ರಾಜಕೀಯಸಕ್ಕರೆ ಜಿಲ್ಲೆ ರೈತರ ಓಲೈಕೆಗೆ ಮುಂದಾದ ಸಿಎಂ: 'ತವರು ಮನೆ' ಸೆಂಟಿಮೆಂಟ್ ಕಾರ್ಡ್ ಪ್ಲೇ!
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಳೇ ಮೈಸೂರು ಭಾಗದಲ್ಲಿ ಕೇಸರಿ ಪತಾಕೆ ಹಾರುವಂತೆ ಮಾಡಲು ಸಿಎಂ ಯಡಿಯೂರಪ್ಪ ಅವರಿಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ತಮ್ಮ ಕೆಲಸ ಆರಂಭಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮತ್ತು ಒಕ್ಕಲಿಗರ ಪ್ರಾಬಲ್ಯವಿರುವ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಪ್ರಬಲಗೊಳಿಸಲು ಮುಂದಾಗಿದ್ದಾರೆ.