Suresh kumar

ಶಾಲೆ ಪುನಾರಂಭ: ಎಸ್ ಡಿ ಎಂಸಿ, ಪೋಷಕರ ಜೊತೆ ಚರ್ಚಿಸಿ ತೀರ್ಮಾನ- ಸುರೇಶ್ ಕುಮಾರ್
ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಪುನರಾರಂಭಿಸುವ ಸಾಧಕ– ಬಾಧಕಗಳ ಕುರಿತು ಪೋಷಕರು ಮತ್ತು ಸಂಬಂಧಿಸಿದ ಪಾಲುದಾರರ ಸಭೆಗಳನ್ನು ಪ್ರತಿ ಶಾಲೆಯ ಮಟ್ಟದಲ್ಲಿ ಆಯೋಜಿಸಿ ಅಭಿಪ್ರಾಯ ಪಡೆಯಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಮಕ್ಕಳ ಸುರಕ್ಷತೆ, ಆತ್ಮವಿಶ್ವಾಸಕ್ಕೆ ಆದ್ಯತೆ: ಸುರೇಶ್ ಕುಮಾರ್
ಕೊರೊನಾ ಸಂಕಷ್ಟದ ನಡುವೆಯು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಮಕ್ಕಳ ಸುರಕ್ಷತೆ ಮತ್ತು ಆತ್ಮವಿಶ್ವಾಸಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಮಾರ್ಗಸೂಚಿ ಬಳಿಕ ನೂತನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್ ಪ್ರಕಟ: ಸಚಿವ ಸುರೇಶ್ ಕುಮಾರ್
ಕೇಂದ್ರದ ಮಾನವ ಸಂಪನ್ಮೂಲ ಸಚಿವಾಲಯ ಮಾರ್ಗಸೂಚಿಗಳನ್ನು ನೀಡಿದ ಬಳಿಕ ನೂತನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್'ನ್ನು ಪ್ರಕಟಗೊಳಿಸಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಜುಲೈ 8ಕ್ಕೆ ಪಿಯುಪಿ ಫಲಿತಾಂಶ, ಜುಲೈ ಅಂತ್ಯಕ್ಕೆ ಎಸ್ಎಸ್ಎಲ್'ಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್
ಲಾಕ್'ಡೌನ್ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಪಿಯುಸಿ ಇಂಗ್ಲೀಷ್ ಭಾಷೆ ಪರೀಕ್ಷೆಯನ್ನು ಜೂ.18ಕ್ಕೆ ನಡೆಸಿ, ಜು.8ರ ಆಸುಪಾಸಿನಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.

ಸುಗಮ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಶಿಕ್ಷಣ ಸಂಸ್ಥೆಗಳಿಗೆ ಸುರೇಶ್ ಕುಮಾರ್ ಪತ್ರ
ಕೊರೋನಾ ವೈರಸ್ ಸೊಂಕು ಹಿನ್ನೆಲೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆ ಸವಾಲಿನಿಂದ ಕೂಡಿದ್ದು, ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶಿಕ್ಷಣ ಸಂಸ್ಥೆಗಳಿಗೆ ಪತ್ರ ಬರೆದು ಮನವಿಮಾಡಿದ್ದಾರೆ.

ಪರ್ಯಾಯ ಶಿಕ್ಷಣ ವಿಧಾನದತ್ತ ಶಿಕ್ಷಣ ಇಲಾಖೆ ದೃಷ್ಟಿ: 3 ಶೈಕ್ಷಣಿಕ ವಾಹಿನಿ ತೆರೆಯಲು ಅನುಮತಿ ಕೋರಿ ಕೇಂದ್ರಕ್ಕೆ ಪತ್ರ
ಕೊರೋನಾ ಶಿಕ್ಷಣ ವಲಯದ ಮೇಲೆ ಭಾರೀ ಪರಿಣಾಮ ಬೀರಿದ್ದು, ಈ ಹಿನ್ನೆಲೆಯಲ್ಲಿ ಪರ್ಯಾಯ ಶಿಕ್ಷಣ ವಿಧಾನದತ್ತ ಮುಖ ಮಾಡಿರುವ ಶಿಕ್ಷಣ ಇಲಾಖೆ 3 ಶೈಕ್ಷಣಿಕ ವಾಹಿನಿಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮತಿಯನ್ನು ಕೋರಿದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ನಡೆಸದಂತೆ ಎಸ್.ಜಿ. ಸಿದ್ದರಾಮಯ್ಯ ಮನವಿ
ರಾಜ್ಯದಲ್ಲಿ ಕೊರೊನಾ ಸೋಂಕು ಗಂಭೀರ ಪ್ರಮಾಣದಲ್ಲಿ ಏರಿಕೆಯಾಗಿರುವ ಸದ್ಯದ ಪರಿಸ್ಥಿತಿಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳನ್ನು ನಡೆಸದಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿದ್ದರಾಮಯ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಚಿವ ಸುರೇಶ್‌ಕುಮಾರ್ ಪತ್ರ ಬರೆದು ಮನವಿ ಮಾಡಿದ್ದಾರೆ.

ವಾಟ್ಸಪ್ ಸಂದೇಶ ನೋಡಿ ಕನ್ನಡ ಶಾಲೆ ಉಳಿವಿಗೆ ಆಗಮಿಸಿದ ಸಚಿವ ಸುರೇಶ್ ಕುಮಾರ್
ವಾಟ್ಸಪ್ ಸಂದೇಶ ನೋಡಿ ಶಾಲೆ ಉಳಿವಿಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶತಮಾನದ ಇತಿಹಾಸ ಇರುವ ಸಕಲೇಶಪುರ ತಾಲ್ಲೂಕಿನ ದೇವಲಕೆರೆ ಶಾಲೆಗೆ ಇಂದು ಭೇಟಿ ನೀಡಿದರು.

ಮುಂದಿನ ವಾರದಿಂದ ಪೂರ್ಣ ಪ್ರಮಾಣದಲ್ಲಿ ದ್ವಿತೀಯ ಪಿಯು ಪರೀಕ್ಷಾ ಮೌಲ್ಯಮಾಪನ
ಮುಂದಿನ ವಾರದಿಂದ ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

