ದೇಶ'ದಿ ಕಾಶ್ಮೀರ್ ಫೈಲ್ಸ್' ವಿರುದ್ಧ ಐಎಫ್ ಎಫ್ಐ ಜ್ಯೂರಿ ಮುಖ್ಯಸ್ಥ ಅವಹೇಳನಕಾರಿ ಟೀಕೆ: ಸುಪ್ರೀಂ ಕೋರ್ಟ್ ವಕೀಲರಿಂದ ಕೇಸು ದಾಖಲು
'ದಿ ಕಾಶ್ಮೀರ್ ಫೈಲ್ಸ್' ಚಿತ್ರದ ಬಗ್ಗೆ ಜ್ಯೂರಿ ಮುಖ್ಯಸ್ಥರು ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ತೀವ್ರ ಟೀಕೆಗಳು ಕೇಳಿಬರುತ್ತಿರುವುದರ ಮಧ್ಯೆ ಸುಪ್ರೀಂ ಕೋರ್ಟ್ ನಲ್ಲಿ ಅಭ್ಯಾಸನಿರತ ವಕೀಲರೊಬ್ಬರು ಮಂಗಳವಾರ ಗೋವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.