ರಾಜಕೀಯನನಗೆ ಅಧಿಕಾರದಿಂದ ಕೆಳಗಿಳಿದ ಮೇಲೆಯೂ ಸಂತೋಷವಿದೆ; ಜನರ ಪ್ರೀತಿ, ವಿಶ್ವಾಸ ಸಿಕ್ಕಿದೆ: ಡಿವಿ ಸದಾನಂದ ಗೌಡ
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಪುನಾರಚನೆಯಾದ ಹಿನ್ನೆಲೆಯಲ್ಲಿ ವರಿಷ್ಠರ ಸೂಚನೆಯಂತೆ ರಸಗೊಬ್ಬರ ಮತ್ತು ರಾಸಾಯನಿಕ ಕೇಂದ್ರ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ ವಿ ಸದಾನಂದ ಗೌಡ ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದರು.