Suresh Angadi

ಕೊರೋನಾ: ರೈಲ್ವೆ ಇಲಾಖೆಗೆ 10 ದಿನದಲ್ಲಿ 1, 390 ಕೋಟಿ ರೂ. ನಷ್ಟ- ಸುರೇಶ್ ಅಂಗಡಿ
ದೇಶಾದ್ಯಂತ ಮಾರಕ ಕೊರೋನಾ ಸೋಂಕಿನ ಕಾರಣ ರೈಲುಗಳ ಚುಕುಬುಕ್ ಸಪ್ಪಳ ನಿಂತಿದೆ ಪರಿಣಾಮ, 10 ದಿನಗಳ ಅವಧಿಯಲ್ಲಿ ಭಾರತೀಯ ರೈಲ್ವೆ ಇಲಾಖೆಗೆ 1, 390 ಕೋಟಿ ರೂಪಾಯಿ ನಷ್ಟವಾಗಿದೆ...

ಕೋರೋನಾ ವೈರಸ್: ಗ್ರಾಮೀಣ ಭಾಗದ ರೋಗಿಳಿಗೆ ಚಿಕಿತ್ಸೆ ಒದಗಿಸಲು ರೈಲ್ವೆ ಸಿದ್ಧ: ಸುರೇಶ್ ಅಂಗಡಿ
ಕೊರೋನಾ ವೈರಸ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯಲು ಸಾಧ್ಯವಾಗದ ಹಾಗೂ ರೈಲು ಸಂಪರ್ಕವಿರುವ ಗ್ರಾಮೀಣ ಭಾಗದ ಜನರಿಗೆ ಚಿಕಿತ್ಸೆ ಒದಗಿಸಲು ಇಲಾಖೆ ಸರ್ವ ಸನ್ನದ್ಧವಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ತಿಳಿಸಿದ್ದಾರೆ.

ಶಿವಮೊಗ್ಗ-ಚೆನ್ನೈ ರೈಲುಸೇವೆಗೆ ಸಿಎಂ ಯಡಿಯೂರಪ್ಪ ಚಾಲನೆ
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಿಂದ ಚೆನ್ನೈಗ ನೇರ ರೈಲು ಸೇವೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು. ಸಿಎಂ ಯಡಿಯೂರಪ್ಪ ಹುಟ್ಟುಹಬ್ಬದ ದಿನವೇ ಶಿವಮೊಗ್ಗ-ಚೆನ್ನೈ ರೈಲು ಸೇವೆ ಪ್ರಾರಂಭಿಸಲು ರೈಲ್ವೆ ಇಲಾಖೆ ಮುಂದಾಗಿರುವುದು ಗಮನಾರ್ಹ. ವಾರದಲ್ಲಿ ಎರಡು ದಿನ ಈ ವಿಶೇಷ ರೈಲು ಎರಡೂ ನಗರಗಳ ನಡುವೆ ಸಂಚರಿಸಲಿದೆ.

ದೇಶದ ಪ್ರತಿ ಕುಟುಂಬಕ್ಕೂ 2022ರ ವೇಳೆಗೆ ಸೂರು: ಸುರೇಶ್ ಅಂಗಡಿ
ದೇಶದ ಪ್ರತಿ ಕುಟುಂಬಕ್ಕೂ 2022ರ ವೇಳೆಗೆ ಸೂರು ಒದಗಿಸಲಾಗುವುದು ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಶನಿವಾರ ಹೇಳಿದ್ದಾರೆ.

ಪೌರತ್ವ ಕಿಚ್ಚು: ಸಾರ್ವಜನಿಕ ಆಸ್ತಿ ನಾಶಪಡಿಸಿದರೆ ಕಂಡಲ್ಲಿ ಗುಂಡಿಕ್ಕಿ, ಕೇಂದ್ರ ಸಚಿವ ಸುರೇಶ್ ಅಂಗಡಿ
ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು ಈ ಸಂದರ್ಭದಲ್ಲಿ ಸಾರ್ವಜನಿಕ ಆಸ್ತಿಗಳನ್ನು ನಾಪಡಿಸಿದರೆ ಕಂಡಲ್ಲಿ ಗುಂಡಿಕ್ಕಿ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ವಿವಾದಿತ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ- ಕೇಂದ್ರ ಸಚಿವ ಸುರೇಶ್ ಅಂಗಡಿ
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಲೇವಡಿ ಮಾಡಿದ್ದಾರೆ.

ಶತಮಾನದ ಇತಿಹಾಸ ಹೊಂದಿರುವ ದಾಂಡೇಲಿ-ಧಾರವಾಡ ರೈಲು ಮಾರ್ಗಕ್ಕೆ ಚಾಲನೆ
ಶತಮಾನದ ಇತಿಹಾಸ ಹೊಂದಿರುವ ಹಲವು ವರ್ಷಗಳಿಂದ ನಿಂತು ಹೋಗಿದ್ದ ದಾಂಡೇಲಿ-ಅಳ್ನಾವರ-ಧಾರವಾಡ ಪ್ರಯಾಣಿಕರ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಭಾನುವಾರ ಚಾಲನೆ ನೀಡಿದ್ದಾರೆ.

ಈಗ....ಕಿತ್ತೂರು ಹುಡುಗ, ಕಾಶ್ಮೀರಿ ಹೆಣ್ಣನ್ನು ಲಗ್ನವಾಗಬಹುದು..; ಕೇಂದ್ರ ರೈಲ್ವೆ ಸಚಿವ ಸುರೇಶ್ ಅಂಗಡಿ
ಜಮ್ಮು-ಕಾಶ್ಮೀರದ ವಿಶೇಷಾಧಿಕಾರ ರದ್ದುಪಡಿಸುವ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರವನ್ನು ಜನರು ಕ್ಷಿಪ್ರಗತಿಯಲ್ಲಿ ಸ್ವೀಕರಿಸಿದ್ದು, ಸರ್ಕಾರದ ಕ್ರಮ ಯಶಸ್ವಿಯಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ.

ವಿಜಯಪುರ- ಯಶವಂತಪುರ ನಡುವೆ ನೇರ ರೈಲಿಗೆ ಸಚಿವ ಸುರೇಶ್ ಅಂಗಡಿ ಹಸಿರು ನಿಶಾನೆ
ವಿಜಯಪುರದಿಂದ ಬೆಂಗಳೂರಿನ ಯಶವಂತಪುರ ನಡುವೆ ನೇರ ರೈಲು ಸೇವೆಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಸಿ ಅಂಗಡಿ ಅವರು ಹಸಿರು ನಿಶಾನೆ ತೋರಿದರು.

