summons

ದೆಹಲಿ ಜಲ ಮಂಡಳಿ ಪ್ರಕರಣ: ಇ.ಡಿ ತನಿಖೆಗೆ ಅರವಿಂದ ಕೇಜ್ರಿವಾಲ್ ಗೈರು; ಸಮನ್ಸ್ ಕಾನೂನುಬಾಹಿರ ಎಂದ ಎಎಪಿ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ದೆಹಲಿ ಜಲ ಮಂಡಳಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆಗೆ ಗೈರಾಗಿದ್ದಾರೆ. ಆಮ್ ಆದ್ಮಿ ಪಕ್ಷವು ಸಮನ್ಸ್ ಅನ್ನು 'ಕಾನೂನುಬಾಹಿರ' ಎಂದು ಬಣ್ಣಿಸಿದೆ.

ದೆಹಲಿ ಜಲ ಮಂಡಳಿ ಪ್ರಕರಣ: 'ನಕಲಿ' ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಇ.ಡಿ ಹೊಸ ಸಮನ್ಸ್; ಸಚಿವೆ ಅತಿಶಿ
ದೆಹಲಿ ಜಲ ಮಂಡಳಿಗೆ ಸಂಬಂಧಿಸಿದ 'ನಕಲಿ' ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಹೊಸ ಸಮನ್ಸ್ ಕಳುಹಿಸಿದೆ ಎಂದು ಎಎಪಿ ಹಿರಿಯ ನಾಯಕಿ ಮತ್ತು ದೆಹಲಿ ಸಚಿವೆ ಅತಿಶಿ ಭಾನುವಾರ ಹೇಳಿದ್ದಾರೆ.

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಹೊಸ ಸಮನ್ಸ್ ಜಾರಿ ಮಾಡಿದ ಇ.ಡಿ
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಹೊಸದಾಗಿ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.

ಬಿಜೆಪಿ ವಿರುದ್ಧ "40 ಪರ್ಸೆಂಟ್ ಕಮಿಷನ್" ಆರೋಪ: ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿಗೆ ಕೋರ್ಟ್ ಸಮನ್ಸ್
ಮಾರ್ಚ್ 28 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಸಿಟಿ ಕೋರ್ಟ್ ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.

ನವದೆಹಲಿ: ಏಳನೇ ಬಾರಿಗೆ ಕೇಜ್ರಿವಾಲ್ ಗೆ ಇಡಿ ಸಮನ್ಸ್!
ರದ್ದುಗೊಂಡಿರುವ ಮದ್ಯ ನೀತಿ ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಗುರುವಾರ ಏಳನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣ: ಆರನೇ ಬಾರಿಯ ಸಮನ್ಸ್ ಗೂ ಡೋಂಟ್ ಕೇರ್; ಇ.ಡಿ ವಿಚಾರಣೆಗೆ ಕೇಜ್ರಿವಾಲ್ ಗೈರು

ಸಮನ್ಸ್ ಸ್ಕಿಪ್ ಮಾಡಿದ ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಇಡಿ
ಈಗ ರದ್ದಾದ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಐದು ಬಾರಿ ಸಮನ್ಸ್ ಜಾರಿ ಮಾಡಿದರೂ ವಿಚಾರಣೆಗೆ ಹಾಜರಾಗದ ದೆಹಲಿ ಮುಖ್ಯಮಂತ್ರಿ ಅರವಿಂದ್...

ಫಾರೂಕ್ ಅಬ್ದುಲ್ಲಾಗೆ ಸಮನ್ಸ್: ಇಡಿ 'ಈಡಿಯಟ್' ಎಂದ ಅಧೀರ್ ರಂಜನ್ ಚೌಧರಿ!
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನಾಯಕ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾಗೆ ಸಮನ್ಸ್ ನೀಡಿರುವ ಕೇಂದ್ರೀಯ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯವನ್ನು 'ಈಡಿಯಟ್' ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಗುರುವಾರ ಕರೆದಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣ: ಮೂರನೇ ಬಾರಿಯೂ ಇ.ಡಿ ವಿಚಾರಣೆಗೆ ಅರವಿಂದ ಕೇಜ್ರಿವಾಲ್ ಗೈರು
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಇ.ಡಿ ನೀಡಿರುವ ಮೂರನೇ ಸಮನ್ಸ್‌ಗೆ ಲಿಖಿತ ಉತ್ತರ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವಿಚಾರಣೆಗೆ ಗೈರಾಗಿದ್ದು, ನೋಟಿಸ್ ಕಾನೂನುಬಾಹಿರ ಎಂದು ಹೇಳಿರುವುದಾಗಿ ಎಎಪಿ ಮೂಲಗಳು ತಿಳಿಸಿವೆ.

