ಬಹಳ ಮುಖ್ಯ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಕೋಟಾದಡಿ 2 ಲಕ್ಷ ಡೋಸ್ ಕೋವಿಶೀಲ್ಡ್ ಬುಧವಾರ ರಾಜ್ಯಕ್ಕೆ ಆಗಮನ: ಡಾ. ಕೆ. ಸುಧಾಕರ್
ಕೇಂದ್ರ ಸರ್ಕಾರದ ಕೋಟಾದಡಿಯಲ್ಲಿ ಬುಧವಾರ 2 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ರಾಜ್ಯಕ್ಕೆ ಬಂದಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಕೇಂದ್ರದಿಂದ ರಾಜ್ಯಕ್ಕೆ 1.25 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕೆ ಬಂದಿದೆ: ಸಚಿವ ಸುಧಾಕರ್
ಕೇಂದ್ರ ಸರ್ಕಾರದ ಕೋಟಾದಡಿಯಲ್ಲಿ 1.25 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕೆ ಕರ್ನಾಟಕಕ್ಕೆ ಬಂದಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರು ಮಂಗಳವಾರ ಹೇಳಿದ್ದಾರೆ.

ಪಾರದರ್ಶಕತೆ ಕಾಯ್ದುಕೊಳ್ಳಲು ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ: ಸಚಿವ ಸುಧಾಕರ್
ಪಾರದರ್ಶಕತೆ ಕಾಯ್ದುಕೊಳ್ಳುವ ಸಲುವಾಗಿ ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಕಡ್ಡಾಯ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರು ಹೇಳಿದ್ದಾರೆ.

ದಾವಣಗೆರೆ: ಸೋಂಕಿತರಿಗೆ ಹೋಂ ಐಸೋಲೇಷನ್ ಇಲ್ಲ, ಕೋವಿಡ್ ಕೇಂದ್ರಕ್ಕೆ ದಾಖಲಾಗುವುದು ಕಡ್ಡಾಯ- ಸುಧಾಕರ್
ಹೋಂ ಐಸೋಲೇಷನ್‌ಗೊಳಗಾದ ಕೋವಿಡ್ ಸೋಂಕಿತರಿಂದಲೇ ಇತರರಿಗೂ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್‌ಗೆ ಅವಕಾಶ ನೀಡುವುದಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

ಆಯುಷ್ಮಾನ್ ಭಾರತದಲ್ಲಿ ಕರ್ನಾಟಕ ರಾಜ್ಯ ದೇಶಕ್ಕೇ ನಂ.1
ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಅಡಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಯೋಜನೆಯನ್ನು ಜಾರಿಗೊಳಿಸುವಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಮುಂಚೂಣಿಯಲ್ಲಿದ್ದು, 2020-21ನೇ ಸಾಲಿನ ಮೂರನೇ ಮತ್ತು ನಾಲ್ಕನೇ ತ್ರೈಮಾಸಿಕದಲ್ಲಿ 95 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದುಕೊಂಡಿದೆ.

